IND vs PAK| ಪಾಕ್ ವಿರುದ್ಧ ಭಾರತಕ್ಕೆ ಸೋಲು; ಸಂಭ್ರಮಾಚರಣೆ ಮಾಡಿದ ಶಿಕ್ಷಕಿ ಅಮಾನತು!

ಉದಯಪುರದ ನೀರಜಾ ಮೋದಿ ಶಾಲೆಯ ಶಿಕ್ಷಕಿ ನಫೀಸಾ ಅಟ್ಟಾರಿ ಅವರು ತಮ್ಮ ವಾಟ್ಸಾಪ್ ಸ್ಟೇಟಸ್‌ನಲ್ಲಿ ಪಾಕಿಸ್ತಾನಿ ಕ್ರಿಕೆಟ್ ಆಟಗಾರರ ಚಿತ್ರವನ್ನು ಹಾಕಿ ಜೀತ್ ಗಯೀ… ನಾವು ಗೆದ್ದಿದ್ದೇವೆ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಮಾಡಿ ಕೆಲಸ ಕಳೆದುಕೊಂಡಿದ್ದಾರೆ.

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

 • Share this:
  ಶ್ರೀನಗರ (ಅಕ್ಟೋಬರ್​ 26); ಭಾರತ ಮತ್ತು ಪಾಕಿಸ್ತಾನದ (India vs Pakistan) ವಿರುದ್ಧದ ವಿಶ್ವಕಪ್​ನ ಮೊದಲ ಟಿ20 (T20 world Cup) ಪಂದ್ಯಕ್ಕೆ ಇಡೀ ವಿಶ್ವವೇ ಕಾದಿತ್ತು. ಈ ಪಂದ್ಯದಲ್ಲೂ ಭಾರತವೇ ಗೆಲ್ಲುವ ಫೇವರಿಟ್ ಆಗಿತ್ತು. ಆದರೆ, ದುರಾದೃಷ್ಟವಶಾತ್​ ಈ ಪಂದ್ಯದಲ್ಲಿ ಭಾರತ ಸೋಲನುಭವಿಸಿತ್ತು. ಈ ವಿಚಾರ ಸಾಮಾನ್ಯವಾಗಿ ಕೋಟ್ಯಾಂತರ ಅಭಿಮಾನಿಗಳಿಗೆ ನಿರಾಸೆಗೆ ಕಾರಣವಾಗಿತ್ತು. ಆದರೆ, ಭಾರತದ ಸೋಲನ್ನು ಸಂಭ್ರಮಿಸಿ ವಾಟ್ಸಾಪ್​ ಪೋಸ್ಟ್​ (WhatsApp Status) ಹಾಕಿದ್ದ ಶಿಕ್ಷಕಿಯನ್ನು ಕೆಲಸದಿಂದ ಅಮಾನತುಗೊಳಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ತಾನ (Rajastan) ಉದಯಪುರದ (Udaypur) ಖಾಸಗಿ ಶಾಲೆಯ ಶಿಕ್ಷಕಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಜೊತೆಗೆ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

  ಭಾರತದ ಸೋಲನ್ನು ಸಂಭ್ರಮಿಸಿದ್ದ ಶಿಕ್ಷಕಿ:

  ಉದಯಪುರದ ನೀರಜಾ ಮೋದಿ ಶಾಲೆಯ ಶಿಕ್ಷಕಿ ನಫೀಸಾ ಅಟ್ಟಾರಿ ಅವರು ತಮ್ಮ ವಾಟ್ಸಾಪ್ ಸ್ಟೇಟಸ್‌ನಲ್ಲಿ ಪಾಕಿಸ್ತಾನಿ ಕ್ರಿಕೆಟ್ ಆಟಗಾರರ ಚಿತ್ರವನ್ನು ಹಾಕಿ ಜೀತ್ ಗಯೀ… ನಾವು ಗೆದ್ದಿದ್ದೇವೆ" ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಮಾಡಿದ್ದರು.

  ಶಿಕ್ಷಕಿ ನಫೀಸಾ ಅಟ್ಟಾರಿ ಅವರ ವಾಟ್ಸಾಪ್ ಸ್ಟೇಟಸ್‌ನ ಸ್ಕ್ರೀನ್‌ಶಾಟ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಶಾಲೆಯ ಆಡಳಿತ ಮಂಡಳಿ ಅವರನ್ನು ವಜಾಗೊಳಿಸಿದೆ. “ನಾವು ಶಿಕ್ಷಕಿಯನ್ನು ವಜಾಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ” ಎಂದು ಸೋಜಾಟಿಯಾ ಚಾರಿಟೇಬಲ್ ಟ್ರಸ್ಟ್‌ನ ಸಭೆಯ ಬಳಿಕ ಶಾಲೆಯ ಅಧ್ಯಕ್ಷ ಮಹೇಂದ್ರ ಸೋಜಾಟಿಯಾ ದೃಢಪಡಿಸಿದ್ದಾರೆ.

  ಶಿಕ್ಷಕಿ ವಿರುದ್ಧ ಎಫ್​ಐಆರ್​ ದಾಖಲು:

  ಭಾರತೀಯ ದಂಡ ಸಂಹಿತೆ 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ) ಅಡಿಯಲ್ಲಿ ಶಿಕ್ಷಕಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಂಬಾ ಮಾತಾ ಪೊಲೀಸ್ ಠಾಣೆ ಎಸ್‌ಎಚ್‌ಒ ನರ್ಪತ್ ಸಿಂಗ್ ಹೇಳಿದ್ದಾರೆ.

  ಘಟನೆ ತೀವ್ರ ಸ್ಪರೂಪ ಪಡೆದುಕೊಂಡ ಬಳಿಕ ಪೋಸ್ಟ್‌ಗಾಗಿ ಕ್ಷಮೆಯಾಚಿಸುವ ವೀಡಿಯೊ ಹೇಳಿಕೆಯನ್ನು ಶಿಕ್ಷಕಿ ಬಿಡುಗಡೆ ಮಾಡಿ, ಯಾರ ಭಾವನೆಯನ್ನು ನೋಯಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದರು.

  ಇದನ್ನೂ ಓದಿ: ಭಾರತದ ವಿರುದ್ಧದ ಪಾಕ್​ ಗೆಲುವಿಗೆ ಸಂಭ್ರಮ ಅರೋಪ; ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ವಿರುದ್ಧ UAPA ಕೇಸ್​!

  ಶಿಕ್ಷಕಿ ಹೇಳಿದ್ದೇನು?:

  "ಯಾರೋ ನನಗೆ ಸಂದೇಶ ಕಳುಹಿಸಿ ‘ನೀವು ಪಾಕಿಸ್ತಾನವನ್ನು ಬೆಂಬಲಿಸುತ್ತೀರಾ’ ಎಂದು ಕೇಳಿದರು. ಸಂದೇಶವು ಎಮೋಜಿಗಳನ್ನು ಹೊಂದಿದ್ದು ತಮಾಷೆಯಾಗಿತ್ತು ಅದಕ್ಕೆ, ನಾನು ‘ಹೌದು’ ಎಂದು ಉತ್ತರಿಸಿದೆ. ಆದರೆ, ನಾನು ಪಾಕಿಸ್ತಾನವನ್ನು ಬೆಂಬಲಿಸುತ್ತೇನೆ ಎಂದು ಅರ್ಥವಲ್ಲ. ನಾನು ಭಾರತೀಯಳು. ನಾನು ಭಾರತವನ್ನು ಪ್ರೀತಿಸುತ್ತೇನೆ. ನಾನು ತಪ್ಪು ಮಾಡಿದ್ದೇನೆ ಎಂದು ತಿಳಿದುಕೊಂಡ ತಕ್ಷಣ, ನಾನು ಸ್ಟೇಟಸ್ ಅಳಿಸಿದ್ದೇನೆ. ಯಾರ ಭಾವನೆಗಳನ್ನೆನಾದರೂ ನೋಯಿಸಿದ್ದರೆ ಕ್ಷಮಿಸಿ" ಶಿಕ್ಷಕಿ ತಮ್ಮ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

  ಇದನ್ನೂ ಓದಿ: Explained: ಅಫ್ಘಾನಿಸ್ತಾನದಲ್ಲಿ ಊಟಕ್ಕೂ ಹಾಹಾಕಾರ..! ತೀವ್ರವಾದ ಆಹಾರ ಅಭದ್ರತೆಗೆ ಕಾರಣ ಇಲ್ಲಿದೆ..

  ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ದುಕೊಂಡಿತು. ಪಾಕಿಸ್ತಾನದ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ಗಳು ತತ್ತರಿಸಿದರು. 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡ ಭಾರತ 151 ರನ್ ಪೇರಿಸಲಷ್ಟೇ ಸಾಧ್ಯವಾಯಿತು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಯಾವುದೇ ವಿಕೆಟ್ ನಷ್ಟವಿಲ್ಲದೆ 152 ರನ್ ಗಳಿಸಿ ಗೆಲುವು ದಾಖಲಿಸಿತ್ತು.
  Published by:MAshok Kumar
  First published: