Virat Kohli: ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿ ಆಯ್ಕೆ ಬಗ್ಗೆ ಕೊಹ್ಲಿ ಬೇಸರ..!

ಕೊನೆಯ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್​ನಲ್ಲಿ 30 ರನ್ ಬಾರಿಸಿ, ಬೌಲಿಂಗ್​ನಲ್ಲಿ 4 ವಿಕೆಟ್ ಕಬಳಿಸಿದ ಶಾರ್ದುಲ್ ಠಾಕೂರ್ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

Virat kohli

Virat kohli

 • Share this:
  ಭಾರತ-ಇಂಗ್ಲೆಂಡ್ ನಡುವಣ ಅಂತಿಮ ಏಕದಿನ ಪಂದ್ಯವು 7 ರನ್​ಗಳ ರೋಚಕ ಜಯದೊಂದಿಗೆ ಟೀಮ್ ಇಂಡಿಯಾ ಪಾಲಾಗಿದೆ. ಈ ಮೂಲಕ ವಿರಾಟ್ ಕೊಹ್ಲಿ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಅಲ್ಲದೆ, ಇಂಗ್ಲೆಂಡ್​ ವಿರುದ್ಧ (ಟೆಸ್ಟ್, ಟಿ20 ಹಾಗೂ ಏಕದಿನ ಸರಣಿ) ಹ್ಯಾಟ್ರಿಕ್ ಸರಣಿ ಗೆಲುವು ದಾಖಲಿಸಿದೆ.

  ಈ ಗೆಲುವಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಪಂದ್ಯ ಶ್ರೇಷ್ಠ ಪ್ರಶಸ್ತಿ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಗಳ ಆಯ್ಕೆ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಇಂಗ್ಲೆಂಡ್​ ವಿರುದ್ಧದ ಕೊನೆಯ ಏಕದಿನದಲ್ಲಿ ಟೀಮ್ ಇಂಡಿಯಾ ಬೌಲರುಗಳು ಉತ್ತಮ ಪ್ರದರ್ಶನ ನೀಡಿದ್ದರು. ಶಾರ್ದುಲ್ ಠಾಕೂರ್ 67 ರನ್​ ನೀಡಿ 4 ವಿಕೆಟ್ ಕಬಳಿಸಿದರೆ, ಭುವನೇಶ್ವರ್ ಕುಮಾರ್ 42 ಕ್ಕೆ 3 ವಿಕೆಟ್ ಉರುಳಿಸಿ ಮಿಂಚಿದ್ದರು. ಅಲ್ಲದೆ ಶಾರ್ದುಲ್ ಬ್ಯಾಟಿಂಗ್ ಮೂಲಕ 30 ರನ್​ಗಳ ಉಪಯುಕ್ತ ಕಾಣಿಕೆ ನೀಡಿದ್ದರು.

  ಇದಾಗ್ಯೂ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸ್ಯಾಮ್ ಕರ್ರನ್ ಅವರಿಗೆ ನೀಡಲಾಗಿತ್ತು. ಅಲ್ಲದೆ ಸರಣಿ ಶ್ರೇಷ್ಠ ಪ್ರಶಸ್ತಿಯು ಜಾನಿ ಬೈರ್​ಸ್ಟೋವ್ ಪಾಲಾಗಿತ್ತು. ಈ ಬಗ್ಗೆ ಮಾತನಾಡಿದ ಕೊಹ್ಲಿ, ಶಾರ್ದುಲ್, ಭುವಿ ಅತ್ಯುತ್ತಮ ಪ್ರದರ್ಶನ ನೀಡಿದರೂ, ಅವರಿಗೆ ಪ್ರಶಸ್ತಿ ಸಿಗದಿರುವುದು ಆಶ್ಚರ್ಯ ಉಂಟು ಮಾಡಿದೆ ಎಂದಿದ್ದಾರೆ.

  ನಾಲ್ಕು ವಿಕೆಟ್‌ ಮತ್ತು 30 ರನ್‌ಗಳನ್ನು ಬಾರಿಸಿ ಶಾರ್ದುಲ್​ಗೆ ಮ್ಯಾನ್ ಆಫ್ ದಿ ಮ್ಯಾಚ್ ನೀಡಿಲ್ಲ. ಹಾಗೆಯೇ ಮ್ಯಾನ್ ಆಫ್ ದಿ ಸೀರೀಸ್‌ನಲ್ಲಿ ಭುವಿ ಪ್ರಬಲ ಸ್ಪರ್ಧಿಯಾಗಿದ್ದರು. ಮಿಡಲ್ ಓವರ್‌ಗಳು ಮತ್ತು ಪವರ್‌ಪ್ಲೇನಲ್ಲಿ ವ್ಯತ್ಯಾಸವಿತ್ತು. ಪ್ರತಿಕೂಲ ಪರಿಸ್ಥಿತಿಗಳಲ್ಲಿ ಉತ್ತಮವಾಗಿ ಬೌಲಿಂಗ್ ಮಾಡಿದ್ದಕ್ಕಾಗಿ ಭುವಿ ಅವರಿಗೆ ಮಣೆ ಹಾಕಬೇಕಿತ್ತು ಎಂದು ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.

  ಕೊನೆಯ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್​ನಲ್ಲಿ 30 ರನ್ ಬಾರಿಸಿ, ಬೌಲಿಂಗ್​ನಲ್ಲಿ 4 ವಿಕೆಟ್ ಕಬಳಿಸಿದ ಶಾರ್ದುಲ್ ಠಾಕೂರ್ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇನ್ನೂ ಸರಣಿಯುದ್ದಕ್ಕೂ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಭುವನೇಶ್ವರ್ ಕುಮಾರ್ ಒಟ್ಟು 6 ವಿಕೆಟ್ ಪಡೆದಿದ್ದರು. ಇದಾಗ್ಯೂ ಅಂತಿಮ ಪಂದ್ಯದಲ್ಲಿ 95 ರನ್ ಬಾರಿಸಿದ್ದ ಸ್ಯಾಮ್ ಕರ್ರನ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿದರೆ, ಮೂರು ಪಂದ್ಯಗಳಿಂದ 219 ರನ್​ ಕಲೆಹಾಕಿದ ಜಾನಿ ಬೈರ್​ಸ್ಟೋವ್​ಗೆ ಸರಣಿ ಶ್ರೇಷ್ಠ ಪ್ರಶಸ್ತಿ ನೀಡಲಾಯಿತು.
  Published by:zahir
  First published: