ಬೆಂಗಳೂರು (ಆ. 19): ಅಂಟಿಗಾದಲ್ಲಿ ಸಾಗುತ್ತಿರುವ ವೆಸ್ಟ್ ಇಂಡೀಸ್ ಎ ವಿರುದ್ಧದ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಭರ್ಜರಿ ಪ್ರದರ್ಶನ ತೋರುತ್ತಿದ್ದಾರೆ.
ಭಾರತೀಯ ಬೌಲಿಂಗ್ ದಾಳಿಗೆ ತತ್ತರಿಸಿದ ವಿಂಡೀಸ್ ಕೇವಲ 181 ರನ್ಗಳಿಗೆ ಆಲೌಟ್ ಆಗಿದ್ದು, 2ನೇ ಇನ್ನಿಂಗ್ಸ್ನಲ್ಲಿ ಭಾರತ 2ನೇ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 84 ರನ್ ಕಲೆಹಾಕಿದೆ. ಜೊತೆಗೆ 200 ರನ್ಗಳ ಭರ್ಜರಿ ಮುನ್ನಡೆಯಲ್ಲಿದೆ.
ಮೊದಲ ದಿನದಾಟದ ಅಂತ್ಯಕ್ಕೆ
ಪೂಜಾರ ಅವರ ಶತಕ ಹಾಗೂ ರೋಹಿತ್ರ ಅರ್ಧಶತಕದ ನೆರವಿನಿಂದ ಭಾರತ 297 ರನ್ಗೆ 5 ವಿಕೆಟ್ ಕಳೆದುಕೊಂಡಿತ್ತು. ಬಳಿಕ ನಿನ್ನೆ ಎರಡನೇ ದಿನದಾಟವನ್ನು ವೆಸ್ಟ್ ಇಂಡೀಸ್ ಎ ತಂಡಕ್ಕೆ ಬ್ಯಾಟಿಂಗ್ ಮಾಡಲು ಅವಕಾಶ ನೀಡಿತು.
ವೆಸ್ಟ್ ಇಂಡೀಸ್ನಲ್ಲಿರುವ ಟೀಂ ಇಂಡಿಯಾ ಆಟಗಾರರ ಮೇಲೆ ಉಗ್ರರ ಕಣ್ಣು?
ಆದರೆ, ಭಾರತೀಯ ಬೌಲರ್ಗಳ ಮಾರಕ ದಾಳಿಗೆ ತತ್ತರಿಸಿದ ವಿಂಡೀಸ್ 56.1 ಓವರ್ಗಳಲ್ಲಿ 181 ರನ್ಗೆ ಆಲೌಟ್ ಆಯಿತು. ಕವೆಮ್ ಹೊಡ್ಗೆ 51 ರನ್ ಗಳಿಸಿದರೆ, ನಾಯಕ ಜಾಮರ್ ಹ್ಯಾಮಿಲ್ಟನ್ 33 ರನ್ ಬಾರಿಸಿದ್ದೆ ಹೆಚ್ಚು. ಭಾರತ ಪರ ಉಮೇಶ್ ಯಾದವ್, ಇಶಾಂತ್ ಶರ್ಮಾ ಹಾಗೂ ಕುಲ್ದೀಪ್ ಯಾದವ್ ತಲಾ 3 ವಿಕೆಟ್ ಕಿತ್ತು ಮಿಂಚಿದರು.
116 ರನ್ಗಳ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ ಭಾರತ ಬೇಗನೆ ಮಯಾಂಕ್ ಅಗರ್ವಾಲ್(13) ವಿಕೆಟ್ ಕಳೆದುಕೊಂಡಿತು. ಬಳಿಕ ನಾಯಕ ಅಜಿಂಕ್ಯ ರಹಾನೆ ಹಾಗೂ ಹನುಮಾ ವಿಹಾರಿ ಎಚ್ಚರಿಕೆಯ ಆಟ ಪ್ರದರ್ಶಿಸಿದರು.
ಅಂತಿಮವಾಗಿ ಭಾರತ 2ನೇ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 84 ರನ್ ಬಾರಿಸಿದರೆ. 200 ರನ್ಗಳ ಮುನ್ನಡೆ ಸಾಧಿಸಿದೆ. ರಹಾನೆ 20 ಹಾಗೂ ವಿಹಾರಿ 48 ರನ್ ಬಾರಿಸಿ ಅಂತಿಮ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್ಬುಕ್ ಮೆಸೆಂಜರ್ನಲ್ಲಿ ಸಬ್ಸ್ಕ್ರೈಬ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ