T20 World Cup| ಪಾಕ್​ ಗೆಲುವನ್ನು ಸಂಭ್ರಮಿಸಿದರೆ ದೇಶದ್ರೋಹ ಪ್ರಕರಣ; ಯೋಗಿ ಆದಿತ್ಯನಾಥ್ ಎಚ್ಚರಿಕೆ!

ಟಿ20 ವಿಶ್ವಕಪ್‌ನಲ್ಲಿ ಭಾರತ-ಪಾಕ್ ಪಂದ್ಯದ ನಂತರ ದೇಶವಿರೋಧಿ ಘೋಷಣೆಗಳನ್ನು ಕೂಗಿದ್ದಕ್ಕಾಗಿ, ಪಾಕ್ ಗೆಲುವು ಸಂಭ್ರಮಿಸಿದ್ದ ಆರೋಪದಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಆಗ್ರಾದಲ್ಲಿ ಬಂಧಿಸಲಾಗಿದೆ.

ಯೋಗಿ ಆದಿತ್ಯನಾಥ್.

ಯೋಗಿ ಆದಿತ್ಯನಾಥ್.

  • Share this:
    ಲಖನೌ (ಅಕ್ಟೋಬರ್​ 28); ಟಿ20 ವಿಶ್ವಕಪ್​ನಲ್ಲಿ (T20 World Cup) ಭಾರತ (India) ತನ್ನ ಮೊದಲ ಪಂದ್ಯವನ್ನೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ (Pakistan) ವಿರುದ್ಧ ಸೋಲನು ಭವಿಸಿದೆ. ಈ ಪಂದ್ಯದಲ್ಲಿ ಭಾರತ ಗೆಲ್ಲುವ ಫೇವರಿಟ್​ ಎನಿಸಿಕೊಂಡಿದ್ದರೂ ಸಹ ಪಾಕಿಸ್ತಾನ್ ಬ್ಯಾಟ್ಸ್​ಮನ್​ಗಳ ಅದ್ಭುತ ಆಟದ ಕಾರಣಕ್ಕೆ ಭಾರತ ಸೋಲನು ಭವಿಸಿತ್ತು. ಈ ಮೂಲಕ ಪಾಕಿಸ್ತಾನ ವಿಶ್ವಕಪ್​ ಟೂರ್ನಿಯಲ್ಲಿ ಭಾರತದ ವಿರುದ್ಧ ಮೊದಲ ಗೆಲುವು ದಾಖಲಿಸಿದಂತಾಗಿದೆ. ಆದರೆ, ಈ ಪಂದ್ಯದಲ್ಲಿ ಪಾಕಿಸ್ತಾನದ ಗೆಲುವನ್ನು ಭಾರತದಲ್ಲಿ ಕೆಲವರು ಸಂಭ್ರಮಿಸಿದ್ದರು. ಜಮ್ಮು-ಕಾಶ್ಮೀರ ಮತ್ತು ಪಂಜಾಬ್​ನಲ್ಲಿ (Punjab) ಕೆಲವು ಕಾಶ್ಮೀರಿ ವಿದ್ಯಾರ್ಥಿಗಳು (kashmiri Students) ಪಾಕ್ ಗೆಲುವನ್ನು ಸಂಭ್ರಮಿಸಿ ದ್ದರು. ಹೀಗಾಗಿ ಈ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿತ್ತು UAPA ಅಡಿ ಕೇಸ್​ ದಾಖಲಿಸಲಾಗಿತ್ತು. ರಾಜಸ್ತಾನದ (Rajastan) ಶಿಕ್ಷಕಿ (Teacher) ತನ್ನ ಸ್ಟೇಟಸ್​ನಲ್ಲಿ ಪಾಕ್ ಗೆಲುವನ್ನು ಸಂಭ್ರಮಿಸಿದ್ದಕ್ಕೆ ಆಕೆಯನ್ನು ಕೆಲಸದಿಂದ ಅಮಾನತು ಮಾಡಲಾಗಿತ್ತು. ಇದೀಗ ಪಾಕ್​ಗೆಲುವನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.

    ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಯೋಗಿ ಹೇಳಿಕೆ:

    ಬುಧವಾರ ಹಿಂದಿ ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ವಿಷಯ ತಿಳಿಸಿದ್ದಾರೆ. ಇದು ಗುರುವಾರದ ಆವೃತ್ತಿಯನ್ನು ಮುದ್ರಣವಾಗಿದ್ದು, ಇದೀಗ ಯೋಗಿ ಆದಿತ್ಯನಾಥ್ ಹೇಳಿಕೆ ದೇಶದೆಲ್ಲೆಡೆ ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿಸುತ್ತಿದೆ.



    ಪತ್ರಿಕೆಯ ಸಂದರ್ಶನದ ಪ್ರತಿಯನ್ನು ಆದಿತ್ಯನಾಥ್ ಅವರ ಕಚೇರಿಯ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಶೇರ್‌ ಮಾಡಲಾಗಿದ್ದು, ಪಾಕಿಸ್ತಾನದ ವಿಜಯವನ್ನು ಆಚರಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವ ಕುರಿತು ಹಿಂದಿಯಲ್ಲಿ ಒಂದು ಸಾಲು ಹಾಕಲಾಗಿದೆ.

    ಈವರೆಗೆ ಅನೇಕ ವಿದ್ಯಾರ್ಥಿಗಳ ಮೇಲೆ ಕೇಸ್​:

    ಟಿ20 ವಿಶ್ವಕಪ್‌ನಲ್ಲಿ ಭಾರತ-ಪಾಕ್ ಪಂದ್ಯದ ನಂತರ ದೇಶವಿರೋಧಿ ಘೋಷಣೆಗಳನ್ನು ಕೂಗಿದ್ದಕ್ಕಾಗಿ, ಪಾಕ್ ಗೆಲುವು ಸಂಭ್ರಮಿಸಿದ್ದ ಆರೋಪದಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಆಗ್ರಾದಲ್ಲಿ ಬಂಧಿಸಲಾಗಿದೆ. ಬಿಜೆಪಿ ಯುವ ಮೋರ್ಚಾ ನಾಯಕ ಗೌರವ್ ರಾಜಾವತ್ ಅವರ ದೂರಿನ ಮೇರೆಗೆ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು ಬಳಿಕ ಮೂವರನ್ನು ಬಂಧಿಸಲಾಗಿದೆ.

    ಯಾವ ಸೆಕ್ಷನ್ ಅಡಿ ಕೇಸ್​?:

    "153A (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು ಐಪಿಸಿ ಸೆಕ್ಷನ್ 505 ಮತ್ತು ಐಟಿ ಕಾಯ್ದೆಯ ಸೆಕ್ಷನ್ 66 ಎಫ್ (ಸೈಬರ್ ಭಯೋತ್ಪಾದನೆಗೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ" ಎಂದು ಆಗ್ರಾದ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

    ಇದನ್ನೂ ಓದಿ: Viral News: ತಾಯಿ-ಮಗು ರಕ್ಷಿಸಲು ಬಂದವರೇ ಸಿಲುಕಿದ್ರು ಅಪಾಯಕ್ಕೆ : ಪ್ರವಾಹಕ್ಕೆ ಮುಖಮಾಡಿ ಗೆದ್ದು ಬಂದಿದ್ದೇ ಬಲು ರೋಚಕ!

    ಆಗ್ರಾದ ಆರ್‌ಬಿಎಸ್ ಎಂಜಿನಿಯರಿಂಗ್ ಕಾಲೇಜು ಸೋಮವಾರ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಹಾಸ್ಟೆಲ್‌ನಿಂದ ಅಮಾನತುಗೊಳಿಸಿದೆ. T20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಪಾಕ್ ಪರ ಘೋಷಣೆಗಳನ್ನು ಕೂಗಿದ ಅಥವಾ ಭಾರತದ ವಿರುದ್ಧ ಪಾಕಿಸ್ತಾನದ ಜಯವನ್ನು ಸಂಭ್ರಮಿಸಿದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು ಒಟ್ಟು ಐದು ಜಿಲ್ಲೆಗಳಲ್ಲಿ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

    ಇತ್ತ ಸಂಭ್ರಮಾಚರಣೆಯ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ರಾಜಸ್ಥಾನದ ಉದಯಪುರದ ಖಾಸಗಿ ಶಾಲೆಯ ಶಿಕ್ಷಕಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಜೊತೆಗೆ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

    ಇದನ್ನೂ ಓದಿ: Shocking News: ಸಿಟ್ಟು ಬಂತು ಅಂತ ಹೀಗೆ ಮಾಡೋದಾ? 32ನೇ ಫ್ಲೋರ್​ನಲ್ಲಿ ಕಟ್ಟಡ ಕ್ಲೀನ್ ಮಾಡ್ತಿದ್ದವರ ಹಗ್ಗ ಕಟ್ ಮಾಡಿದ ಮಹಿಳೆ!

    ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ದುಕೊಂಡಿತು. ಪಾಕಿಸ್ತಾನದ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ಗಳು ತತ್ತರಿಸಿದರು. 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡ ಭಾರತ 151 ರನ್ ಪೇರಿಸಲಷ್ಟೇ ಸಾಧ್ಯವಾಯಿತು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಯಾವುದೇ ವಿಕೆಟ್ ನಷ್ಟವಿಲ್ಲದೆ 152 ರನ್ ಗಳಿಸಿ ಗೆಲುವು ದಾಖಲಿಸಿತ್ತು.
    Published by:MAshok Kumar
    First published: