ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟಿ 20 ಸರಣಿಗೆ ಟೀಮ್ ಇಂಡಿಯಾ ಘೋಷಿಸಲಾಗಿದೆ. 19 ಸದಸ್ಯರ ಈ ಬಳಗದಲ್ಲಿ ಹರಿಯಾಣದ ಆಲ್‌ರೌಂಡರ್ ರಾಹುಲ್ ತಿವಾಠಿಯಾ ಆಯ್ಕೆಯಾಗಿದ್ದಾರೆ. ಆಯ್ಕೆಯ ಮರುದಿನವೇ, ವಿಜಯ ಹಜಾರೆ ಟ್ರೋಫಿಯಲ್ಲಿ ರಾಹುಲ್ ತಿವಾಠಿಯಾ ಅಬ್ಬರಿಸುವ ಮೂಲಕ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಹೌದು, ಕೋಲ್ಕತಾದಲ್ಲಿ ನಡೆದ ಚಂಡೀಗಢ ವಿರುದ್ಧದ ಪಂದ್ಯದಲ್ಲಿ ರಾಹುಲ್ ತಿವಾಠಿಯಾ ಕೇವಲ 39 ಎಸೆತಗಳಲ್ಲಿ 73 ರನ್ ಚಚ್ಚಿದ್ದಾರೆ. ಇದರಲ್ಲಿ 4 ಬೌಂಡರಿ ಹಾಗೂ 6 ಸಿಕ್ಸರ್ಗಳು ಒಳಗೊಂಡಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ