Uttarakhand Flood: ಹಿಮನದಿ ಸ್ಫೋಟ; ರಕ್ಷಣಾ ಕಾರ್ಯಕ್ಕೆ ಪಂದ್ಯದ ನನ್ನ ಸಂಭಾವನೆ ನೀಡುತ್ತೇನೆ ಎಂದ ರಿಷಭ್ ಪಂತ್

ಟೀಂ ಇಂಡಿಯಾ ಪ್ರಮುಖ ವಿಕೆಟ್ ಕೀಪರ್ – ಬ್ಯಾಟ್ಸ್​ಮನ್ ರಿಷಭ್ ಪಂತ್ ಅವರು ಘಟನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಕ್ಕೆ ಪಂದ್ಯದ ಸಂಭಾವನೆಯನ್ನು ನೀಡುವುದಾಗಿ ಹೇಳಿದ್ದಾರೆ.

Rishabh Pant

Rishabh Pant

 • Share this:
  ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಉಂಟಾದ ಹಿಮನದಿ ಸ್ಫೋಟದಿಂದ ಭಾರೀ ಪ್ರವಾಹ ಉಂಟಾಗಿದೆ. ಕಣ್ಮರೆಯಾದವರ ಶೋಧ ಕಾರ್ಯಾಚರಣೆ ತೀವ್ರಗೊಂಡಿದ್ದು, ಈ ವರೆಗೂ ಅವಶೇಷಗಳಡಿಯಲ್ಲಿ ಸಿಲುಕಿದ್ದ 15 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಅಂತೆಯೇ 14 ಮಂದಿಯ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಚಮೋಲಿ ಪೊಲೀಸರು ಮಾಹಿತಿ ನೀಡಿದ್ದು,  ಕರ್ಣ ಪ್ರಯಾಗ್ ಮಾರ್ಗದಿಂದ 7 ಹಾಗೂ ತಪೋವನ ಪ್ರದೇಶದಿಂದ 3 ಮೃತದೇಹಗಳನ್ನು ಹೊರತೆಗೆಯಲಾಗಿದೆ. ತಪೋವನದ ಸುರಂಗವೊಂದರಿಂದ 12 ಮಂದಿಯನ್ನು ರಕ್ಷಿಸಲಾಗಿದೆ. ಆ ಮೂಲಕ ಒಟ್ಟಾರೆ ಒಟ್ಟು 30 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

  ಹಿಮಪಾತ ಮತ್ತು ಪ್ರವಾಹದಿಂದ ರಿಷಿಗಂಗಾ ಜಲವಿದ್ಯುತ್ ಯೋಜನೆ ಮತ್ತು ಎನ್​ಟಿಪಿಸಿ ಕೊಚ್ಚಿಹೋಗಿದೆ. ಇನ್ನೂ 170 ಮಂದಿ ನಾಪತ್ತೆಯಾಗಿದ್ದಾರೆ. ರಿಷಿಗಂಗಾ ಹೈಡ್ರೋ ಪವರ್ ಪ್ರಾಜೆಕ್ಟ್​ನ 22 ಕಾರ್ಮಿಕರು ಮತ್ತು ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ (ಎನ್​ಟಿಪಿಸಿ)ಯ 148 ಕಾರ್ಮಿಕರು ನಾಪತ್ತೆಯಾಗಿದ್ದು, ಬದುಕುಳಿದಿರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

  ಇದೀಗ ಟೀಂ ಇಂಡಿಯಾ ಪ್ರಮುಖ ವಿಕೆಟ್ ಕೀಪರ್ – ಬ್ಯಾಟ್ಸ್​ಮನ್ ರಿಷಭ್ ಪಂತ್ ಅವರು ಘಟನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಕ್ಕೆ ಪಂದ್ಯದ ಸಂಭಾವನೆಯನ್ನು ನೀಡುವುದಾಗಿ ಹೇಳಿದ್ದಾರೆ.

  ರವಿವಾರ ಸಂಜೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಪಂದ್ಯದ ದಿನದಾಟ ಮುಗಿದ ಬಳಿಕ ಮಾಹಿತಿ ತಿಳಿಸಿದ ರಿಷಭ್ ಪಂತ್, ಘಟನೆಯ ಕುರಿತು ಆಘಾತ ವ್ಯಕ್ತಪಡಿಸಿದ್ದಾರೆ. ಹಠಾತ್ ಪ್ರವಾಹದಿಂದ ಉಂಟಾದ ದುರಂತದ ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಪಂದ್ಯದ ಸಂಭಾವನೆಯನ್ನು ನೀಡುತ್ತಿದ್ದೇನೆ. ನೀವು ಕೂಡಾ ನೆರವಾಗಿ ಎಂದು ಟ್ವೀಟ್ ಮೂಲಕ ಹೇಳಿಕೊಂಡಿದ್ದರು. ಅಲ್ಲದೆ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಹಾಯ ಮಾಡುವಂತೆ ಕೋರಿದ್ದಾರೆ.

  ಇವರ ಜೊತೆಗೆ ಟೀಂ ಇಂಡಿಯಾ ಮಾಜಿ ಆಟಗಾರ ಸುರೇಶ್ ರೈನಾ, ಶಿಖರ್ ಧವನ್ ಸೇರಿದಂತೆ ಅನೇಕ ಕ್ರಿಕೆಟಿಗರು ಸಂತಾಪ ಸೂಚಿಸಿದ್ದಾರೆ.

  ಉತ್ತರಾಖಂಡ ಪ್ರವಾಹದ ಬಗ್ಗೆ ಟ್ವೀಟ್ ಮಾಡಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉತ್ತರಾಖಂಡದಲ್ಲಿನ ನೈಸರ್ಗಿಕ ವಿಕೋಪವನ್ನು ನಿಭಾಯಿಸಲು, ಉತ್ತರ ಪ್ರದೇಶ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ. ಈ ದುರಂತದಲ್ಲಿ ಸಾವನ್ನಪ್ಪಿರುವವರಿಗೆ ಶಾಂತಿ ಸಿಗಲಿ. ಆದಷ್ಟು ಬೇಗ ಪ್ರವಾಹ ನಿಯಂತ್ರಣಕ್ಕೆ ಬರಲು ಸಹಾಯ ಮಾಡುತ್ತೇವೆ ಎಂದಿದ್ದಾರೆ.
  Published by:Vinay Bhat
  First published: