ಮುಂದಿನ ಮೂರು ಪಂದ್ಯಗಳಿಗೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಡೌಟ್..!

2ನೇ ಪಂದ್ಯವನ್ನು ತಪ್ಪಿಸಿಕೊಂಡಿದ್ದರು. ಇದೀಗ 3ನೇ ಟಿ20 ಪಂದ್ಯದಿಂದಲೂ ಹೊರಗುಳಿಯಲಿದ್ದಾರೆ. ಅಷ್ಟೇ ಅಲ್ಲದೆ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲೂ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ.

Team india

Team india

 • Share this:
  ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಸೋಲಿನ ಸೇಡನ್ನು ಟೀಮ್ ಇಂಡಿಯಾ ಟಿ20 ಮೂಲಕ ತೀರಿಸಿಕೊಂಡಿದೆ. ಆರೋನ್ ಫಿಂಚ್ ಪಡೆ ಏಕದಿನ ಸರಣಿಯಲ್ಲಿ 2-1 ಅಂತರದಿಂದ ಟೀಮ್ ಇಂಡಿಯಾವನ್ನು ಸದೆಬಡಿದರೆ, ಇದೀಗ ಚುಟುಕು ಕದನದಲ್ಲಿ ಕೊಹ್ಲಿ ಪಡೆ 2-0 ಅಂತರದಿಂದ ಮುಂದಿದೆ. ಅಲ್ಲದೆ ಮಂಗಳವಾರ ನಡೆಯಲಿರುವ ಮೂರನೇ ಟಿ20 ಪಂದ್ಯವನ್ನು ಗೆಲ್ಲುವ ಮೂಲಕ ಆಸೀಸ್​ನ್ನು ವೈಟ್​ವಾಶ್ ಮಾಡುವ ತವಕದಲ್ಲಿದೆ ಟೀಮ್ ಇಂಡಿಯಾ.

  ಇತ್ತ ಮೊದಲ ಟಿ20 ಪಂದ್ಯದಲ್ಲಿ ಸ್ನಾಯು ಸೆಳೆತ ಹಾಗೂ ತಲೆಗೆ ಚೆಂಡು ಬಡಿದು ಗಾಯಗೊಂಡರೂ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ ಭಾರತದ ಗೆಲುವಿಗೆ ಕಾರಣರಾಗಿದ್ದ ರವೀಂದ್ರ ಜಡೇಜಾ, 2ನೇ ಪಂದ್ಯವನ್ನು ತಪ್ಪಿಸಿಕೊಂಡಿದ್ದರು. ಇದೀಗ 3ನೇ ಟಿ20 ಪಂದ್ಯದಿಂದಲೂ ಹೊರಗುಳಿಯಲಿದ್ದಾರೆ. ಅಷ್ಟೇ ಅಲ್ಲದೆ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲೂ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ.

  ಇದಕ್ಕೆ ಒಂದು ಕಾರಣ ಕನ್ಕುಷನ್ ನಿಯಮ ಎನ್ನಲಾಗುತ್ತಿದೆ. ಏಕೆಂದರೆ ಮೊದಲ ಟಿ20 ಪಂದ್ಯದಲ್ಲಿ ಗಾಯಗೊಂಡ ಜಡೇಜಾ ವಿಶ್ರಾಂತಿ ಪಡೆದು ಕನ್ಕುಷನ್ ನಿಯಮದಂತೆ ಬದಲಿ ಆಟಗಾರನಾಗಿ ಯಜುವೇಂದ್ರ ಚಹಲ್ ಕಣಕ್ಕಿಳಿದಿದ್ದರು. ಅಲ್ಲದೆ ಐಸಿಸಿ ಹೊಸ ನಿಯಮದಂತೆ ಬದಲಿ ಆಟಗಾರನಾಗಿ ಕಣಕ್ಕಿಳಿದ ಚಹಲ್ ಬೌಲಿಂಗ್ ಕೂಡ ಮಾಡಿದ್ದರು. ಆದರೆ ಇಲ್ಲಿ ಐಸಿಸಿಯ ಕನ್ಕುಶನ್ ನಿಯಮದ ಪ್ರಕಾರ ಗಾಯಗೊಂಡ ಆಟಗಾರನಿಗೆ 7 ರಿಂದ 10 ದಿನಗಳ ವಿಶ್ರಾಂತಿ ಕಡ್ಡಾಯವಾಗಿದೆ.

  ಹೀಗಾಗಿ ಸಿಡ್ನಿಯಲ್ಲಿ ನಡೆಯಲಿರುವ ಡೇ-ನೈಟ್ ಟೆಸ್ಟ್ ಅಭ್ಯಾಸ ಪಂದ್ಯಕ್ಕೂ ಜಡೇಜಾ ಅಲಭ್ಯರಾಗಲಿದ್ದಾರೆ. ಇನ್ನು ಅಭ್ಯಾಸವಿಲ್ಲದೆ ಹೊನಲು ಬೆಳಕಿನ ಮೊದಲ ಪಂದ್ಯದಲ್ಲಿ ಜಡೇಜಾ ಅವರನ್ನು ಕಣಕ್ಕಿಳಿಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ಮೂಲಗಳು ಹೇಳಿವೆ. ಹೀಗಾಗಿ ರವೀಂದ್ರ ಜಡೇಜಾ ಮೂರನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು ಎನ್ನಬಹುದು. 32ರ ಹರೆಯದ ರವೀಂದ್ರ ಜಡೇಜಾ ಟೀಮ್ ಇಂಡಿಯಾ ಪರ 49 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 1 ಶತಕ ಹಾಗೂ 18 ಅರ್ಧಶತಕಗಳೊಂದಿಗೆ 1869 ರನ್​ಗಳನ್ನು ಕಲೆಹಾಕಿದ್ದಾರೆ.

  ಇದನ್ನೂ ಓದಿ: 55 ಎಸೆತ, 5 ಬೌಂಡರಿ, 20 ಸಿಕ್ಸ್, ಸ್ಪೋಟಕ ಶತಕ: ಈ ಬ್ಯಾಟ್ಸ್​ಮನ್ ಮೇಲೆ ಕಣ್ಣಿಟ್ಟಿದೆ RCB..!
  Published by:zahir
  First published: