ಫೆಬ್ರವರಿ ತಿಂಗಳಲ್ಲಿ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ರವೀಂದ್ರ ಜಡೇಜಾ ಹೊರಗುಳಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ವೇಳೆ ಮಿಚೆಲ್ ಸ್ಟಾರ್ಕ್ ಎಸೆತದಲ್ಲಿ ರವೀಂದ್ರ ಜಡೇಜಾ ಬ್ಯಾಟಿಂಗ್ ಮಾಡುವಾಗ ಎಡಗೈ ಹೆಬ್ಬೆರಳಿಗೆ ಪೆಟ್ಟು ಮಾಡಿಕೊಂಡಿದ್ದರು. ಹೀಗಾಗಿ ಅವರನ್ನು ಸ್ಕ್ಯಾನ್ಗಾಗಿ ಕರೆದೊಯ್ಯಲಾಗಿತ್ತು. ಅಲ್ಲದೆ ಗಾಯದ ಗಂಭೀರತೆಯನ್ನು ಪರಿಗಣಿಸಿ ಜಡೇಜಾರನ್ನು ದ್ವಿತೀಯ ಇನಿಂಗ್ಸ್ನಲ್ಲಿ ಫೀಲ್ಡಿಂಗ್ಗೆ ಇಳಿಸಿರಲಿಲ್ಲ.
ಅಲ್ಲದೆ ಅಂತಿಮ ದಿನದ ಬ್ಯಾಟಿಂಗ್ಗೂ ರವೀಂದ್ರ ಜಡೇಜಾ ಅವರು ಕಣಕ್ಕಿಳಿಯಲಿಲ್ಲ. ಇದೀಗ ಜಡೇಜಾ ಅವರ ವೈದ್ಯಕೀಯ ರಿಪೋರ್ಟ್ ಬಂದಿದ್ದು, 6 ವಾರಗಳ ಕಾಲ ವಿಶ್ರಾಂತಿ ಸೂಚಿಸಲಾಗಿದೆ. ಅದರಂತೆ ಫೆಬ್ರವರಿ 5 ರಂದು ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ 4 ಪಂದ್ಯಗಳಿಗೂ ಜಡೇಜಾ ಅಲಭ್ಯರಾಗಲಿದ್ದಾರೆ.
ಈಗಾಗಲೇ ಇಂಗ್ಲೆಂಡ್ ವಿರುದ್ದದ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದಲ್ಲಿ ಗಾಯದ ಕಾರಣ ಜಡೇಜಾ ಅವರಿಗೆ ಸ್ಥಾನ ನೀಡಲಾಗಿರಲಿಲ್ಲ. ಇದಾಗ್ಯೂ ಮೂರನೇ ಮತ್ತು ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಜಡ್ಡು ಮರಳಲಿದ್ದಾರೆ ಎನ್ನಲಾಗಿತ್ತು. ಆದರೀಗ ಗಾಯ ವಾಸಿಯಾಗಲು 6 ವಾರಗಳ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದಾಗ್ಯೂ ಇಂಗ್ಲೆಂಡ್ ವಿರುದ್ಧದ ಏಕದಿನ ಹಾಗೂ ಟಿ20 ಸರಣಿ ವೇಳೆ ಗುಣಮುಖರಾಗಿ ಜಡೇಜಾ ಮರಳುವ ವಿಶ್ವಾಸದಲ್ಲಿದ್ದಾರೆ.
ಇನ್ನು ಆಸ್ಟ್ರೇಲಿಯಾ ವಿರುದ್ಧದ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ಬಳಿಕ ಪಿತೃತ್ವ ರಜೆ ತೆಗೆದುಕೊಂಡಿದ್ದ ನಾಯಕ ವಿರಾಟ್ ಕೊಹ್ಲಿ ಮತ್ತೆ ತಂಡಕ್ಕೆ ಮರಳಿದ್ದಾರೆ. ಇನ್ನು ಗಾಯದ ಸಮಸ್ಯೆಯಿಂದ ಆಸ್ಟ್ರೇಲಿಯಾ ವಿರುದ್ಧದ ಸರಣಿ ತಪ್ಪಿಸಿಕೊಂಡಿದ್ದ ಇಶಾಂತ್ ಶರ್ಮಾ ಕೂಡ ತಂಡಕ್ಕೆ ವಾಪಾಸ್ ಆಗಿದ್ದಾರೆ. ಅಲ್ಲದೆ ಆಲ್ರೌಂಡರ್ ಆಗಿ ಹಾರ್ದಿಕ್ ಪಾಂಡ್ಯ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೀನಾಯ ಪ್ರದರ್ಶನ ನೀಡಿದ್ದ ಪೃಥ್ವಿ ಶಾ ಅವರಿಗೆ ಗೇಟ್ ಪಾಸ್ ನೀಡಲಾಗಿದ್ದು, ಹಾಗೆಯೇ ಆಸೀಸ್ ವಿರುದ್ದ ತಂಡದಲ್ಲಿ ಸ್ಥಾನದಲ್ಲಿ ಪಡೆದಿದ್ದ ನವದೀಪ್ ಸೈನಿ ಹಾಗೂ ನಟರಾಜನ್ ಅವರನ್ನು ಸಹ ಕೈ ಬಿಡಲಾಗಿದೆ. ಇನ್ನು ಗಾಯಗೊಂಡಿರುವ ಮೊಹಮ್ಮದ್ ಶಮಿ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ.
ಟೆಸ್ಟ್ ಸರಣಿ ಪೂರ್ಣ ವೇಳಾಪಟ್ಟಿ:
1ನೇ ಟೆಸ್ಟ್, ಚೆನ್ನೈ: ಫೆಬ್ರವರಿ 5 ರಿಂದ 92ನೇ ಟೆಸ್ಟ್, ಚೆನ್ನೈ: ಫೆಬ್ರವರಿ 13 ರಿಂದ 17
3ನೇ ಟೆಸ್ಟ್, ಅಹಮದಾಬಾದ್ (ಹಗಲು ರಾತ್ರಿ): ಫೆಬ್ರವರಿ 24 ರಿಂದ 28 ರವರೆಗೆ
4ನೇ ಟೆಸ್ಟ್, ಅಹಮದಾಬಾದ್: ಮಾರ್ಚ್ 4 ರಿಂದ 8ಇಂಗ್ಲೆಂಡ್ ವಿರುದ್ದದ ಮೊದಲೆರಡು ಟೆಸ್ಟ್ಗೆ ಟೀಮ್ ಇಂಡಿಯಾ ಹೀಗಿದೆ:
ಆರಂಭಿಕರು: ರೋಹಿತ್ ಶರ್ಮಾ, ಶುಭ್ಮನ್ ಗಿಲ್, ಮಯಾಂಕ್ ಅಗರ್ವಾಲ್
ಮಧ್ಯಮ ಕ್ರಮಾಂಕ: ವಿರಾಟ್ ಕೊಹ್ಲಿ (ನಾಯಕ), ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್, ವೃದ್ಧಿಮಾನ್ ಸಹಾ, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ (ಫಿಟ್ನೆಸ್ ಬಳಿಕ ಆಯ್ಕೆ)
ವೇಗದ ಬೌಲರ್ಗಳು: ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್.
ಸ್ಪಿನ್ನರ್ ಗಳು: ಆರ್.ಅಶ್ವಿನ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್
ಸ್ಟ್ಯಾಂಡ್ ಬೈ ಆಟಗಾರರು: ಕೆ.ಎಸ್.ಭರತ್ (ವಿಕೆಟ್ ಕೀಪರ್), ಅಭಿಮನ್ಯು ಈಶ್ವರನ್, ಶಹಬಾಜ್ ನದೀಮ್, ರಾಹುಲ್ ಚಾಹರ್.
ನೆಟ್ ಬೌಲರ್ಗಳು: ಅಂಕಿತ್ ರಜಪೂತ್, ಅವೇಶ್ ಖಾನ್, ಸಂದೀಪ್ ವಾರಿಯರ್.