Virat Kohli: ಮತ್ತೆ ನಾಯಕತ್ವ ಬದಲಾವಣೆ ಕೂಗು: ಕೊಹ್ಲಿ ಕ್ಯಾಪ್ಟನ್ಸಿಗೆ ಕುತ್ತು..?

ಈ ಹಿಂದೆ 2019ರ ಏಕದಿನ ವಿಶ್ವಕಪ್ ಸೋಲಿನ ಬಳಿಕ ಕೊಹ್ಲಿ ನಾಯಕತ್ವದ ಬಗ್ಗೆ ಅಪಸ್ವರಗಳು ಕೇಳಿ ಬಂದಿದ್ದವು. ಅದರಲ್ಲೂ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಅವರನ್ನು ನಾಯಕನಾಗಿ ಮಾಡಬೇಕೆಂಬ ಅಭಿಪ್ರಾಯಗಳು ಕೇಳಿಬಂದಿತ್ತು.

Virat Kohli

Virat Kohli

  • Share this:
    ಐಸಿಸಿ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಪಂದ್ಯದ ಸೋಲಿನ ಬೆನ್ನಲ್ಲೇ ಇದೀಗ ವಿರಾಟ್ ಕೊಹ್ಲಿ ನಾಯಕತ್ವದ ಚರ್ಚೆಗಳು ಶುರುವಾಗಿದೆ. ಇದಕ್ಕೆ ಬಹುಮುಖ್ಯ ಕಾರಣ ಇದುವರೆಗೆ ಕೊಹ್ಲಿ ಐಸಿಸಿ ಟ್ರೋಫಿ ಗೆಲ್ಲದಿರುವುದು. ಅದರಲ್ಲೂ 2013 ರ ಬಳಿಕ ಟೀಮ್ ಇಂಡಿಯಾ ಐಸಿಸಿ ಟ್ರೋಫಿಯನ್ನು ಗೆದ್ದಿಲ್ಲ. ಇನ್ನು 2014 ರಿಂದ ಟೀಮ್ ಇಂಡಿಯಾವನ್ನು ಮುನ್ನಡೆಸುತ್ತಿರುವ ಕೊಹ್ಲಿ ನಾಯಕತ್ವದಲ್ಲಿ ಐಸಿಸಿ ಪ್ರಶಸ್ತಿ ಭಾರತಕ್ಕೆ ಮರೀಚಿಕೆಯಾಗಿದೆ.

    ನಾಯಕನಾಗಿ ಕೊಹ್ಲಿ ಐಸಿಸಿ ಟೂರ್ನಿಗಳಾದ ಟಿ20 ವಿಶ್ವಕಪ್​, ಏಕದಿನ ವಿಶ್ವಕಪ್​, ಚಾಂಪಿಯನ್​​ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸೇರಿ 4 ಟೂರ್ನಿಗಳಲ್ಲಿ ಕೊನೆ ಹಂತದಲ್ಲಿ ಎಡವಿದ್ದಾರೆ. 2017 ರಲ್ಲಿ ಚಾಂಪಿಯನ್​ ಟ್ರೋಫಿಯಲ್ಲಿ ಫೈನಲ್ ಪ್ರವೇಶಿಸಿದರೂ ಪಾಕ್ ವಿರುದ್ದ ಸೋಲುವ ಮೂಲಕ ಚೊಚ್ಚಲ ಐಸಿಸಿ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈತಪ್ಪಿಸಿಕೊಂಡಿದ್ದರು.

    ಇನ್ನು 2019 ರ ವಿಶ್ವಕಪ್​​ನಲ್ಲಿ ಸೆಮಿಫೈನಲ್​ನಲ್ಲಿ ಎಡವಿದ ಟೀಮ್ ಇಂಡಿಯಾ ಟ್ರೋಫಿಗೆ ಮುತ್ತಿಕ್ಕುವ ಅವಕಾಶವನ್ನು ಕಳೆದುಕೊಂಡಿತು. ಇದೀಗ ಕಿವೀಸ್​ ಪಡೆ ವಿರುದ್ದ ಸೋಲುವ ಮೂಲಕ ಚೊಚ್ಚಲ ಐಸಿಸಿ ಟ್ರೋಫಿ ಮುಡಿಗೇರಿಸಿಕೊಳ್ಳುವ ಕನಸು ಕೂಡ ಭಗ್ನಗೊಂಡಿದೆ.ಇದರೊಂದಿಗೆ ಕೊಹ್ಲಿ ನಾಯಕತ್ವದ ಬಗ್ಗೆ ಟೀಕೆಗಳು ಮೂಡಿ ಬರಲಾರಂಭಿಸಿದೆ.

    ಈ ಹಿಂದೆ 2019ರ ಏಕದಿನ ವಿಶ್ವಕಪ್ ಸೋಲಿನ ಬಳಿಕ ಕೊಹ್ಲಿ ನಾಯಕತ್ವದ ಬಗ್ಗೆ ಅಪಸ್ವರಗಳು ಕೇಳಿ ಬಂದಿದ್ದವು. ಅದರಲ್ಲೂ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಅವರನ್ನು ನಾಯಕನಾಗಿ ಮಾಡಬೇಕೆಂಬ ಅಭಿಪ್ರಾಯಗಳು ಮೂಡಿಬಂದಿತ್ತು.

    ಇದೀಗ ಮತ್ತೊಮ್ಮೆ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಮಹತ್ವದ ಟೂರ್ನಿಯ ಫೈನಲ್​ ಗೆಲ್ಲುವಲ್ಲಿ ವಿಫಲವಾಗಿದೆ. ಅದರ ಬೆನ್ನಲ್ಲೇ ಕೊಹ್ಲಿ ನಾಯಕತ್ವದ ಬಗ್ಗೆ ಚರ್ಚೆಗಳು ಶುರುವಾಗಿವೆ. ಹೀಗೆ ದಿಢೀರಣೆ ಅಪಸ್ವರಗಳು ಕೇಳಿ ಬರಲು ಮುಖ್ಯ ಕಾರಣ ಮುಂಬರುವ ವಿಶ್ವಕಪ್​ಗಳು.

    ಹೌದು, ಇದೇ ವರ್ಷ ಟಿ20 ವಿಶ್ವಕಪ್ ನಡೆಯಲಿದೆ. ಈಗಾಗಲೇ ಅನೇಕ ಮಾಜಿ ಕ್ರಿಕೆಟರುಗಳು ಟಿ20 ವಿಶ್ವಕಪ್​ನಲ್ಲಿ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸಲಿ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇತ್ತ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಸೋಲನುಭವಿಸುವ ಮೂಲಕ ಟೀಕಾಕಾರರಿಗೆ ಆಹಾರವಾಗಿದ್ದಾರೆ.

    ಇದಲ್ಲದೆ 2022 ರಲ್ಲೂ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, 2023 ರಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ಜರುಗಲಿದೆ. ಮುಂಬರುವ ಈ ಮೂರು ವಿಶ್ವಕಪ್​ಗಳಿಗಾಗಿ ನಾಯಕನ ಬದಲಾವಣೆ ಅನಿವಾರ್ಯ ಎಂಬ ಮಾತುಗಳು ಕೇಳಿ ಬರುತ್ತಿವೆ. ಅದರಲ್ಲೂ ಏಕದಿನ, ಟೆಸ್ಟ್ ಹಾಗೂ ಟಿ20ಗೆ ಬೇರೆ ಬೇರೆ ನಾಯಕರನ್ನು ಆಯ್ಕೆ ಬಗ್ಗೆ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಒಟ್ಟಿನಲ್ಲಿ ಟೆಸ್ಟ್ ಚಾಂಪಿಯನ್​ಶಿಪ್ ಸೋಲಿನ ಬೆನ್ನಲ್ಲೇ ಕೊಹ್ಲಿ ನಾಯಕತ್ವದ ಬಗ್ಗೆ ಮತ್ತೆ ಚರ್ಚೆ ಶುರುವಾಗಿದ್ದು, ಈ ಬಾರಿ ಅದು ಹೇಗೆ ಅಂತ್ಯವಾಗಲಿದೆ ಕಾದು ನೋಡಬೇಕಿದೆ.
    Published by:zahir
    First published: