Virat Kohli: ನಾಯಕನಾಗಿ ಧೋನಿ ಮಾಡಲಾಗದ ಸಾಧನೆ ಮಾಡಿದ ಕ್ಯಾಪ್ಟನ್ ಕೊಹ್ಲಿ

ಇದೀಗ ಟಿ20 ಸರಣಿಯನ್ನು ಕ್ಯಾಪ್ಟನ್ ಕೊಹ್ಲಿ ಅ್ಯಂಡ್ ಟೀಮ್ ತಮ್ಮದಾಗಿಸಿಕೊಂಡಿದೆ. ಈ ಮೂಲಕ ಕಾಂಗರೂ ನಾಡಿನಲ್ಲಿ ಮೂರು ಮಾದರಿ ಸರಣಿ ಗೆದ್ದ ಭಾರತದ ಏಕೈಕ ನಾಯಕ ಎಂಬ ಇತಿಹಾಸ ನಿರ್ಮಿಸಿದ್ದಾರೆ ವಿರಾಟ್ ಕೊಹ್ಲಿ.

Dhoni- Virat Kohli

Dhoni- Virat Kohli

 • Share this:
  ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯವನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ನಾಯಕತ್ವದ ಮೂಲಕ ಎಂಬುದು ವಿಶೇಷ. ಹೌದು, ಭಾರತ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯವನ್ನು 11 ರನ್‌ ಅಂತರದಿಂದ ಗೆದ್ದುಕೊಂಡಿತ್ತು. ಎರಡನೇ ಪಂದ್ಯವನ್ನು 6 ವಿಕೆಟ್‌ಗಳಿಂದ ಗೆದ್ದು ಬೀಗಿದ ಟೀಮ್ ಇಂಡಿಯಾ ಟಿ20 ಸರಣಿಯನ್ನು ವಶಪಡಿಸಿಕೊಂಡಿತ್ತು.

  ಈ ಮೂಲಕ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್‌, ನ್ಯೂಜಿಲೆಂಡ್‌ ಮತ್ತು ಆಸ್ಟ್ರೇಲಿಯಾದಲ್ಲಿ (SENA ದೇಶ) ಟಿ20 ಸರಣಿ ಗೆದ್ದ ಮೊದಲ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾದರು. ಭಾರತ ತಂಡದ ಯಶಸ್ವಿ ನಾಯಕ ಎನಿಸಿಕೊಂಡಿರುವ ಎಂಎಸ್‌ ಧೋನಿ, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾದಲ್ಲಿ ಮಾತ್ರ ಸರಣಿ ಗೆದ್ದಿದ್ದಾರೆ. ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್‌ನಲ್ಲಿ ಧೋನಿ ನೇತೃತ್ವದಲ್ಲಿ ಟಿ20 ಸರಣಿ ಗೆಲ್ಲಲಾಗಲಿಲ್ಲ.

  ಇದೀಗ ಕೊಹ್ಲಿ ವಿಶ್ವದ ಶ್ರೇಷ್ಠ ಕ್ರಿಕೆಟ್ ತಂಡಗಳ ವಿರುದ್ಧ ಟಿ20 ಸರಣಿ ಗೆದ್ದಂತಹ ಭಾರತದ ಏಕೈಕ ನಾಯಕ ಎನಿಸಿಕೊಂಡಿದ್ದಾರೆ. ಅಲ್ಲದೆ ಆಸ್ಟ್ರೇಲಿಯಾದಲ್ಲಿ ಮೂರೂ ಮಾದರಿಯಲ್ಲಿ ಸರಣಿ ಗೆದ್ದ ಭಾರತದ ಮೊದಲ ನಾಯಕ ಎಂಬ ದಾಖಲೆ ಬರೆದಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಕಪ್ತಾನ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

  ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ 2018ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯನ್ನು 2-1 ರಿಂದ ಗೆದ್ದುಕೊಂಡಿತ್ತು. ಹಾಗೆಯೇ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1ರಿಂದ ಗೆದ್ದು ಬೀಗಿತ್ತು.

  ಇದೀಗ ಟಿ20 ಸರಣಿಯನ್ನು ಕ್ಯಾಪ್ಟನ್ ಕೊಹ್ಲಿ ಅ್ಯಂಡ್ ಟೀಮ್ ತಮ್ಮದಾಗಿಸಿಕೊಂಡಿದೆ. ಈ ಮೂಲಕ ಕಾಂಗರೂ ನಾಡಿನಲ್ಲಿ ಮೂರು ಮಾದರಿ ಸರಣಿ ಗೆದ್ದ ಭಾರತದ ಏಕೈಕ ನಾಯಕ ಎಂಬ ಇತಿಹಾಸ ನಿರ್ಮಿಸಿದ್ದಾರೆ ವಿರಾಟ್ ಕೊಹ್ಲಿ.

  ಇದಕ್ಕೂ ಮೊದಲು ದಕ್ಷಿಣ ಆಫ್ರಿಕಾ ನಾಯಕ ಫಾಫ್‌ ಡು ಪ್ಲೆಸಿ ಆಸ್ಟ್ರೇಲಿಯಾದಲ್ಲಿ ಮೂರು ಮಾದರಿ ಕ್ರಿಕೆಟ್​ನಲ್ಲಿ ಗೆಲುವು ದಾಖಲಿಸಿದ ವಿಶ್ವದ ಮೊದಲ ನಾಯಕ ಎನಿಸಿಕೊಂಡಿದ್ದರು. ಇದೀಗ ಈ ಸಾಧನೆಯನ್ನು ಮಾಡಿದ ವಿಶ್ವದ ಎರಡನೇ ಕಪ್ತಾನ ಎಂಬ ವಿಶೇಷ ಹೆಗ್ಗಳಿಕೆಗೂ ಟೀಮ್ ಇಂಡಿಯಾ ನಾಯಕ ಪಾತ್ರರಾಗಿದ್ದಾರೆ.

  ಇದನ್ನೂ ಓದಿ: 55 ಎಸೆತ, 5 ಬೌಂಡರಿ, 20 ಸಿಕ್ಸ್, ಸ್ಪೋಟಕ ಶತಕ: ಈ ಬ್ಯಾಟ್ಸ್​ಮನ್ ಮೇಲೆ ಕಣ್ಣಿಟ್ಟಿದೆ RCB..!
  Published by:zahir
  First published: