Shikhar Dhawan: ಶಿಖರ್ ಧವನ್ ವಿಶ್ವಕಪ್​ನಿಂದ ಹೊರಕ್ಕೆ; ಟೀಂ ಇಂಡಿಯಾಕ್ಕೆ ಮತ್ತೊಂದು ಆಘಾತ!

Shikhar Dhawan: ಕಳೆದ ಆಸ್ಟ್ರೇಲಿಯಾ ಪಂದ್ಯದ ವೇಳೆ ಎಡಗೈ ಹೆಬ್ಬರಳಿಗೆ ಧವನ್ ಗಾಯ ಮಾಡಿಕೊಂಡಿದ್ದರು. ಬಳಿಕ ವೈದ್ಯಾಧಿಕಾರಿಗಳು ಪರೀಕ್ಷೆ ನಡೆಸಿದ್ದು ಮೂರು ವಾರಗಳ ಕಾಲ ವಿಶ್ರಾಂತಿ ಅಗ್ಯವಿದೆ ಎಂದು ಹೇಳಿದ್ದಾರೆ. 

ಇಂಜುರಿಗೆ ತುತ್ತಾದ ಶಿಖರ್ ಧವನ್

ಇಂಜುರಿಗೆ ತುತ್ತಾದ ಶಿಖರ್ ಧವನ್

  • News18
  • Last Updated :
  • Share this:
ಬೆಂಗಳೂರು (ಜೂ. 19): ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ತೋರುತ್ತಿದೆ ಎಂಬೊತ್ತಿಗೆ ತಂಡಕ್ಕೆ ದೊಡ್ಡ ಆಘಾತ ಉಂಟಾಗಿದೆ. ಆರಂಭಿಕ ಆಟಗಾರ ಶಿಖರ್ ಧವನ್ ಇಂಜುರಿಯಿಂದಾಗಿ ವಿಶ್ವಕಪ್​ನಿಂದಲೇ ಹೊರಗುಳಿದಿದ್ದಾರೆ.

ಧವನ್ ಬದಲು ಭಾರತದ ವಿಶ್ವಕಪ್ ತಂಡದ 15 ಆಟಗಾರರ ಜಾಗದಲ್ಲಿ ರಿಷಭ್ ಪಂತ್ ಸ್ಥಾನ ಪಡೆದುಕೊಂಡಿದ್ದಾರೆ. ಈ ಬಗ್ಗೆ ಟೀಂ ಇಂಡಿಯಾ ಮ್ಯಾನೇಜರ್ ಸುನಿಲ್ ಸುಭ್ರಮಣಿಯಂ ಸ್ಪಷ್ಟ ಪಡಿಸಿದ್ದಾರೆ.

 



ಕಳೆದ ಆಸ್ಟ್ರೇಲಿಯಾ ಪಂದ್ಯದ ವೇಳೆ ಎಡಗೈ ಹೆಬ್ಬರಳಿಗೆ ಧವನ್ ಗಾಯ ಮಾಡಿಕೊಂಡಿದ್ದರು. ಬಳಿಕ ವೈದ್ಯಾಧಿಕಾರಿಗಳು ಪರೀಕ್ಷೆ ನಡೆಸಿದ್ದು ಮೂರು ವಾರಗಳ ಕಾಲ ವಿಶ್ರಾಂತಿ ಅಗ್ಯವಿದೆ ಎಂದು ಹೇಳಿದ್ದರು. ಬೆರಳಿಗೆ ಆಗಿರುವ ಗಾಯದ ಪ್ರಮಾಣವನ್ನು ಪತ್ತೆ ಹಚ್ಚಲು ಸ್ಕಾನಿಂಗ್ ಮಾಡಲಾಗಿತ್ತು. ಇದಾದ ಬಳಿಕ ಬಂದ ವರದಿ ಪರಿಶೀಲಿಸಿದ ವೈದ್ಯರು, ಧವನ್​ಗೆ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದರು.

ಹೀಗಾಗಿ ಧವನ್​ಗೆ ಮೂರು ವಾರಗಳ ಕಾಲ ವಿಶ್ವಕಪ್​ನಿಂದ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಊ ಹೇಳಿತ್ತು. ಆದರೆ ಸದ್ಯ ಬಂದಿರುವ ಮಾಹಿತಿ ಪ್ರಕಾರ ಧವನ್ ವಿಶ್ವಕಪ್​ನಿಂದಲೇ ಹೊರಬಿದ್ದಿದ್ದು, ಇವರ ಸ್ಥಾನಕ್ಕೆ ರಿಷಭ್ ಪಂತ್​ರನ್ನು ಆಯ್ಕೆ ಮಾಡಲಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ವೇಳೆ ವೇಗಿ ಪ್ಯಾಟ್ ಕಮಿನ್ಸ್​ ಬೌಲಿಂಗ್ ಮಾಡುವಾಗ ಆಕಸ್ಮಿಕವಾಗಿ ಚೆಂಡು ಧವನ್ ಕೈಬೆರಳಿಗೆ ಬಡಿದು ಗಾಯಗೊಂಡಿದ್ದರು. ನೋವಿನಲ್ಲೂ 109 ಎಸೆತಗಳಲ್ಲಿ 117 ರನ್ ಸಿಡಿಸಿ ಔಟಾಗಿದ್ದ ಧವನ್, ನಂತರ ಫೀಲ್ಡಿಂಗ್​​ಗೆ ಬಂದಿರಲಿಲ್ಲ.
First published: