Ravindra Jadeja: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಧೋನಿ ದಾಖಲೆ ಮುರಿದ ರವೀಂದ್ರ ಜಡೇಜಾ

India vs Australia: ಭರ್ಜರಿ ಬ್ಯಾಟಿಂಗ್​ನೊಂದಿಗೆ ಜಡೇಜಾ ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದ್ದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು.

Ravindra Jadeja

Ravindra Jadeja

  • Share this:
    ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ 11 ರನ್​ಗಳ ರೋಚಕ  ಜಯ ಸಾಧಿಸಿದೆ. ಇದಕ್ಕೂ ಮುನ್ನ ಟಾಸ್ ಸೋತರು ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಟೀಮ್ ಇಂಡಿಯಾ ಆರಂಭ ಉತ್ತಮವಾಗಿರಲಿಲ್ಲ. ಮೂರನೇ ಓವರ್​ನಲ್ಲೇ 1 ರನ್​ಗಳಿಸಿ ಶಿಖರ್ ಧವನ್ ವಿಕೆಟ್ ಒಪ್ಪಿಸಿದ್ದರು. ಆ ಬಳಿಕ ಬಂದ ಕೊಹ್ಲಿ (9) ಕೂಡ ಹೆಚ್ಚು ಹೊತ್ತು ನಿಲ್ಲಲಿಲ್ಲ. ಆದರೆ ಮತ್ತೊಂದೆಡೆ ಕೆಎಲ್ ರಾಹುಲ್ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. ಆದರೆ 14ನೇ ಓವರ್​ನಲ್ಲಿ ವಿಕೆಟ್ ಒಪ್ಪಿಸಿ ಹೊರನಡೆದು ನಿರಾಸೆ ಮೂಡಿಸಿದರು.

    ಈ ಹಂತದಲ್ಲಿ ಜೊತೆಗೂಡಿದ ಹಾರ್ದಿಕ್ ಪಾಂಡ್ಯ-ರವೀಂದ್ರ ಜಡೇಜಾ ಅಂತಿಮ ಓವರ್​ಗಳಲ್ಲಿ ಬಿಗ್ ಹಿಟ್​ಗೆ ಪ್ಲ್ಯಾನ್ ಮಾಡಿಕೊಂಡಿದ್ದರು. ಆದರೆ ಹೆನ್ರಿಕ್ಸ್ ಎಸೆತದಲ್ಲಿ 16 ರನ್​ಗಳಿಸಿದ್ದ ಪಾಂಡ್ಯ ಔಟಾದರು. ಆದರೆ ಮತ್ತೊಂದೆಡೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ರವೀಂದ್ರ ಜಡೇಜಾ 1 ಸಿಕ್ಸರ್ ಹಾಗೂ 5 ಬೌಂಡರಿಗಳೊಂದಿಗೆ 23 ಎಸೆತಗಳಲ್ಲಿ 44 ರನ್ ಚಚ್ಚಿದರು. ಪರಿಣಾಮ ಟೀಮ್ ಇಂಡಿಯಾ ನಿಗದಿತ 20 ಓವರ್​ನಲ್ಲಿ 7 ವಿಕೆಟ್ ನಷ್ಟಕ್ಕೆ 161 ರನ್ ಪೇರಿಸುವಂತಾಯಿತು.

    ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ಜಡೇಜಾ ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದ್ದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಹೌದು, ಟಿ20 ಪಂದ್ಯದಲ್ಲಿ 7ನೇ ಅಥವಾ ಅದಕ್ಕಿಂತಲೂ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಿ ಅತಿ ಹೆಚ್ಚಿನ ರನ್ ಬಾರಿಸಿದ ಟೀಮ್ ಇಂಡಿಯಾ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಜಡ್ಡು ನಿರ್ಮಿಸಿದ್ದಾರೆ.

    ಇದಕ್ಕೂ ಮುನ್ನ 2012 ರಲ್ಲಿ ಇಂಗ್ಲೆಂಡ್ ವಿರುದ್ಧ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಟಿ20 ಪಂದ್ಯದಲ್ಲಿ 7ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಮಹೇಂದ್ರ ಸಿಂಗ್ ಧೋನಿ 18 ಎಸೆತಗಳಲ್ಲಿ 38 ರನ್ ಬಾರಿಸಿದ್ದು ದಾಖಲೆಯಾಗಿತ್ತು. ಇದೀಗ ಈ ದಾಖಲೆಯನ್ನು ರವೀಂದ್ರ ಜಡೇಜಾ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

    ಇದನ್ನೂ ಓದಿ: 55 ಎಸೆತ, 5 ಬೌಂಡರಿ, 20 ಸಿಕ್ಸ್, ಸ್ಪೋಟಕ ಶತಕ: ಈ ಬ್ಯಾಟ್ಸ್​ಮನ್ ಮೇಲೆ ಕಣ್ಣಿಟ್ಟಿದೆ RCB..!
    Published by:zahir
    First published: