• Home
 • »
 • News
 • »
 • sports
 • »
 • Vizag Gas Leak: ವಿಶಾಖಪಟ್ಟಣ ವಿಷಾನಿಲ ಸೋರಿಕೆ ಪ್ರಕರಣ: ಕಂಬನಿ ಮಿಡಿದ ಟೀಂ ಇಂಡಿಯಾ ಆಟಗಾರರು!

Vizag Gas Leak: ವಿಶಾಖಪಟ್ಟಣ ವಿಷಾನಿಲ ಸೋರಿಕೆ ಪ್ರಕರಣ: ಕಂಬನಿ ಮಿಡಿದ ಟೀಂ ಇಂಡಿಯಾ ಆಟಗಾರರು!

ಟೀಂ ಇಂಡಿಯಾ ಆಟಗಾರರು

ಟೀಂ ಇಂಡಿಯಾ ಆಟಗಾರರು

Visakhapatnam Gas Leak: ವಿಶಾಖಪಟ್ಟಣಂನ ಆರ್​ಆರ್​ ವೆಂಕಟಾಪುರಂ ಎಂಬ ಗ್ರಾಮದ ಬಳಿ ಇಂದು ಬೆಳಗ್ಗೆ 3 ಗಂಟೆಯ ವೇಳೆಗೆ ಈ ಅವಘಡ ನಡೆದಿದೆ. ಎಲ್​ಜಿ ಪಾಲಿಮರ್ಸ್ ಇಂಡಸ್ಟ್ರಿ ಎಂಬ ರಾಸಾಯನಿಕ ಕಾರ್ಖಾನೆಯಲ್ಲಿ ಗ್ಯಾಸ್​ ಸೋರಿಕೆಯಾದ ಕಾರಣ ಸುತ್ತಮುತ್ತಲಿನ ಮನೆಗಳಿಗೂ ವಿಷಾನಿಲ ಹರಡಿದೆ.

ಮುಂದೆ ಓದಿ ...
 • Share this:

  ಇಂದು ಮುಂಜಾನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನ ಆರ್​.ಆರ್​. ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್​ ಕೆಮಿಕಲ್​ ಫ್ಯಾಕ್ಟರಿಯಲ್ಲಿ ಸ್ಟೈರೀನ್ ಗ್ಯಾಸ್ ಸೋರಿಕೆಯಾಗಿ 11 ಜನರು ಮೃತಪಟ್ಟಿದ್ದಾರೆ. 200ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಘಟನೆಗೆ ಸಂಬಂಧಪಟ್ಟಂತೆ ಎಲ್ಲ ವರದಿಯನ್ನೂ ಕೇಳಿದ್ದು, ಆಂಧ್ರ ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಸಿದ್ದಾರೆ. ಅನೇಕರು ಈ ಆಘಾತಕಾರಿ ದುರಂತಕ್ಕೆ ಕಂಬನಿ ಮಿಡಿದ್ದಾರೆ. ಟೀಂ ಇಂಡಿಯಾ ಕ್ರಿಕೆಟಿಗರು ಕೂಡ ಸಂತಾಪ ಸೂಚಿಸಿದ್ದಾರೆ.


  'ದುರಂತದಲ್ಲಿ ಮಡಿದವರಿಗೆ ಸಂತಾಪ ಸೂಚಿಸುತ್ತೇನೆ. ಆಸ್ಪತ್ರೆಗೆ ದಾಖಲಾದವರು ಶೀಫ್ರ ಗುಣಮುಖರಾಗಲಿ' ಎಂದು ವಿರಾಟ್ ಕೊಹ್ಲಿ ಟ್ವೀಟ್ ಮಾಡಿದ್ದಾರೆ. 'ಅನಿಲ ದುರಂತವೇ..? ದೇವರೇ ನಮ್ಮ ಮೇಲೆ ಕೊಂಚ ಕರುಣೆ ತೋರಿಸು' ಎಂದು ರವಿಚಂದ್ರನ್ ಅಶ್ವಿನ್ ಹೇಳಿದ್ದಾರೆ.  ಶಿಖರ್ ಧವನ್ ಕೂಡ ಈ ಸುದ್ದಿ ಕೇಳಿ ಶಾಕ್ ಆಗಿದ್ದು, 'ವಿಶಾಖಪಟ್ಟಣ ದುರಂತ ಆಘಾತಕಾರಿಯಾಗಿದೆ. ಶೀಘ್ರವೇ ಎಲ್ಲವೂ ಸಹಜ ಸ್ಥಿತಿಗೆ ಬರಲಿ' ಎಂದಿದ್ದಾರೆ. ಜೊತೆಗೆ ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ಮಯಾಂಕ್ ಅಗರ್ವಾಲ್ ಸೇರಿ ಬೇಸರ ವ್ಯಕ್ತ ಪಡಿಸಿದ್ದಾರೆ.  ವಿಶಾಖಪಟ್ಟಣಂನ ಆರ್​ಆರ್​ ವೆಂಕಟಾಪುರಂ ಎಂಬ ಗ್ರಾಮದ ಬಳಿ ಇಂದು ಬೆಳಗ್ಗೆ 3 ಗಂಟೆಯ ವೇಳೆಗೆ ಈ ಅವಘಡ ನಡೆದಿದೆ. ಎಲ್​ಜಿ ಪಾಲಿಮರ್ಸ್ ಇಂಡಸ್ಟ್ರಿ ಎಂಬ ರಾಸಾಯನಿಕ ಕಾರ್ಖಾನೆಯಲ್ಲಿ ಗ್ಯಾಸ್​ ಸೋರಿಕೆಯಾದ ಕಾರಣ ಸುತ್ತಮುತ್ತಲಿನ ಮನೆಗಳಿಗೂ ವಿಷಾನಿಲ ಹರಡಿದೆ. ಇದರಿಂದ ಮುಂಜಾನೆ ವಾಕಿಂಗ್​ಗೆ ಹೊರಗೆ ಬಂದಿದ್ದ ಸಾಕಷ್ಟು ಜನರು ಅಸ್ವಸ್ಥರಾಗಿ ರಸ್ತೆಯಲ್ಲೇ ಬಿದ್ದಿದ್ದರು. ಇಬ್ಬರು ಮಕ್ಕಳು ಸೇರಿದಂತೆ 11 ಜನ ಸಾವನ್ನಪ್ಪಿದ್ದಾರೆ.  Published by:Vinay Bhat
  First published: