Ind Vs SL: ಶ್ರೀಲಂಕಾ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

Test Squad for Sri Lanka Series: ಆಟಗಾರರ ಮಾನಸಿಕ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ, ರಿಷಭ್ ಪಂತ್ ಹಾಗೂ ವಿರಾಟ್ ಕೊಹ್ಲಿ ಅವರಿಗೆ 10 ದಿನಗಳ ಕಾಲ ಕ್ರಿಕೆಟ್‌ನಿಂದ ಬ್ರೇಕ್‌ ನೀಡಿದೆ. ಹೀಗಾಗಿ ಈ ಇಬ್ಬರು ಆಟಗಾರರು ಬಯೋ ಬಬಲ್‌ ತೊರೆದು ತಮ್ಮ ತಮ್ಮ ಮನೆ ಸೇರಲಿದ್ದಾರೆ.

ಭಾರತ ಕ್ರಿಕೆಟ್ ಆಟಗಾರರು

ಭಾರತ ಕ್ರಿಕೆಟ್ ಆಟಗಾರರು

 • Share this:
  ವೆಸ್ಟ್ ಇಂಡೀಸ್(West Indies) ವಿರುದ್ಧದ ಸರಣಿ ಮುಕ್ತಾಯವಾದ ಬಳಿಕ ಭಾರತ )India)ಹಾಗೂ ಶ್ರೀಲಂಕಾ(Sri lanka) ನಡುವೆ ನಡೆಯುವ ಟೆಸ್ಟ್(Test) ಹಾಗೂ ಟಿ ಟ್ವೆಂಟಿ(T-20) ಸರಣಿಗೆ ಭಾರತ ತಂಡ ಪ್ರಕಟ ಮಾಡಲಾಗಿದೆ. ಮಾರ್ಚ್ 4 ರಿಂದ 12 ರವರೆಗೆ ನಡೆಯಲಿರುವ ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ(Rohit Sharma) ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಹೀಗಾಗಿ ವಿರಾಟ್ (Virat)ನಂತರ ಏಕದಿನ ಮತ್ತು ಟಿ20 ತಂಡದ ನಾಯಕ ರೋಹಿತ್ ಶರ್ಮಾ ಟೆಸ್ಟ್ ತಂಡದ ಜವಾಬ್ದಾರಿಯನ್ನೂ ವಹಿಸಿಕೊಳ್ಳಲಿದ್ದಾರೆ. ಇದರೊಂದಿಗೆ ಮತ್ತೊಮ್ಮೆ ಟೀಂ ಇಂಡಿಯಾ ಎಲ್ಲಾ ಮೂರು ಮಾದರಿಗಳಲ್ಲಿ ಒಬ್ಬನೇ ನಾಯಕನನ್ನು ಹೊಂದಲಿದೆ. ಶೀಲಂಕಾ ವಿರುದ್ಧದ ಪಂದ್ಯದಿಂದ ಉಪನಾಯಕ ಕೆಎಲ್ ರಾಹುಲ್(KL Rahul) ಹೊರಗೆ ಉಳಿದಿರುವುದರಿಂದ ಟೀಂ ಇಂಡಿಯಾಗೆ ಹೊಸ ಉಪನಾಯಕನ ನೇಮಕ ಮಾಡಲಾಗಿದೆ. ತಂಡದ ಉಪನಾಯಕ ಜಸ್ಪ್ರೀತ್ ಬುಮ್ರಾ ನೇಮಕವಾಗಿದ್ದಾರೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧವೂ ಬುಮ್ರಾ ಈ ಜವಾಬ್ದಾರಿಯನ್ನು ನಿಭಾಯಿಸಿದ್ದರು.

  ಶ್ರೀಲಂಕಾ ವಿರುದ್ದದ ಸರಣಿಯ ವೇಳಾಪಟ್ಟಿ

  ಮೊದಲ ಟಿ20(T20) ಫೆಬ್ರವರಿ 24 ರಂದು ಲಕ್ನೋದಲ್ಲಿ ನಡೆಯಲಿದೆ, ನಂತರ ಫೆಬ್ರವರಿ 26 ಮತ್ತು 27 ರಂದು ಧರ್ಮಶಾಲಾದಲ್ಲಿ ಎರಡು ಮತ್ತು ಮೂರನೇ ಟಿ20 ಪಂದ್ಯಗಳು ನಡೆಯಲಿವೆ. ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಮೊಹಾಲಿಯಲ್ಲಿ ಮಾರ್ಚ್ 4 ರಿಂದ 8 ರವರೆಗೆ ನಡೆಯಲಿದ್ದು, ಇದು ವಿರಾಟ್ ಕೊಹ್ಲಿಗೆ 100 ನೇ ಟೆಸ್ಟ್ ಪಂದ್ಯವಾಗಿದೆ. ಕೊನೆಯ ಟೆಸ್ಟ್ ಪಂದ್ಯ ಮಾರ್ಚ್ 12 ರಿಂದ 16 ರವರೆಗೆ ನಡೆಯಲಿದೆ.

  ಇದನ್ನೂ ಓದಿ: RCB ಅಭಿಮಾನಿಗಳಲ್ಲೂ ಶುರುವಾಯಿತು ಕೆಜಿಎಫ್ ಟ್ರೆಂಡ್

  ಕೊಹ್ಲಿ, ಪಂತ್ ಗೆ ರೆಸ್ಟ್..

  ಆಟಗಾರರ ಮಾನಸಿಕ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ, ರಿಷಭ್ ಪಂತ್ ಹಾಗೂ ವಿರಾಟ್ ಕೊಹ್ಲಿ ಅವರಿಗೆ 10 ದಿನಗಳ ಕಾಲ ಕ್ರಿಕೆಟ್‌ನಿಂದ ಬ್ರೇಕ್‌ ನೀಡಿದೆ. ಹೀಗಾಗಿ ಈ ಇಬ್ಬರು ಆಟಗಾರರು ಬಯೋ ಬಬಲ್‌ ತೊರೆದು ತಮ್ಮ ತಮ್ಮ ಮನೆ ಸೇರಲಿದ್ದಾರೆ. ಇನ್ನು ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ ಪೂಜಾರ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದ್ದಾರೆ. ಇನ್ನು ಶ್ರೀಲಂಕಾ ವಿರುದ್ಧದ ಟೆಸ್ಟ್ ಮತ್ತು ಟಿ20 ಸರಣಿಗಳೆರಡಕ್ಕೂ ಶಾರ್ದೂಲ್ ಠಾಕೂರ್ʼಗೆ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐನ ಹಿರಿಯ ಆಯ್ಕೆ ಸಮಿತಿಯ ಅಧ್ಯಕ್ಷ ಚೇತನ್ ಶರ್ಮಾ ತಿಳಿಸಿದ್ದಾರೆ.

  ರವೀಂದ್ರ ಜಡೇಜಾ ಕಮ್ ಬ್ಯಾಕ್

  ಇನ್ನು ಬಹಳ ದಿನಗಳಿಂದ ಗಾಯದ ಸಮಸ್ಯೆಯಿಂದ ಟೀಂ ಇಂಡಿಯಾದಿಂದ ಹೊರಗೆ ಬಿದ್ದಿದ್ದ ಸ್ಟಾರ್ ಆಲ್-ರೌಂಡರ್ ಆಟಗಾರ ರವೀಂದ್ರ ರವೀಂದ್ರ ಜಡೇಜಾ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರೆ. ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ಹಾಗೂ ಟಿ20 ಸರಣಿಗೆ ರವೀಂದ್ರ ಜಡೇಜಾ ಅವರನ್ನು ಭಾರತೀಯ ಆಯ್ಕೆ ಸಮಿತಿ ಆಯ್ಕೆ ಮಾಡಿದೆ

  ಇದನ್ನೂ ಓದಿ: ಇವರೇ ನೋಡಿ RCB ತಂಡದ ಮುಂದಿನ ನಾಯಕ
  .

  ಶ್ರೀಲಂಕಾ ಸರಣಿಗೆ ಭಾರತ ತಂಡ

  ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಜಸ್​​ಪ್ರೀತ್ ಬುಮ್ರಾ (ಉಪನಾಯಕ), ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ರವಿ ಬಿಷ್ಣೋಯ್, ಅವೇಶ್ ಖಾನ್

  ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಭ್ ಪಂತ್, ಶುಭ್​ಮನ್ ಗಿಲ್, ಕೆಎಸ್ ಭರತ್, ಆರ್​ ಅಶ್ವಿನ್, ರವೀಂದ್ರ ಜಡೇಜಾ, ಜಯಂತ್ ಯಾದವ್, ಕುಲದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ (ಉಪನಾಯಕ), ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ , ಉಮೇಶ್ ಯಾದವ್, ಸೌರಭ್ ಕುಮಾರ್
  Published by:ranjumbkgowda1 ranjumbkgowda1
  First published: