ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಹಾಗೂ ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಶನಿವಾರ ಹೃದಯಾಘಾತ ಸಂಭವಿಸಿದ ಕಾರಣ ಅವರನ್ನ ಕೋಲ್ಕತ್ತಾದ ವುಡ್ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಗಂಗೂಲಿ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು ಜನವರಿ 6 ರಂದು ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಆಯಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಯ ಬಳಿಕ ಗಂಗೂಲಿ ಸಂಪೂರ್ಣ ಪ್ರಜ್ಞಾ ಸ್ಥಿತಿಗೆ ಬಂದಿದ್ದಾರೆ ಎಂದು ಕೋಲ್ಕತ್ತಾದ ವುಡ್ಲ್ಯಾಂಡ್ ಆಸ್ಪತ್ರೆಯ ವೈದ್ಯ ಡಾ. ಅಫ್ತಾಬ್ ಖಾನ್ ಹೇಳಿದ್ದಾರೆ. ಶನಿವಾರ ಮುಂಜಾನೆ ಜಿಮ್ನಲ್ಲಿ ಅಭ್ಯಾಸ ಮಾಡುತ್ತಿದ್ದಾಗ ಗಂಗೂಲಿಗೆ ಹೃದಯಬೇನೆ ಕಾಣಿಸಿಕೊಂಡು ಹೃದಯಾಘಾತವಾಗಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯ್ತು.
ಖ್ಯಾತ ಹೃದಯ ಸರ್ಜನ್ ಡಾ. ದೇವಿ ಶೆಟ್ಟಿ ಅವರು ಆಸ್ಪತ್ರೆಯಲ್ಲಿರುವ ಗಂಗೂಲಿ ಅವರನ್ನು ಭೇಟಿ ಮಾಡಿದ್ದು, ಬುಧವಾರ ಡಿಸ್ಚಾರ್ಜ್ ಮಾಡಲಾಗುವುದು ಎಂದು ಬಿಸಿಸಿಐ ಅಧ್ಯಕ್ಷರಿಗೆ ಚಿಕಿತ್ಸೆ ನೀಡುತ್ತಿರುವ ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ.
BBL 10: ಇಡೀ ಪಂದ್ಯದ ಚಿತ್ರಣ ಬದಲಿಸಿದ ಎರಡು ಅದ್ಭುತ ಕ್ಯಾಚ್ಗಳು..!
ಇನ್ನೂ ಸೌರವ್ ಗಂಗೂಲಿ ಅವರ ಮುಂದಿನ ಚಿಕಿತ್ಸೆಯ ಕುರಿತು ಚರ್ಚಿಸಲು ಒಂಬತ್ತು ಸದಸ್ಯರ ವೈದ್ಯಕೀಯ ಮಂಡಳಿಯನ್ನು ರಚಿಸಲಾಗಿದೆ. ಭಾನುವಾರ ಮಧ್ಯಾಹ್ನ 3 ಗಂಟೆಗೆ ಕೊರೊನರಿ ಆಂಜಿಯೋಗ್ರಫಿ ಮಾಡಲಾಗಿತ್ತು. ಅಲ್ಲದೇ ಅವರನ್ನು ಮಂಗಳವಾರ ಬಿಡುಗಡೆ ಮಾಡುವುದಾಗಿ ತಿಳಿಸಿದ್ದ ಆಸ್ಪತ್ರೆ, ಇದೀಗ ಒಂದು ದಿನ ತಡವಾಗಿ ಬಿಡುಗಡೆ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದೆ.
Shoaib Akhtar: ಪಾಕ್ ವೇಗಿಗೆ ಹೆದರಿ ಎಬಿಡಿ ಕಣ್ಣೀರಿಟ್ಟಿದ್ದರು..!
48 ವರ್ಷದ ಗಂಗೂಲಿ ಅವರ ಕೊರೋನಾ ಟೆಸ್ಟ್ ಮಾಡಿಸಲಾಗಿತ್ತು. ಇದರಲ್ಲಿ ವರದಿ ನೆಗೆಟಿವ್ ಬಂದಿದೆ ಎಂದು ಆಸ್ಪತ್ರೆ ಮಾಹಿತಿ ನೀಡಿದೆ. ಗಂಗೂಲಿ ಅವರು ಹೃದಯ ವಂಶಾವಳಿಯಿಂದ ವರ್ಗಾವಣೆಯಾಗಿರುವ ಹೃದಯ ಸಮಸ್ಯೆ ಹೊಂದಿದ್ದಾರೆ, ಅವರು ಶನಿವಾರ ಮಧ್ಯಾಹ್ನ 1 ಗಂಟೆಗೆ ಆಸ್ಪತ್ರೆಗೆ ಬಂದಾಗ ಅವರ ನಾಡಿಮಿಡಿತ ನಿಮಿಷಕ್ಕೆ 70 ಬಾರಿ ಬಡಿಯುತ್ತಿತ್ತು. ಬಿಪಿ 130/80 ಎಂಎಂ ಹೆಚ್ಡಿ ಇತ್ತು. ಇಸಿಜಿ ಪರೀಕ್ಷೆಯಲ್ಲಿ ಹೈಪರ್ ಅಕ್ಯೂಟ್ ಎಸ್ಟಿ ವಿಭಾಗದಲ್ಲಿ ಏರುಪೇರಿರುವುದು ಪತ್ತೆಯಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ