ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಆಟಗಾರರ ಗಾಯದ ಸಮಸ್ಯೆ ಮುಂದುವರೆದಿದೆ. 3ನೇ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾ ಆಲ್ರೌಂಡರ್ ರವೀಂದ್ರ ಜಡೇಜಾ ಕೂಡ ಗಾಯಗೊಂಡಿದ್ದರು. ಹಾಗೆಯೇ ಭಾರತ ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸುತ್ತಿದ್ದ ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ ಕಿಬ್ಬೊಟ್ಟೆಯ ಒತ್ತಡದಿಂದ ಬಳಲುತ್ತಿದ್ದಾರೆ. ಇನ್ನು ಆರ್. ಅಶ್ವಿನ್ ಕೂಡ ಗಾಯದಿಂದ ಚೇತರಿಸಿಕೊಂಡಿಲ್ಲ. ಹೀಗಾಗಿ 4ನೇ ಟೆಸ್ಟ್ನಲ್ಲಿ ವಾಷಿಂಗ್ಟನ್ ಸುಂದರ್, ಟಿ. ನಟರಾಜನ್ ಹಾಗೂ ಶಾರ್ದುಲ್ ಠಾಕೂರ್ ಸ್ಥಾನ ಪಡೆದಿದ್ದರು.
ಅನಾನುಭವಿ ಆಟಗಾರರೊಂದಿಗೆ ಕಣಕ್ಕಿಳಿದ ಟೀಮ್ ಇಂಡಿಯಾಗೆ ಮತ್ತೆ ಗಾಯದ ಸಮಸ್ಯೆ ಎದುರಾಗಿದೆ. ಹೌದು, ತಂಡದಲ್ಲಿದ್ದ ನವದೀಪ್ ಸೈನಿ ಸಹ ಗಾಯಗೊಂಡು ಅರ್ಧದಲ್ಲೇ ಮೈದಾನ ತೊರೆದಿದ್ದಾರೆ. ಈ ವೇಳೆ ಸೈನಿಯ ಓವರ್ನ್ನು ಪೂರ್ತಿಗೊಳಿಸಲು ರೋಹಿತ್ ಶರ್ಮಾ ಚೆಂಡೆತ್ತಿಕೊಂಡರು. ಸಾಮಾನ್ಯವಾಗಿ ಆಫ್ ಸ್ಪಿನ್ ಬೌಲಿಂಗ್ ಮಾಡುವ ಹಿಟ್ಮ್ಯಾನ್ ಈ ಬಾರಿ ಮಧ್ಯಮ ವೇಗದಲ್ಲಿ ಬೌಲಿಂಗ್ ಮಾಡಿ ಗಮನ ಸೆಳೆದರು.
ರೋಹಿತ್ ಶರ್ಮಾ ಕೇವಲ ಒಂದು ಎಸೆತವನ್ನು ಎಸೆದರೂ ಅದರ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಈ ಬೌಲಿಂಗ್ ವಿಡಿಯೋವನ್ನು ಕ್ರಿಕೆಟ್ ಆಸ್ಟ್ರೇಲಿಯಾ ಕೂಡ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದೆ.
Into the attack: Rohit Sharma from the Vulture St End! 🔥
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮಾರ್ನಸ್ ಲಾಬುಶೇನ್ ಅವರ ಆಕರ್ಷಕ ಶತಕದ ನೆರವಿನಿಂದ ಮೊದಲ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 274 ರನ್ ಗಳಿಸಿದೆ. ಟೆಸ್ಟ್ ಕ್ರಿಕೆಟ್ ಆಡಿದ ಅನುಭವ ಇಲ್ಲದ ಯುವ ವೇಗಿಗಳನ್ನು ಇಟ್ಟುಕೊಂಡು ಕಣಕ್ಕಿಳಿದ ಭಾರತ ಕೂಡ ಆಸೀಸ್ನ 5 ಪ್ರಮುಖ ವಿಕೆಟ್ ಕಿತ್ತು ಉತ್ತಮ ಪ್ರದರ್ಶನ ತೋರುವಲ್ಲಿ ಯಶಸ್ವಿಯಾಗಿದೆ.
Published by:zahir
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ