ಟೀಮ್ ಇಂಡಿಯಾ ಆಟಗಾರ, ಐಪಿಎಲ್ನ ಮುಂಬೈ ಇಂಡಿಯನ್ಸ್ ತಂಡ ಸ್ಟಾರ್ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ತಮ್ಮ ನೆಚ್ಚಿನ ಐಪಿಎಲ್ ಪ್ಲೇಯಿಂಗ್ ಇಲೆವೆನ್ನ್ನು ಪ್ರಕಟಿಸಿದ್ದಾರೆ. ಆದರೆ ಈ ಹನ್ನೊಂದರ ಬಳಗದಲ್ಲಿ ಕೆಲ ಸ್ಟಾರ್ ಆಟಗಾರರು ಕಾಣಿಸಿಕೊಳ್ಳದಿರುವುದು ಇದೀಗ ಅಭಿಮಾನಿಗಳ ಅಚ್ಚರಿಗೆ ಕಾರಣವಾಗಿದೆ.
ಹೌದು, ಸೂರ್ಯಕುಮಾರ್ ಯಾದವ್ ಅವರು ಐಪಿಎಲ್ನ ನೆಚ್ಚಿನ ಪ್ಲೇಯಿಂಗ್ ಇಲೆವೆನ್ನಲ್ಲಿ ಐಪಿಎಲ್ನ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಸ್ಥಾನ ನೀಡಿಲ್ಲ. ಹಾಗೆಯೇ ಚುಟುಕು ಕ್ರಿಕೆಟ್ನ ಬಾಸ್ ಕ್ರಿಸ್ ಗೇಲ್ ಅವರನ್ನೂ ಕೂಡ ಕೈಬಿಟ್ಟಿದ್ದಾರೆ. ಹಾಗಿದ್ರೆ ಸೂರ್ಯಕುಮಾರ್ ಯಾದವ್ ಆಯ್ಕೆಯ ಐಪಿಎಲ್ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾರೆಲ್ಲಾ ಇದ್ದಾರೆ ನೋಡೋಣ.
ತಂಡದ ನಾಯಕನಾಗಿ ಪ್ರಸ್ತುತ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಿದ್ದಾರೆ. ಹಾಗೆಯೇ ಹಿಟ್ಮ್ಯಾನ್ ಜೊತೆ ಆರಂಭಿಕ ಆಟಗಾರನಾಗಿ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಇಂಗ್ಲೆಂಡ್ ಬ್ಯಾಟ್ಸ್ಮನ್ ಜೋಸ್ ಬಟ್ಲರ್ರನ್ನು ಆರಿಸಿದ್ದಾರೆ. ಅಲ್ಲದೇ ಬಟ್ಲರ್ ಅವರಿಗೆ ವಿಕೆಟ್ ಕೀಪರ್ ಜವಾಬ್ದಾರಿ ಕೂಡ ನೀಡಿದ್ದಾರೆ.
3ನೇ ಕ್ರಮಾಂಕಕ್ಕೆ ಆರ್ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ಆಯ್ಕೆ ಮಾಡಿದ್ದಾರೆ. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ತಾನೇ ಖುದ್ದು ಆಡುವುದಾಗಿ ಸೂರ್ಯಕುಮಾರ್ ಯಾದವ್ ತಿಳಿಸಿದ್ದಾರೆ.
5ನೇ ಕ್ರಮಾಂಕದಲ್ಲಿ ಆರ್ಸಿಬಿ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಅವರನ್ನು ಆಯ್ಕೆ ಮಾಡಿದ್ದಾರೆ. 6 ಮತ್ತು 7ನೇ ಕ್ರಮಾಂಕದಲ್ಲಿ ಮುಂಬೈ ಇಂಡಿಯನ್ಸ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ಕೆಕೆಆರ್ ತಂಡದ ಆ್ಯಂಡ್ರ ರಸೆಲ್ ಅವರಿಗೆ ಸ್ಥಾನ ನೀಡಲಾಗಿದೆ. ಹಾಗೆಯೇ 8ನೇ ಕ್ರಮಾಂಕಕ್ಕೂ ಆಲ್ರೌಂಡರ್ನ್ನೇ ಆಯ್ಕೆ ಮಾಡಿದ್ದು, ಅದರಂತೆ ಸಿಎಸ್ಕೆ ತಂಡದ ರವೀಂದ್ರ ಜಡೇಜಾರನ್ನು ಆರಿಸಿಕೊಂಡಿದ್ದಾರೆ.
ಇನ್ನು ಬೌಲರ್ಗಳಾಗಿ ಸನ್ರೈಸರ್ಸ್ ಹೈದರಾಬಾದ್ ಮ್ಯಾಜಿಕ್ ಸ್ಪಿನ್ನರ್ ರಶೀದ್ ಖಾನ್ ಅವರನ್ನು ಆಯ್ಕೆ ಮಾಡಿಕೊಂಡಿದ್ದು, ಹಾಗೆಯೇ ವೇಗಿಗಳಾಗಿ ಮುಂಬೈ ಇಂಡಿಯನ್ಸ್ ತಂಡ ಜಸ್ಪ್ರೀತ್ ಬುಮ್ರಾ ಹಾಗೂ ಪಂಜಾಬ್ ಕಿಂಗ್ಸ್ ವೇಗಿ ಮೊಹಮ್ಮದ್ ಶಮಿ ಅವರನ್ನು ಸೂರ್ಯಕುಮಾರ್ ಯಾದವ್ ತಮ್ಮ ನೆಚ್ಚಿನ ಐಪಿಎಲ್ ತಂಡದಲ್ಲಿ ಆಯ್ಕೆ ಮಾಡಿಕೊಂಡಿದ್ದಾರೆ.
(ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.) ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ