HOME » NEWS » Sports » CRICKET R ASHWIN CREATES NEW WORLD RECORD IN INDIA VS AUSTRALIA 2ND TEST IN MELBOURNE ZP

ಮುತ್ತಯ್ಯ ಮುರಳೀಧರನ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ಅಶ್ವಿನ್

ಆರ್​. ಅಶ್ವಿನ್ ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಮೂರನೇ ಸ್ಪಿನ್ನರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಕನ್ನಡಿಗ ಅನಿಲ್ ಕುಂಬ್ಳೆ (619) ಅಗ್ರಸ್ಥಾನದಲ್ಲಿದ್ದರೆ, ಹರ್ಭಜನ್ ಸಿಂಗ್(417) ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

news18-kannada
Updated:December 29, 2020, 5:05 PM IST
ಮುತ್ತಯ್ಯ ಮುರಳೀಧರನ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ಅಶ್ವಿನ್
R Ashwin
  • Share this:
ಮೆಲ್ಬೋರ್ನ್​ ಕ್ರಿಕೆಟ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ 8 ವಿಕೆಟ್​ಗಳಿಂದ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ 5 ವಿಕೆಟ್ ಕಬಳಿಸುವ ಮೂಲಕ ಆರ್​. ಅಶ್ವಿನ್ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅದರಲ್ಲೂ ದ್ವಿತೀಯ ಇನಿಂಗ್ಸ್​ನಲ್ಲಿ ಜೋಶ್ ಹ್ಯಾಝಲ್​ವುಡ್​ರನ್ನು ಕ್ಲೀನ್ ಬೌಲ್ಡ್ ಮಾಡಿ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದರು.

ಹೌದು, ಹ್ಯಾಝಲ್​ವುಡ್ ವಿಕೆಟ್ ಪಡೆಯುವುದರೊಂದಿಗೆ ಅಶ್ವಿನ್, ಟೆಸ್ಟ್​ ಕ್ರಿಕೆಟ್​ನಲ್ಲಿ ಗರಿಷ್ಠ ಎಡಗೈ ಬ್ಯಾಟ್ಸ್​ಮನ್​ಗಳನ್ನು ಔಟ್ ಮಾಡಿದ ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ಈ ದಾಖಲೆ ಸ್ಪಿನ್ ದಂತಕಥೆ ಮುತ್ತಯ್ಯ ಮುರಳೀಧರನ್ ಅವರ ಹೆಸರಿನಲ್ಲಿತ್ತು. ಮುರಳೀಧರನ್ 191 ಎಡಗೈ ಬ್ಯಾಟ್ಸ್​ಮನ್​ಗಳನ್ನು ಔಟ್ ಮಾಡಿದ್ದರೆ, ಅಶ್ವಿನ್ 192 ಎಡಗೈ ದಾಂಡಿಗರಿಗೆ ಪೆವಿಲಿಯನ್ ದಾರಿ ತೋರಿಸುವ ಮೂಲಕ ಹೊಸ ಮೈಲುಗಲ್ಲು ಸ್ಥಾಪಿಸಿದರು.

ಇನ್ನು ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಎಡಗೈ ಬ್ಯಾಟ್ಸ್​ಮನ್​ಗಳನ್ನು ಔಟ್ ಮಾಡಿದ ಬೌಲರುಗಳ ಪಟ್ಟಿಯಲ್ಲಿ ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್ಸನ್(186), ಆಸ್ಟ್ರೇಲಿಯಾ ವೇಗಿ ಗ್ಲೆನ್ ಮೆಕ್​ಗ್ರಾಥ್ (172), ಆಸ್ಟ್ರೇಲಿಯಾ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್(172) ಹಾಗೂ ಕನ್ನಡಿಗ ಅನಿಲ್ ಕುಂಬ್ಳೆ (167) ಸ್ಥಾನ ಪಡೆದಿದ್ದಾರೆ.ಇದಲ್ಲದೆ ಆರ್​. ಅಶ್ವಿನ್ ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಮೂರನೇ ಸ್ಪಿನ್ನರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಕನ್ನಡಿಗ ಅನಿಲ್ ಕುಂಬ್ಳೆ (619) ಅಗ್ರಸ್ಥಾನದಲ್ಲಿದ್ದರೆ, ಹರ್ಭಜನ್ ಸಿಂಗ್(417) ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು 73 ಟೆಸ್ಟ್ ಪಂದ್ಯಗಳಿಂದ 375 ವಿಕೆಟ್‌ಗಳನ್ನು ಕಬಳಿಸಿರುವ ಅಶ್ವಿನ್ ಮೂರನೇ ಸ್ಥಾನದಲ್ಲಿದ್ದಾರೆ.
Published by: zahir
First published: December 29, 2020, 5:05 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories