ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ಗೆ ಇಂದು (ಜೂ.18) ಚಾಲನೆ ದೊರೆಯಲಿದೆ. ಇಂಗ್ಲೆಂಡ್ ಸೌತಾಂಪ್ಟನ್ನಲ್ಲಿನ ದಿ ಏಗಾಸ್ ಬೌಲ್ ಮೈದಾನದಲ್ಲಿ ಐಸಿಸಿ ಟೆಸ್ಟ್ ಚಾಂಪಿಯನ್ ಕಿರೀಟಕ್ಕಾಗಿ ಭಾರತ-ನ್ಯೂಜಿಲೆಂಡ್ ತಂಡಗಳು ಸೆಣಸಲಿವೆ. ಉಭಯ ತಂಡಗಳು ಬಲಿಷ್ಠ ಆಟಗಾರರನ್ನೇ ಹೊಂದಿದ್ದು, ಅದರಲ್ಲೂ ನ್ಯೂಜಿಲೆಂಡ್ ತಂಡ ಇತ್ತೀಚೆಗೆ ಇಂಗ್ಲೆಂಡ್ ತಂಡವನ್ನು ಮಣಿಸಿ ಆತ್ಮ ವಿಶ್ವಾಸದಲ್ಲಿ ಪುಟಿದೇಳುತ್ತಿದೆ. ಇತ್ತ ಆಸ್ಟ್ರೇಲಿಯ ಹಾಗೂ ಇಂಗ್ಲೆಂಡ್ ವಿರುದ್ದ ಟೆಸ್ಟ್ ಸರಣಿ ಜಯಿಸಿರುವ ಟೀಮ್ ಇಂಡಿಯಾ ನ್ಯೂಜಿಲೆಂಡ್ಗೆ ಸೋಲುಣಿಸಿ ಚೊಚ್ಚಲ ಟೆಸ್ಟ್ ಚಾಂಪಿಯನ್ಶಿಪ್ ಕಿರೀಟ ತೊಡುವ ವಿಶ್ವಾಸದಲ್ಲಿದೆ. ಹೀಗಾಗಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಂದ್ಯ ಆರಂಭದ ಭಾರತೀಯ ಸಮಯ?
ಭಾರತದ ಸಮಯ ಮಧ್ಯಾಹ್ನ 3 ಗಂಟೆಗೆ (ಇಂಗ್ಲೆಂಡ್ ಕಾಲಮಾನ ಬೆಳಿಗ್ಗೆ 11 ಗಂಟೆ) ಪ್ರಾರಂಭವಾಗಲಿದೆ.
ಯಾವ ಚಾನೆಲ್ನಲ್ಲಿ ನೇರ ಪ್ರಸಾರ ವೀಕ್ಷಿಸಬಹುದು?
ಸ್ಟಾರ್ ಸ್ಟೋರ್ಟ್ಸ್ ನೆಟ್ವರ್ಕ್ನ ಬಹುತೇಕ ಸ್ಪೋರ್ಟ್ಸ್ ಚಾನೆಲ್ಗಳಲ್ಲಿ ನೇರ ಪ್ರಸಾರ ಇರಲಿದೆ. ಅಂದರೆ ಕನ್ನಡ ಸೇರಿದಂತೆ ಎಲ್ಲಾ ಪ್ರಾದೇಶಿಕ ಭಾಷೆಗಳ ಸ್ಟಾರ್ ಸ್ಪೋರ್ಟ್ಸ್ ಚಾನೆಲ್ಗಳಲ್ಲಿ ನೇರ ಪ್ರಸಾರವಾಗಲಿದೆ.
ಮೊಬೈಲ್ನಲ್ಲಿ ವೀಕ್ಷಿಸಬಹುದೇ?
ಡಿಸ್ನಿ + ಹಾಟ್‌ಸ್ಟಾರ್ ಆ್ಯಪ್ನಲ್ಲೂ ಲೈವ್ ಸ್ಟೀಮಿಂಗ್ ಇರಲಿದ್ದು, ಈ ಆ್ಯಪ್ನ ಚಂದಾದಾರರು ಪಂದ್ಯವನ್ನು ವೀಕ್ಷಿಸಬಹುದು.
ಉಭಯ ತಂಡಗಳು ಹೀಗಿವೆ:-
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯಾ ರಹಾನೆ (ಉಪನಾಯಕ), ರೋಹಿತ್ ಶರ್ಮಾ, ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ರಿಷಬ್ ಪಂತ್, ರವೀಂದ್ರ ಜಡೇಜಾ, ಆರ್. ಅಶ್ವಿನ್, ಮಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರಿತ್ ಬುಮ್ರಾ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ