HOME » NEWS » Sports » CRICKET WTC FINAL SOUTHAMPTON TEST DAY 2 BAD LIGHT FORCES PLAYERS OUT ZP

WTC Final: ಭಾರತ-ನ್ಯೂಜಿಲೆಂಡ್ ಫೈನಲ್ ಕದನ: ಮಂದ ಬೆಳಕಿನ ಹಿನ್ನೆಲೆ ಪಂದ್ಯ ಸ್ಥಗಿತ..!

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್, ರವೀಂದ್ರ ಜಡೇಜಾ, ರವಿ ಅಶ್ವಿನ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ

news18-kannada
Updated:June 19, 2021, 10:15 PM IST
WTC Final: ಭಾರತ-ನ್ಯೂಜಿಲೆಂಡ್ ಫೈನಲ್ ಕದನ: ಮಂದ ಬೆಳಕಿನ ಹಿನ್ನೆಲೆ ಪಂದ್ಯ ಸ್ಥಗಿತ..!
wtc final
  • Share this:
ಸೌತಂಪ್ಟನ್​ನಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಪಂದ್ಯದ 2ನೇ ದಿನದಾಟವನ್ನು ಮಂದ ಬೆಳಕಿನ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದೆ ಎಂದು ಐಸಿಸಿ ತಿಳಿಸಿದೆ. ಮೊದಲ ದಿನದಾಟದ ಸಂಪೂರ್ಣವಾಗಿ ಮಳೆಗೆ ಆಹುತಿಯಾದ ಕಾರಣ ಇಂದು ಪಂದ್ಯವನ್ನು ಆರಂಭಿಸಲಾಗಿತ್ತು. ಅದರಂತೆ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ನ್ಯೂಜಿಲೆಂಡ್​ ಮೊದಲ ಸೆಷನ್​ನಲ್ಲಿ ಉತ್ತಮ ದಾಳಿ ನಡೆಸಿತು.

ಟೀಮ್ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಮೊದಲ ವಿಕೆಟ್​ಗೆ 62 ರನ್​ಗಳ ಜೊತೆಯಾಟವಾಡಿದರು. ಈ ವೇಳೆ ಜೇಮಿಸನ್ ಎಸೆತದಲ್ಲಿ ಹಿಟ್​ಮ್ಯಾನ್ (34) ಟಿಮ್ ಸೌಥಿ ಹಿಡಿದ ಅತ್ಯುತ್ತಮ ಕ್ಯಾಚ್​ಗೆ ಬಲಿಯಾದರು. ಇದರ ಬೆನ್ನಲ್ಲೇ ವ್ಯಾಗ್ನರ್ ಎಸೆತದಲ್ಲಿ ಶುಭ್​ಮನ್ ಗಿಲ್ (28) ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

ಈ ಹಂತದಲ್ಲಿ ಜೊತೆಯಾದ ಚೇತೇಶ್ವರ ಪೂಜಾರ ಹಾಗೂ ನಾಯಕ ಕೊಹ್ಲಿ ಉತ್ತಮ ಜೊತೆಯಾಟವಾಡುವ ಭರವಸೆ ಮೂಡಿಸಿದರು. ಅದರಲ್ಲೂ ರಕ್ಷಣಾತ್ಮಕ ಆಟದೊಂದಿಗೆ ಎದುರಾಳಿ ಬೌಲರುಗಳನ್ನು ಕಾಡಿದ್ದ ಪೂಜಾರ 54 ಎಸೆತಗಳನ್ನು ಎದುರಿಸಿ ಗಟ್ಟಿಯಾಗಿ ನೆಲೆಯೂರುವ ಸೂಚನೆ ನೀಡಿದ್ದರು. ಆದರೆ ಈ ಹಂತದಲ್ಲಿ ಟ್ರೆಂಟ್ ಬೌಲ್ಟ್ ಎಲ್​ಬಿ ಬಲೆಗೆ ಬಿದ್ದ ಪೂಜಾರಾ (8) ಇನಿಂಗ್ಸ್ ಅಂತ್ಯಗೊಳಿಸಿದರು.

100 ರನ್ ಗಡಿದಾಟುವ ಮುನ್ನವೇ 3 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ನಾಯಕ ಕೊಹ್ಲಿ ಹಾಗೂ ಉಪನಾಯಕ ಅಜಿಂಕ್ಯ ರಹಾನೆ ಆಸರೆಯಾದರು. ಅದರಂತೆ 5ನೇ ವಿಕೆಟ್​ಗೆ ಅಜೇಯ 46 ರನ್​ಗಳ ಜೊತೆಯಾಟವಾಡಿ ತಂಡವನ್ನು ಸುಸ್ಥಿತಿಗೆ ಕೊಂಡೊಯ್ಯುವ ಸೂಚನೆ ನೀಡಿದರು. ಇದೇ ವೇಳೆ ಮೋಡ ಮುಸುಕಿನಿಂದ ಮಂದ ಬೆಳಕಾದ ಹಿನ್ನೆಲೆಯಲ್ಲಿ ಅಂಪೈರ್​ಗಳು ಎರಡನೇ ದಿನದಾಟವನ್ನು ಅಂತ್ಯಗೊಳಿಸಲು ನಿರ್ಧರಿಸಿದರು. ಸದ್ಯ ಟೀಮ್ ಇಂಡಿಯಾ 3 ವಿಕೆಟ್ ನಷ್ಟಕ್ಕೆ 146 ರನ್​ ಬಾರಿಸಿದ್ದು, ಕ್ರೀಸ್​ನಲ್ಲಿ ವಿರಾಟ್ ಕೊಹ್ಲಿ (44) ಹಾಗೂ ಅಜಿಂಕ್ಯ ರಹಾನೆ (29) ಇದ್ದಾರೆ.

ಉಭಯ ತಂಡಗಳು ಹೀಗಿವೆ:-
ನ್ಯೂಜಿಲೆಂಡ್ ಪ್ಲೇಯಿಂಗ್ ಇಲೆವೆನ್: ಟಾಮ್ ಲಾಥಮ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಬಿಜೆ ವಾಟ್ಲಿಂಗ್, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಕೈಲ್ ಜೇಮಿಸನ್, ನೀಲ್ ವಾಂಗ್ನರ್, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್
Youtube Video
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್, ರವೀಂದ್ರ ಜಡೇಜಾ, ರವಿ ಅಶ್ವಿನ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ
Published by: zahir
First published: June 19, 2021, 10:12 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories