ICC Player of The Decade: ಐಸಿಸಿ ದಶಕದ ಆಟಗಾರ ಪ್ರಶಸ್ತಿ ಪಟ್ಟಿಯಲ್ಲಿ ನಾಲ್ವರು ಭಾರತೀಯರು..!

ICC Player of The Decade award: ಐಸಿಸಿ ಸ್ಪಿರಿಟ್ ಆಫ್ ಕ್ರಿಕೆಟ್ ಪ್ರಶಸ್ತಿ ಪಟ್ಟಿಯಲ್ಲಿ ಧೋನಿ ಅವರೊಂದಿಗೆ ಕೊಹ್ಲಿ ಸಹ ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ 5 ಪ್ರಶಸ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.

Dhoni - Kohli - Rohit

Dhoni - Kohli - Rohit

 • Share this:
  ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್‌ (ಐಸಿಸಿ) ದಶಕದ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶಿತರ ಪಟ್ಟಿಯನ್ನು ಪ್ರಕಟಿಸಿದೆ. ಮೂರು ಮಾದರಿಯ ಕ್ರಿಕೆಟ್‌ನಲ್ಲಿನ ತಲಾ ಏಳು ಆಟಗಾರರನ್ನು ನಾಮನಿರ್ದೇಶನ ಮಾಡಿದೆ. ಈ ಪಟ್ಟಿಯಲ್ಲಿ ಭಾರತದ ಮೂವರು ಕ್ರಿಕೆಟಿಗರಿರುವುದು ವಿಶೇಷ. ಅದರಲ್ಲೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಏಕದಿನ, ಟೆಸ್ಟ್, ಟಿ20 ದಶಕದ ಆಟಗಾರರ ನಾಮ ನಿರ್ದೇಶಿತ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಉಳಿದಂತೆ ದಶಕದ ಏಕದಿನ ಕ್ರಿಕೆಟಿಗರಲ್ಲಿ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಟೀಮ್ ಇಂಡಿಯಾ ಆರಂಭಿಕ ರೋಹಿತ್ ಶರ್ಮಾ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

  ಅಷ್ಟೇ ಅಲ್ಲದೆ ದಶಕದ ಅತ್ಯುತ್ತಮ ಆಟಗಾರರ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜೊತೆ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕೂಡ ಸ್ಥಾನ ಪಡೆದಿದ್ದಾರೆ. ಹಾಗೆಯೇ ಐಸಿಸಿ ಸ್ಪಿರಿಟ್ ಆಫ್ ಕ್ರಿಕೆಟ್ ಪ್ರಶಸ್ತಿ ಪಟ್ಟಿಯಲ್ಲಿ ಧೋನಿ ಅವರೊಂದಿಗೆ ಕೊಹ್ಲಿ ಸಹ ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ 5 ಪ್ರಶಸ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.

  ದಶಕದ ಏಕದಿನ ಆಟಗಾರರ ನಾಮನಿರ್ದೇಶೀತ ಪಟ್ಟಿ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಎಂ.ಎಸ್. ಧೋನಿ (ಭಾರತ). ಲಸಿತ್ ಮಾಲಿಂಗ (ಶ್ರೀಲಂಕಾ), ಮಿಚೆಲ್ ಸ್ಟಾರ್ಕ್ (ಆಸ್ಟ್ರೇಲಿಯಾ), ಎಬಿ ಡಿವಿಲಿಯರ್ಸ್ (ದಕ್ಷಿಣ ಆಫ್ರಿಕಾ), ಮತ್ತು ಕುಮಾರ್ ಸಂಗಕ್ಕಾರ (ಶ್ರೀಲಂಕಾ).

  ದಶಕದ ಟಿ20 ಆಟಗಾರರ ನಾಮನಿರ್ದೇಶೀತ ಪಟ್ಟಿ: ರಶೀದ್ ಖಾನ್ (ಅಫ್ಘಾನಿಸ್ತಾನ್), ವಿರಾಟ್ ಕೊಹ್ಲಿ (ಭಾರತ), ಇಮ್ರಾನ್ ತಾಹಿರ್ (ದಕ್ಷಿಣ ಆಫ್ರಿಕಾ), ಆರೋನ್ ಫಿಂಚ್ (ಆಸ್ಟ್ರೇಲಿಯಾ), ಲಸಿತ್ ಮಾಲಿಂಗ (ಶ್ರೀಲಂಕಾ), ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್), ಮತ್ತು ರೋಹಿತ್ ಶರ್ಮಾ (ಭಾರತ).

  ದಶಕದ ಟೆಸ್ಟ್ ಆಟಗಾರರ ನಾಮನಿರ್ದೇಶೀತ ಪಟ್ಟಿ: ವಿರಾಟ್ ಕೊಹ್ಲಿ (ಭಾರತ), ಜೋ ರೂಟ್ (ಇಂಗ್ಲೆಂಡ್), ಕೇನ್ ವಿಲಿಯಮ್ಸನ್ (ನ್ಯೂಜಿಲೆಂಡ್), ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ), ಜೇಮ್ಸ್ ಆಂಡರ್ಸನ್ (ಇಂಗ್ಲೆಂಡ್), ರಂಗನಾ ಹೆರಾತ್ (ಶ್ರೀಲಂಕಾ), ಮತ್ತು ಯಾಸಿರ್ ಷಾ (ಪಾಕಿಸ್ತಾನ್)

  ದಶಕದ ಆಟಗಾರರ ನಾಮನಿರ್ದೇಶೀತ ಪಟ್ಟಿ: ವಿರಾಟ್ ಕೊಹ್ಲಿ (ಭಾರತ) ರವಿಚಂದ್ರನ್ ಅಶ್ವಿನ್ (ಭಾರತ), ಜೋ ರೂಟ್ (ಇಂಗ್ಲೆಂಡ್), ಕೇನ್ ವಿಲಿಯಮ್ಸನ್ (ನ್ಯೂಜಿಲೆಂಡ್), ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ), ಎಬಿ ಡಿವಿಲಿಯರ್ಸ್ (ದಕ್ಷಿಣ ಆಫ್ರಿಕಾ), ಮತ್ತು ಕುಮಾರ್ ಸಂಗಕ್ಕಾರ (ಶ್ರೀಲಂಕಾ).

  ಐಸಿಸಿ ಸ್ಪಿರಿಟ್ ಆಫ್ ಕ್ರಿಕೆಟ್ ಪ್ರಶಸ್ತಿ: ವಿರಾಟ್ ಕೊಹ್ಲಿ (ಭಾರತ), ಕೇನ್ ವಿಲಿಯಮ್ಸನ್ (ನ್ಯೂಜಿಲೆಂಡ್), ಬ್ರೆಂಡನ್ ಮೆಕಲಮ್ (ನ್ಯೂಜಿಲೆಂಡ್), ಮಿಸ್ಬಾ-ಉಲ್-ಹಕ್ (ಪಾಕಿಸ್ತಾನ), ಎಂ.ಎಸ್. ಧೋನಿ (ಭಾರತ), ಅನ್ಯಾ ಶ್ರಬ್ಸೋಲ್ (ಇಂಗ್ಲೆಂಡ್), ಕ್ಯಾಥರೀನ್ ಬ್ರಂಟ್ (ಇಂಗ್ಲೆಂಡ್), ಮಹೇಲಾ ಜಯವರ್ಧನೆ (ಶ್ರೀಲಂಕಾ), ಮತ್ತು ಡೇನಿಯಲ್ ವೆಟ್ಟೋರಿ (ನ್ಯೂಜಿಲೆಂಡ್).

  ಐಸಿಸಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ತಮ್ಮ ನೆಚ್ಚಿನ ಆಟಗಾರರ ಪರ ಮತ ಚಲಾಯಿಸಬಹುದಾಗಿದ್ದು, ಅದರಂತೆ 2010ರ ಬಳಿಕದ ಶ್ರೇಷ್ಠ ಆಟಗಾರರನ್ನು ಡಿಸೆಂಬರ್ 18ರಂದು ಇಂಟರ್​ನ್ಯಾಷನಲ್​ ಕ್ರಿಕೆಟ್ ಕೌನ್ಸಿಲ್ ಪ್ರಕಟಿಸಲಿದೆ.

  ಇದನ್ನೂ ಓದಿ: IPL 2021: RCB ಖರೀದಿಸಲು ಕಣ್ಣಿಟ್ಟಿರುವ ಐವರು ಆಟಗಾರರು ಇವರೇ..!
  Published by:zahir
  First published: