ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು 2020-21ನೇ ಸಾಲಿನ ಏಕಲವ್ಯ (Ekalavya Award), ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾ ರತ್ನ ಮತ್ತು 2021-22ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಮಾತನಾಡಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2ರಷ್ಟುಮೀಸಲಾತಿ ನೀಡಲು ತೀರ್ಮಾನಿಸಲಾಗಿದ್ದು, ಪ್ಯಾರಿಸ್ ಒಲಿಂಪಿಕ್‌ನಲ್ಲಿ ಭಾಗವಹಿಸಲು ರಾಜ್ಯದ ಆಯ್ದ 75 ಕ್ರೀಡಾಪಟುಗಳಿಗೆ ವಿಶ್ವಮಟ್ಟದ ತರಬೇತಿ ನೀಡಲಾಗುತ್ತಿದೆ ಎಂದು ಭರವಸೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಕಬಡ್ಡಿ ಪಟು ಪ್ರಶಾಂತ್ ಕುಮಾರ್, ಹಾಕಿ ಪ್ರಧಾನ ಸೋಮಣ್ಣ, ಟಿಟಿ ಪಟು ಅನಘ್ರ್ಯ ಮಂಜುನಾಥ್, ಕ್ರಿಕೆಟಿಗ ಕರುಣ್ ನಾಯರ್ ಸೇರಿದಂತೆ 15 ಮಂದಿಗೆ ಏಕಲವ್ಯ ಪ್ರಶಸ್ತಿ ವಿತರಣೆ ಮಾಡಲಾಗಿದೆ.
15 ಮಂದಿಗೆ ಏಕಲವ್ಯ ಪ್ರಶಸ್ತಿ:
ಇನ್ನು, ಈ ಬಾರಿ ಒಟ್ಟು 15 ಕ್ರೀಡಾ ಸಾಧಕರಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈಜು ಪಟು ಲಿಖಿತ್, ಕ್ರಿಕೆಟಿಗ ಕರುಣ್ ನಾಯರ್, ಕಬಡ್ಡಿ ಪಟು ಪ್ರಶಾಂತ್ ಕುಮಾರ್, ಹಾಕಿ ಪ್ರಧಾನ ಸೋಮಣ್ಣ, ಬ್ಯಾಡ್ಮಿಂಟನ್ ತಾರೆ ಅಶ್ವಿನಿ ಭಟ್, ಟಿಟಿ ಪಟು ಅನಘ್ರ್ಯ ಮಂಜುನಾಥ್, ಅಥ್ಲೆಟಿಕ್ಸ್ ಜೀವನ್ ಕೆ.ಎಸ್, ರಾಧಾ ವಿ. ಸೇರಿದಂತೆ 15 ಮಂದಿಗೆ ಏಕಲವ್ಯ ಪ್ರಶಸ್ತಿ ದೊರಕಿದೆ. ಇದರ ಜೊತೆ ವಿಶೇಷವಾಗಿ ಚಿತ್ರದುರ್ಗ ಜಿಲ್ಲೆಯ ಬೊಮ್ಮಸಂದ್ರ ಗ್ರಾಮದ ವಿದ್ಯಾರ್ಥಿನಿ ಆದ ವಿ.ರಾಧಾ (2 BA) ಇವರು ಏಕಲವ್ಯ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಇದರೊಂದಿಗೆ 14 ಮಂದಿಗೆ ಕ್ರೀಡಾ ರತ್ನ ಪ್ರಶಸ್ತಿ ವಿತರಿಸಲಾಗಿದೆ. ಇದರಲ್ಲಿ ಬಾಲ್ ಬ್ಯಾಡ್ಮಿಂಟನ್‌ನ ಕಿರಣ್ ಕುಮಾರ್, ಕಂಬಳ ಓಟಗಾರ ಗೋಪಾಲ ನಾಯ್ಕ್, ಪ್ಯಾರಾ ಈಜು ಪಟು ಶಶಾಂಕ್, ಕುಸ್ತಿಯ ಸೂರಜ್ ಸೇರಿ 14 ಮಂದಿ ಕ್ರೀಡಾ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇದನ್ನೂ ಓದಿ: Shubman Gill: ತನಗಿಂತ 5 ವರ್ಷ ದೊಡ್ಡವಳೊಂದಿಗೆ ಡೇಟಿಂಗ್ ಮಾಡ್ತಿದ್ದಾರಂತೆ ಶುಭಮನ್ ಗಿಲ್, ಯಾರು ಆ ಬಾಲಿವುಡ್ ನಟಿ?
1 ಲಕ್ಷ ನಗದು ಪುರಸ್ಕಾರ:
ಇನ್ನು, ಪ್ರಶಸ್ತಿ ಕಾರ್ಯಕ್ರಮದಲ್ಲಿ ಮಾತನಾಡಿದ ಕ್ರೀಡಾ ಸಚಿವ ನಾರಾಯಣ ಗೌಡ, ‘ಸಹಸ್ರ ಕ್ರೀಡಾ ಪ್ರತಿಭಾ ಪುರಸ್ಕಾರ ಯೋಜನೆಯಡಿ 750 ಕ್ರೀಡಾಪಟುಗಳಿಗೆ ತಲಾ ಒಂದು ಲಕ್ಷ ರು. ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು. ಇದರ ಜೊತೆಗೆ ಸಿದ್ದಿ ಜನಾಂಗದ ಮಕ್ಕಳಿಗೆ ವಿಶೇಷ ತರಬೇತಿ ಮತ್ತು ಅಮೃತ ಕ್ರೀಡಾ ದತ್ತು ಯೋಜನೆಯಲ್ಲಿ 75 ಕ್ರೀಡಾಪಟುಗಳಿಗೆ ತರಬೇತಿ ನೀಡಲಾಗುತ್ತದೆ. ಮುಖ್ಯವಾಗಿ 30 ಮಂದಿ ಕಡು ಬಡಕಾರ್ಮಿಕರ ಮಕ್ಕಳಿಗೆ ಉಚಿತ ಪೈಲಟ್ ತರಬೇತಿ ನೀಡುವ ಯೋಜನೆ ಇದ್ದು, ಡಾ.ಆರ್.ಬಾಲಸುಬ್ರಹ್ಮಣ್ಯಂ ನೇತೃತ್ವದ ಸಮಿತಿ ನೀಡಿರುವ ಯುವನೀತಿಯನ್ನೂ ಶೀಘ್ರದಲ್ಲಿಯೇ ಜಾರಿಗೊಳಿಸಲಾಗುವುದು‘ ಎಂದು ಹೇಳಿದ್ದಾರೆ.
ಇದನ್ನೂ ಓದಿ: Asia Cup 2022: ದಾಖಲೆ ಬರೆದ ಇಂಡೋ-ಪಾಕ್ ಕದನ, ಆದ್ರೂ RCB ರೆಕಾರ್ಡ್ ಹತ್ರ ಬರೋಕೇ ಎರಡು ಗುಂಡಿಗೆ ಬೇಕು!
ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ:
ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಆರ್ಥಿಕ ನೆರವು ಸೇರಿ ಎಲ್ಲಾ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ, ‘ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸುವುದು ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ ನಮ್ಮ ಸರ್ಕಾರ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಬಜೆಟ್‍ನಲ್ಲಿ ನಾನು ಇದಕ್ಕಾಗಿ ವಿಶೇಷ ಅನುದಾನವನ್ನು ಸಹ ಒದಗಿಸಿದ್ದೇನೆ. ಒಲಿಂಪಿಕ್ ಹಾಗೂ ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಪದಕ ಗೆದ್ದವರಿಗೆ ಪ್ರೋತ್ಸಾಹ ಧನ ಸಹ ನೀಡಲಾಗಿದೆ. ಮುಂದಿನ ದಿನಗಳಲ್ಲಿಯೂ ಈ ಪ್ರೋತ್ಸಾಹ ನಮ್ಮ ಸರ್ಕಾರದಿಂದ ಕ್ರೀಡಾ ಇಲಾಖೆಗೆ ದೊರಕಲಿದೆ‘ ಎಂದು ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ