ಶ್ರೀಲಂಕಾ ವಿರುದ್ದದ ಸೀಮಿತ ಓವರ್ಗಳ ಸರಣಿಗಾಗಿ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ. ಬಹುತೇಕ ಯುವ ಆಟಗಾರರನ್ನು ಒಳಗೊಂಡಿರುವ ಈ ತಂಡವನ್ನು ಶಿಖರ್ ಧವನ್ ಮುನ್ನಡೆಸಲಿದ್ದಾರೆ. ಮುಂಬರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಈ ಸರಣಿ ಪ್ರಸ್ತುತ ತಂಡದಲ್ಲಿರುವ ಆಟಗಾರರಿಗೆ ಮಹತ್ವದ್ದಾಗಿದೆ. ಹೀಗಾಗಿ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆಯಲು ಅಭ್ಯಾಸ ಪಂದ್ಯದಲ್ಲೇ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಕಳೆದ ಎರಡು ದಿನಗಳ ಅಭ್ಯಾಸವನ್ನು ಗಮನಿಸಿರುವ ಟೀಮ್ ಇಂಡಿಯಾ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಹಾಗೂ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ ಶ್ರೀಲಂಕಾ ವಿರುದ್ದದ ಏಕದಿನ ಸರಣಿಗೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಆಯ್ಕೆ ಮಾಡಿದ್ದಾರೆ. ಆದರೆ ಈ ತಂಡದಿಂದ ಕೆಲ ಸ್ಟಾರ್ ಆಟಗಾರರನ್ನು ಕೈ ಬಿಟ್ಟಿರುವುದು ವಿಶೇಷ.
ವಿವಿಎಸ್ ಲಕ್ಷ್ಮಣ್ ಆಯ್ಕೆ ಮಾಡಿರುವ ತಂಡದಲ್ಲಿ ಶಿಖರ್ ಧವನ್ ಮತ್ತು ಪೃಥ್ವಿ ಶಾ ಅವರನ್ನು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. 3ನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್, 4ನೇ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್, ಹಾಗೂ 5ನೇ ಸ್ಥಾನದಲ್ಲಿ ಮನೀಶ್ ಪಾಂಡೆ ಅವರಿಗೆ ಸ್ಥಾನ ನೀಡಿದ್ದಾರೆ. ಇನ್ನು 6ನೇ ಕ್ರಮಾಂಕದಲ್ಲಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು 7ನೇ ಸ್ಥಾನದಲ್ಲಿ ಕ್ರುನಾಲ್ ಪಾಂಡ್ಯ ಅವರನ್ನು ಆಯ್ಕೆ ಮಾಡಿದ್ದಾರೆ.
ಇನ್ನು ಬೌಲಿಂಗ್ ವಿಭಾಗದಲ್ಲಿ ಇಬ್ಬರು ಸ್ವಿಂಗ್ ಬೌಲರ್ಗಳನ್ನು ಮತ್ತು ಇಬ್ಬರು ಸ್ಪಿನ್ನರ್ಗಳನ್ನು ಲಕ್ಷ್ಮಣ್ ಆಯ್ಕೆ ಮಾಡಿದ್ದಾರೆ. ಅವರೆಂದರೆ ವೇಗಿಗಳಾಗಿ ಭುವನೇಶ್ವರ್ ಕುಮಾರ್ ಮತ್ತು ದೀಪಕ್ ಚಹರ್ ಆಯ್ಕೆಯಾದರೆ, ಸ್ಪಿನ್ನರ್ಗಳಾಗಿ ಕುಲದೀಪ್ ಯಾದವ್ ಮತ್ತು ಯುಜ್ವೇಂದ್ರ ಚಾಹಲ್ಗೆ ಸ್ಥಾನ ನೀಡಿದ್ದಾರೆ. ಇದಾಗ್ಯೂ ವಿ.ವಿ.ಎಸ್.ಲಕ್ಷ್ಮಣ್ ಅವರು ರುತುರಾಜ್ ಗಾಯಕ್ವಾಡ್, ದೇವದತ್ ಪಡಿಕ್ಕಲ್, ನಿತೀಶ್ ರಾಣಾ ಮತ್ತು ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಿಲ್ಲ. ಹಾಗೆಯೇ ಬೌಲರುಗಳ ವಿಭಾಗದಿಂದ ನವದೀಪ್ ಸೈನಿ, ಚೇತನ್ ಸಕರಿಯಾ, ರಾಹುಲ್ ಚಹರ್, ಕೃಷ್ಣಪ್ಪ ಗೌತಮ್ ಮತ್ತು ವರುಣ್ ಚಕ್ರವರ್ತಿ ಅವರನ್ನು ಕೈ ಬಿಟ್ಟಿದ್ದಾರೆ.
ಅದೇ ರೀತಿ ಇರ್ಫಾನ್ ಪಠಾಣ್ ಅವರು ತಮ್ಮ ಇಲೆವನ್ ಇಲೆವನ್ನಲ್ಲಿ ವಿ.ವಿ.ಎಸ್.ಲಕ್ಷ್ಮಣ್ ಆಯ್ಕೆ ಮಾಡಿದ ತಂಡದಿಂದ ಒಂದು ಬದಲಾವಣೆ ಮಾಡಿಕೊಂಡಿದ್ದಾರೆ. ಅದರಂತೆ ಕ್ರುನಾಲ್ ಪಾಂಡ್ಯರ ಬದಲಿಗೆ ಹೆಚ್ಚುವರಿ ಬ್ಯಾಟ್ಸ್ಮನ್ ಆಗಿ ನಿತೀಶ್ ರಾಣಾ ಅವರನ್ನು ಸೇರಿಸಿಕೊಂಡಿದ್ದಾರೆ.
ಇರ್ಫಾನ್ ಪಠಾಣ್ ಆಯ್ಕೆ ಮಾಡಿರುವ ತಂಡ ಹೀಗಿದೆ: ಶಿಖರ್ ಧವನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ನಿತೀಶ್ ರಾಣಾ, ಸಂಜು ಸ್ಯಾಮ್ಸನ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಕುಲದೀಪ್ ಯಾದವ್ ಮತ್ತು ಯುಜ್ವೇಂದ್ರ ಚಹಲ್
(ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.) ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ