ವಿಮಾನ ದುರಂತ: ಫುಟ್​​ಬಾಲ್ ಆಟಗಾರರ ದುರಂತ ಸಾವು

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಪಲ್ಮಾಸ್‌ನಿಂದ 800 ಕಿಲೋಮೀಟರ್ ದೂರದ ಗೊಯಾನಿಯಾದಲ್ಲಿ ಸೋಮವಾರ ನಡೆಯಲಿದ್ದ ವಿಲಾ ನೋವಾ ತಂಡದ ಎದುರಿನ ಪಂದ್ಯದಲ್ಲಿ ಪಾಲ್ಗೊಳ್ಳಲು ಆಟಗಾರರು ತೆರಳುತ್ತಿದ್ದರು.

  • Share this:

    ಸಾವೊ ಪೌಲೊ: ಲಘು ವಿಮಾನವೊಂದು ಟೇಕ್ ಆಫ್ ಆಗುವ ವೇಳೆ ಅಪಘಾತಗೀಡಾಗಿದ್ದು, ವಿಮಾನದಲ್ಲಿದ್ದ ಫುಟ್ ಬಾಲ್ ಆಟಾರರು ಸಾವನ್ನಪ್ಪಿದ್ದಾರೆ. ಪಲ್ಮಾಸ್ ಫುಟ್ಬಾಲ್ ಕ್ಲಬ್​ನ ಅಧ್ಯಕ್ಷ ಮತ್ತು ನಾಲ್ವರು ಆಟಗಾರರು ಈ ವಿಮಾನ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಾಗಿದ್ದಾರೆ. ಬ್ರೆಜಿಲಿಯನ್ ಕಪ್ ಟೂರ್ನಿಯ ಪಂದ್ಯದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ತಂಡವನ್ನು ಕರೆದೊಯ್ಯಲು ಸಜ್ಜಾಗಿದ್ದ ಲಘು ವಿಮಾನ ಟೇಕ್ ಆಫ್ ಸಂದರ್ಭದಲ್ಲಿ ಅಪಘಾತಕಕ್ಕೆ ಈಡಾಗಿತ್ತು.


    ಮೂಲಗಳ ಪ್ರಕಾರ ಕ್ಲಬ್ ಅಧ್ಯಕ್ಷ ಲೂಕಾಸ್‌ ಮೇರಾ, ಆಟಗಾರರಾದ ಲೂಕಾಸ್ ಪ್ರಕ್ಸಿಡಿಸ್‌, ಗುಲೆರ್ಮೆ ನೊಯೆ, ರಣುಲ್‌ ಮತ್ತು ಮಾರ್ಕಸ್ ಮೋಲಿನರಿ ಸಾವಿಗೀಡಾಗಿದ್ದಾರೆ ಎಂದು ಕ್ಲಬ್ ತಿಳಿಸಿದೆ. ದುರಂತದಲ್ಲಿ ಲಘು ವಿಮಾನದ ಪೈಲಟ್‌ ಕೂಡ ಸಾವಿಗೀಡಾಗಿದ್ದಾರೆ.


    India vs England: ಭಾರತ-ಇಂಗ್ಲೆಂಡ್ ಟಿ-20 ಸರಣಿ ರೋಚಕತೆ ಸೃಷ್ಟಿಸಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್


    ಪಲ್ಮಾಸ್‌ನಿಂದ 800 ಕಿಲೋಮೀಟರ್ ದೂರದ ಗೊಯಾನಿಯಾದಲ್ಲಿ ಸೋಮವಾರ ನಡೆಯಲಿದ್ದ ವಿಲಾ ನೋವಾ ತಂಡದ ಎದುರಿನ ಪಂದ್ಯದಲ್ಲಿ ಪಾಲ್ಗೊಳ್ಳಲು ಆಟಗಾರರು ತೆರಳುತ್ತಿದ್ದರು. ಪಲ್ಮಾಸ್‌ ಬಳಿಯ ಕಿರು ವಾಯುನೆಲೆ ಟೆಕಾಟಿನೆನ್ಸ್‌ ಏವಿಯೇಷನ್ ಅಸೋಸಿಯೇಷನ್‌ನಿಂದ ಟೇಕ್ ಆಫ್‌ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿತು.


    ಈ ಹಿಂದೆ 2016ರಲ್ಲಿ ಮೆಡಿಲಿನ್‌ ಹೊರವಲಯದ ಗುಡ್ಡದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ತಂಡವೊಂದರ ಎಲ್ಲ ಆಟಗಾರರು ಅಸುನೀಗಿದ್ದರು. ಗೊಯಾಸ್‌ನಲ್ಲಿ ಎರಡು ವರ್ಷಗಳ ಹಿಂದೆ ಹೆಲಿಕಾಪ್ಟರ್ ಪತನಗೊಂಡ ಕಾರಣ ಬ್ರೆಜಿಲ್ ತಂಡದ ಮಾಜಿ ಫರ್ನಾಂಡೊ ನಿಧನರಾಗಿದ್ದರು.

    Published by:Vinay Bhat
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು