ಭಾರತದ ಕ್ರಿಕೆಟಿಗ ರಿಷಬ್ ಪಂತ್ (Rishabh Pant) ಅವರು ಉತ್ತರಾಖಂಡದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಕಾರು (Car) ಅಪಘಾತವಾಗಿದೆ. ಡಿವೈಡರ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ರಿಷಭ್ ಪಂತ್ ಗಾಯಗೊಂಡಿದ್ದಾರೆ. ಉತ್ತರಾಖಂಡ್ನ ರೂರ್ಕಿ ಬಳಿ ಅಪಘಾತಕ್ಕೀಡಾದ ಕಾರನ್ನು ಪಂತ್ ಸ್ವತಃ ತಾವೇ ಓಡಿಸುತ್ತಿದ್ದರು ಎಂದು ಪೊಲೀಸ್ (Police) ಮೂಲಗಳು ತಿಳಿಸಿವೆ. ಇನ್ನೂ ಈ ಘಟನೆಯಲ್ಲಿ ರಿಷಬ್ ಪಂತ್ ಅವರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಪಂತ್ ಆರೋಗ್ಯದ ಕುರಿತು ಹೆಲ್ತ್ ಬುಲೇಟಿನ್ ಬಿಡುಗಡೆ ಆಗಿದ್ದು, ಪಂತ್ ಅವರನ್ನು ಐಸಿಯು ಅಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.
ಪಂತ್ ಹೆಲ್ತ್ ಬುಲೇಟಿನ್:
ರಿಷಭ್ ಪಂತ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿದ್ದು, ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ ಕಾರ್ಯದರ್ಶಿ ಸಿದ್ಧಾರ್ಥ್ ಸಾಹಿಬ್ ಸಿಂಗ್ ಮಾಹಿತಿ ನೀಡಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಪಂತ್ ಸದ್ಯ ಚಿಕಿತ್ಸೆಗೆ ಸ್ಪಂಧಿಸುತ್ತಿದ್ದಾರೆ. ಆದರೂ ಸಹ ಅವರ ಮೇಲೆ ಹೆಚ್ಚಿನ ನಿಗಾ ಇರಿಸಲಾಗಿದೆ. ಅವರು ಆದಷ್ಟು ಬೇಗ ಗುಣಮುಖರಾಗಲಿದ್ದಾರೆ‘ ಎಂದು ಹೇಳಿದ್ದಾರೆ.
ಪಂತ್ ಸದ್ಯ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆತನ ಬೆನ್ನು ಮತ್ತು ತಲೆಗೆ ದೊಡ್ಡ ಗಾಯಗಳಾಗಿವೆ ಎಂದು ವರದಿಯಾಗಿದೆ. ರಿಷಬ್ ಪಂತ್ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ರಿಷಭ್ ಪಂತ್ ಕಾಲು ಮುರಿತ:
ಪ್ರತ್ಯಕ್ಷದರ್ಶಿಗಳ ಪ್ರಕಾರ, ರಿಷಬ್ ಅವರ ಕಾರು ರೇಲಿಂಗ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಬಹಳ ಕಷ್ಟಪಟ್ಟು ಬೆಂಕಿಯನ್ನು ಹತೋಟಿಗೆ ತರಲಾಯಿತು. ಅದೇ ಸಮಯದಲ್ಲಿ, ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ರಿಷಬ್ ಪಂತ್ ಅವರನ್ನು ದೆಹಲಿ ರಸ್ತೆಯಲ್ಲಿರುವ ಸಕ್ಷಮ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಉತ್ತರಾಖಂಡದ ಮಂಗಳೌರ್ ಬಳಿ ಇಂದು ಬೆಳಗ್ಗೆ 5.15ರ ಸುಮಾರಿಗೆ ಅಪಘಾತಕ್ಕೀಡಾಗಿದ್ದಾರೆ.
ಇದನ್ನೂ ಓದಿ: Rishabh Pant: ಅಗ್ನಿಜ್ವಾಲೆಯಿಂದ ರಿಷಭ್ ಹೊರಬಂದಿದ್ದೇ ರೋಚಕ, ಜೀವನ್ಮರಣ ಹೋರಾಟದಲ್ಲಿ ಪಂತ್!
ಮತ್ತೊಂದೆಡೆ, ಪಂತ್ ಅಪಘಾತದ ಸುದ್ದಿಯಿಂದ ಕ್ರಿಕೆಟ್ ಅಭಿಮಾನಿಗಳು ಮತ್ತು ಕ್ರಿಕೆಟಿಗರು ಆಘಾತಕ್ಕೊಳಗಾಗಿದ್ದಾರೆ. ರಿಷಬ್ ಪಂತ್ ಗೆ ಧೈರ್ಯ ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. ರಿಷಬ್ ಪಂತ್ ಅಪಘಾತಕ್ಕೆ ಸಂಬಂಧಿಸಿದ ಫೋಟೋಗಳು ನೆಟ್ನಲ್ಲಿ ವೈರಲ್ ಆಗುತ್ತಿವೆ. ರಿಷಭ್ ಪಂತ್ ತಮ್ಮ ತಾಯಿ ಸರೋಜಾ ಪಂತ್ ಅವರನ್ನು ಭೇಟಿ ಮಾಡಲುವ ಸಲುವಾಗಿ ತಾವು ಒಬ್ಬರೇ ಸ್ವತಃ ಕಾರನ್ನು ಡ್ರೈವಿಂಗ್ ಮಾಡಿಕೊಂಡು ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಈ ವರ್ಷ ಟೀಂ ಇಂಡಿಯಾಗೆ ಕಂಬ್ಯಾಕ್ ಮಾಡುವುದು ಡೌಟ್?:
ಫೆಬ್ರವರಿ 9 ರಿಂದ ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ಆರಂಭವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ತಲುಪಲು ಭಾರತವು ಈ 4 ಟೆಸ್ಟ್ ಸರಣಿಯನ್ನು ಉತ್ತಮ ಅಂತರದಿಂದ ಗೆಲ್ಲಬೇಕಾಗಿದೆ. ಪಂತ್ ಈ ಸರಣಿಗೆ ಫಿಟ್ ಆಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.
ಹಾಗಾಗಿ, ಭಾರತೀಯ ಟೆಸ್ಟ್ ತಂಡಕ್ಕೆ ಫಾರ್ಮ್ ವಿಷಯದಲ್ಲಿ, ಪಂತ್ ಅಪಘಾತವು ಟೀಮ್ ಇಂಡಿಯಾಕ್ಕೆ ದೊಡ್ಡ ಹೊಡೆತವಾಗಿದೆ, ಏಕೆಂದರೆ ಪಂತ್ ಪ್ರಸ್ತುತ ರೋಹಿತ್ ಮತ್ತು ಕೊಹ್ಲಿಗಿಂತ ಪ್ರಮುಖ ಆಟಗಾರರಾಗಿದ್ದಾರೆ. ಇನ್ನೊಂದೆಡೆ ಐಪಿಎಲ್ ಸೀಸನ್ ಸಮೀಪಿಸುತ್ತಿದೆ. ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದಾರೆ. ಇದೀಗ ಅವರು ಐಪಿಎಲ್ಗೆ ಸಂಪೂರ್ಣ ಫಿಟ್ ಆಗುತ್ತಾರಾ ಎಂಬ ಟೆನ್ಷನ್ ಕೂಡ ಆ ಫ್ರಾಂಚೈಸಿಗೆ ಹೆಚ್ಚಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ