IND VS PAK T20 World Cup| ಭಾರತ-ಪಾಕ್ ನಡುವಿನ ವಿಶ್ವಕಪ್ ಟಿ20 ಪಂದ್ಯ ರದ್ದಾಗುತ್ತಾ?; ದಿಢೀರ್ ಬೆಳವಣಿಗೆಗಳಲ್ಲಿ ಆದದ್ದೇನು?

ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಪಾಕ್ ಪ್ರೇರಣೆಯಿಂದಾಗಿ ಸ್ಥಳೀಯ ನಾಗರೀಕರನ್ನು ಗುಂಡಿಟ್ಟು ಹತ್ಯೆ ಮಾಡುತ್ತಿದ್ದಾರೆ. ಹೀಗಾಗಿ ಐಸಿಸಿ ಪುರುಷರ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ದ ಆಡುವ ಬಗ್ಗೆ ಮರುಪರಿಶೀಲಿಸುವಂತೆ ದೂರು ದಾಖಲಾಗುತ್ತಿದೆ ಎಂದು ರಾಜೀವ್ ಶುಕ್ಲಾ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

  • Share this:
    ಕ್ರಿಕೆಟ್​ ಎಂಬುದು ಧರ್ಮವೇ ಆಗಿರುವ ಭಾರತದಲ್ಲಿ ಭಾರತ ಮತ್ತು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ (India vs Pakistan) ನಡುವಿನ ಪಂದ್ಯಕ್ಕೆ ಸಾಕಷ್ಟು ಮಹತ್ವವಿದೆ. 2008ರ ಮುಂಬೈ ತಾಜ್ ಹೋಟೆಲ್​ (Taj Hotel Attack) ದಾಳಿಯ ನಂತರ ಭಾರತ ಈವರೆಗೆ ಪಾಕಿಸ್ತಾನದ ಜೊತೆಗೆ ಯಾವುದೇ ದ್ವಿಪಕ್ಷೀಯ ಸರಣಿಯನ್ನು ಆಯೋಜಿಸಿಲ್ಲ. ಹೀಗಾಗಿ ಭಾರತ ಮತ್ತು ಪಾಕ್ ತಂಡಗಳು ವಿಶ್ವಕಪ್​ನಲ್ಲಿ ಮಾತ್ರ ಮುಖಾಮುಖಿಯಾಗುತ್ತವೆ. ಆದರೆ, ಪ್ರಸ್ತುತ ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ (Jammu and Kashmir) ಭಯೋತ್ಪಾದಕ (Terrorist Attack) ಚಟುವಟಿಕೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಇದೇ ಕಾರಣಕ್ಕೆ ವಿಶ್ವಕಪ್​ನಲ್ಲಿ (World Cup T20 2021) ಪಾಕಿಸ್ತಾನದ ವಿರುದ್ಧ ಪಂದ್ಯವನ್ನೂ ಭಾರತ ರದ್ದು ಮಾಡಬೇಕು ಎಂಬ ಕೂಗು ಕೇಳಿ ಬರುತ್ತಿದೆ. ಈ ನಡುವೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಉಪಾಧ್ಯಕ್ಷ ರಾಜೀವ್ ಶುಕ್ಲಾ (Rajiv Shukla) ನೀಡಿರುವ ಹೇಳಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಅಲ್ಲದೆ, ಭಾರತ-ಪಾಕಿಸ್ತಾನ ನಡುವಿನ ಪಂದ್ಯ ನಡೆಯುತ್ತದೆಯಾ? ಎಂಬ ಸಂಶಯವೂ ಉಂಟಾಗಿದೆ.

    ಪಾಕಿಸ್ತಾನ ವಿರುದ್ಧದ ಪಂದ್ಯದ ಬಗ್ಗೆ ಮಾತನಾಡಿರುವ ರಾಜೀವ್ ಶುಕ್ಲಾ, " ಯಾವುದೇ ತಂಡವು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಆಯೋಜಿಸಿದ ಟೂರ್ನಿಯಲ್ಲಿ ಮತ್ತೊಂದು ತಂಡದ ವಿರುದ್ಧ ಆಡುವುದನ್ನು ನಿರಾಕರಿಸುವ ಹಕ್ಕನ್ನು ಹೊಂದಿರುತ್ತದೆ" ಎಂದು ತಿಳಿಸಿದ್ದಾರೆ. ಅವರ ಈ ಹೇಳಿಕೆ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಕಣಕ್ಕೆ ಇಳಿಯಲಿದೆಯೇ? ಇಲ್ಲವೇ? ಎಂಬ ಸಂಶಯವನ್ನು ಹುಟ್ಟುಹಾಕಿದೆ.

    "ಐಸಿಸಿ ಪುರುಷರ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಆಡುವ ಬಗ್ಗೆ ಬಿಸಿಸಿಐ ಮತ್ತು ಸರ್ಕಾರವು ಮರುಪರಿಶೀಲಿಸಬೇಕು ಎಂದು ಈಗಾಗಲೇ ಮಾತುಕತೆಗಳು ನಡೆದಿವೆ. ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಸ್ಥಳೀಯ ನಾಗರೀಕರನ್ನು ಗುಂಡಿಟ್ಟು ಹತ್ಯೆ ಮಾಡುತ್ತಿದ್ದಾರೆ. ಈ ದಾಳಿಯಲ್ಲಿ ಈವರೆಗೆ 12ಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ. ಹೀಗಾಗಿ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು" ಎಂದು ಸ್ವತಃ ರಾಜೀವ್ ಶುಕ್ಲಾ ತಿಳಿಸಿದ್ದಾರೆ.

    ಇದನ್ನೂ ಓದಿ: T20 World Cup 2021| 'ನಾನು 3ನೇ ಸ್ಥಾನದಲ್ಲೇ ಆಡುತ್ತೇನೆ ಕೆ.ಎಲ್. ರಾಹುಲ್ ಇನ್ನಿಂಗ್ಸ್​ ಆರಂಭಿಸಲಿದ್ದಾರೆ'; ವಿರಾಟ್ ಕೊಹ್ಲಿ

    ಜಮ್ಮು ಕಾಶ್ಮೀರದ ಘಟನೆಯ ಬಗ್ಗೆ ಮಾತನಾಡಿರುವ ರಾಜೀವ್ ಶುಕ್ಲಾ, "ಕಣಿವೆ ರಾಜ್ಯದಲ್ಲಿ ನಡೆದಿರುವ ಕೊಲೆಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ. ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

    ಆದರೆ, ಭಾರತ-ಪಾಕ್ ಪಂದ್ಯಕ್ಕೆ ಸಂಬಂಧಿಸಿದಂತೆ ಐಸಿಸಿಯ ಅಂತಾರಾಷ್ಟ್ರೀಯ ಬದ್ಧತೆಗಳ ಅಡಿಯಲ್ಲಿ ನೀವು ಯಾರ ವಿರುದ್ಧವೂ ಆಡಲು ನಿರಾಕರಿಸಲು ಸಾಧ್ಯವಿಲ್ಲ. ಐಸಿಸಿ ಟೂರ್ನಮೆಂಟ್‌ಗಳಲ್ಲಿ ನೀವು ಎಲ್ಲಾ ತಂಡಗಳೊಂದಿಗೆ ಆಡಲೇಬೇಕು. ಒಂದು ವೇಳೆ ಪಂದ್ಯದಿಂದ ಹಿಂದೆ ಸರಿಯಲು ಒಪ್ಪಿದರೆ ಕೆಲವು ನಿಬಂಧನೆಗಳಿಗೆ ಒಪ್ಪಿಕೊಳ್ಳಬೇಕಾಗುತ್ತದೆ" ಎಂದು ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ANI ಗೆ ತಿಳಿಸಿದ್ದಾರೆ.

    ಇದನ್ನೂ ಓದಿ: OMN vs BAN, T20 WC 2021: ಈ ಪಂದ್ಯವನ್ನೂ ಸೋತರೆ ಬಾಂಗ್ಲಾ ಟೂರ್ನಿಯಿಂದ ಔಟ್; ಗೆದ್ದ ಹುಮ್ಮಸ್ಸಿನಲ್ಲಿ ಓಮನ್!

    ಏತನ್ಮಧ್ಯೆ, ಮುಂಬರುವ ಟಿ 20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಬಹುನಿರೀಕ್ಷಿತ ಹೈ-ಓಲ್ಟೇಜ್ ಪಂದ್ಯ ಅಕ್ಟೋಬರ್ 24 ರಂದು ದುಬೈನಲ್ಲಿ ನಡೆಯಲಿದೆ. ಗುಂಪು 2 ರಲ್ಲಿ, ಭಾರತವು ಟಿ -20 ಕ್ರಿಕೆಟ್ ನಲ್ಲಿ ಉದಯೋನ್ಮುಖ ಶಕ್ತಿಯಾಗಿರುವ ನ್ಯೂಜಿಲ್ಯಾಂಡ್ ಮತ್ತು ಅಫ್ಘಾನಿಸ್ತಾನವನ್ನು ಎದುರಿಸಲಿದೆ.
    Published by:MAshok Kumar
    First published: