ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ (IPL 2023) ಸೀಸನ್‌ನ ಸರಿಸುಮಾರು ಕೊನೆಯ ಹಂತಕ್ಕೆ ಬಂದು ನಿಂತಿದೆ. ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ 4 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ (CSK vs GT) ಎದುರು ಸೆಣಸಲಿದೆ. ಕಳೆದ ಋತುವಿನಲ್ಲಿ ಮಹೇಂದ್ರ ಸಿಂಗ್ ಧೋನಿ (MS Dhoni) ತಂಡ 9ನೇ ಸ್ಥಾನದಲ್ಲಿತ್ತು, ಆದರೆ ಈ ಬಾರಿ ಅಬ್ಬರದ ಪ್ರದರ್ಶನ ನೀಡಿ ಗುಂಪು ಹಂತವನ್ನು 2ನೇ ಸ್ಥಾನದ ಮೂಲಕ ಪ್ಲೇಆಫ್ಗೆ ಪ್ರವೇಶಿಸಿದ್ದಾರೆ. ಈಗಾಗಲೇ ಟಾಸ್ ಆಗಿದ್ದು, ಟಾಸ್ ಗೆದ್ದ ಗುಜರಾತ್ ಟೈಟನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಐಪಿಎಲ್ 2023 ಜೆರ್ನಿ:
ಈ ಋತುವಿನಲ್ಲಿ ಗುಜರಾತ್ ಟೈಟಾನ್ಸ್ ತಂಡ ಕಳೆದ ಬಾರಿಯಂತೆ ತನ್ನ ಆಟದಲ್ಲಿ ಸ್ಥಿರತೆ ತೋರಿಸಿದೆ. ಹಾರ್ದಿಕ್ ಪಾಂಡ್ಯ ಪಡೆ 14 ಪಂದ್ಯಗಳಲ್ಲಿ 10ರಲ್ಲಿ ಗೆದ್ದು 20 ಅಂಕ ಗಳಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ 14 ಲೀಗ್ ಪಂದ್ಯಗಳನ್ನು ಆಡಿ 8 ಪಂದ್ಯಗಳನ್ನು ಗೆದ್ದುಕೊಂಡಿದ್ದರೆ 1 ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. 17 ಅಂಕಗಳೊಂದಿಗೆ ತಂಡವು ಎರಡನೇ ಸ್ಥಾನವನ್ನು ಪಡೆದುಕೊಂಡು ಕ್ವಾಲಿಫೈರ್‌ಗೆ ಸ್ಥಾನ ಗಳಿಸಿತು. ಇನ್ನು, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ಐಪಿಎಲ್‌ನಲ್ಲಿ 3 ಬಾರಿ ಮುಖಾಮುಖಿಯಾಗಿವೆ. ಚೆನ್ನೈ 0 ಪಂದ್ಯಗಳನ್ನು ಗೆದ್ದಿದ್ದರೆ ಗುಜರಾತ್ ಟೈಟಾನ್ಸ್ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದಿದೆ.
ಹವಾಮಾನ ಮತ್ತು ಪಿಚ್ ವರದಿ:
ಚೆಪಾಕ್‌ನಲ್ಲಿನ ಪಿಚ್ ನಿಧಾನಗತಿಯಲ್ಲಿರುತ್ತದೆ ಮತ್ತು ನಿಧಾನಗತಿಯ ಬೌಲರ್‌ಗಳಿಗೆ ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಆದಾಗ್ಯೂ, ಬ್ಯಾಟರ್‌ಗಳು ಹೆಚ್ಚು ಬಲಿಷ್ಠವಾಗಿ ಕಾಣುತ್ತದೆ. ಇದರಿಂದಾಗಿ ದೊಡ್ಡ ಮೊತ್ತದ ಸ್ಕೋರ್ ಹೊರಬರುವ ಸಾಧ್ಯತೆ ಇದ್ದು, ಬಿಗ್ ಮ್ಯಾಚ್ ಆಗಲಿದೆ. ಚೆನ್ನೈನಲ್ಲಿ ಹವಾಮಾನವು ಇಂದು ಉತ್ತಮವಾಗಿದೆ. ತಾಪಮಾನವು ಸುಮಾರು 32 ° C ಇದೆ. 79% ಆರ್ದ್ರತೆ ಮತ್ತು 23 km/h ಗಾಳಿಯ ವೇಗವನ್ನು ನಿರೀಕ್ಷಿಸಲಾಗಿದೆ. ಪಂದ್ಯದ ವೇಳೆ ಶೇ.5ರಷ್ಟು ಮಳೆಯಾಗುವ ಸಾಧ್ಯತೆ ಇದೆ.
ಇದನ್ನು ಓದಿ: IPL 2023: ಇದೇ ಕಾರಣಕ್ಕೆ ಫ್ಲೇಆಫ್‌ನಿಂದ ಹೊರಬಿತ್ತು RCB! ತಪ್ಪು ತಿದ್ದಿಕೊಳ್ಳದಿದ್ರೆ ಮುಂದಿನ ವರ್ಷವೂ ಕಪ್ ನಮ್ದಲ್ಲ!
ಧೋನಿ ಮಾಸ್ಟರ್ ಪ್ಲ್ಯಾನ್:
ಐಪಿಎಲ್‌ನಲ್ಲಿ ಇದುವರೆಗೆ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ 3 ಪಂದ್ಯಗಳು ನಡೆದಿವೆ. ಈ ಎಲ್ಲಾ ಪಂದ್ಯಗಳಲ್ಲಿ ಧೋನಿ ಪಡೆ ಸೋಲು ಕಂಡಿದೆ. ಆದರೆ, ಎರಡೂ ತಂಡಗಳು ಪ್ಲೇ ಆಫ್‌ನಲ್ಲಿ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ನಾಲ್ಕು ಬಾರಿ ಗೆದ್ದಿರುವ ಚೆನ್ನೈ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ತಂಡಗಳು ಮೊದಲ ಕ್ವಾಲಿಫೈಯರ್‌ನಲ್ಲಿ ಗೆದ್ದು ಫೈನಲ್‌ಗೆ ಲಗ್ಗೆ ಇಡಲು ಪ್ರಯತ್ನಿಸಲಿವೆ. ಸೋತ ತಂಡ ಎರಡನೇ ಕ್ವಾಲಿಫೈಯರ್ ನಲ್ಲಿ ಮುಂಬೈ ಇಂಡಿಯನ್ಸ್ ಅಥವಾ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಬೇಕಾಗುತ್ತದೆ.
ಚೆಪಾಕ್‌ನಲ್ಲಿ ಮಹಿ ಅಗ್ರ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿಯಬಹುದು. ಚೆನ್ನೈ ನಾಯಕ ಕಳೆದ ಐದು ಪಂದ್ಯಗಳಲ್ಲಿ ಮೂರು ಬಾರಿ ಬ್ಯಾಟಿಂಗ್ ಸ್ಥಾನವನ್ನು ಬದಲಾಯಿಸಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಧೋನಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದಿದ್ದರು. ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅವರು 8 ನೇ ಸ್ಥಾನದಲ್ಲಿ ಕ್ರೀಸ್‌ಗೆ ಬಂದಿದ್ದರು.
ಚೆನ್ನೈ - ಗುಜರಾತ್ ಪ್ಲೇಯಿಂಗ್ 11:
ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ 11: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯೀನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (w/c), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ.
ಗುಜರಾತ್ ಟೈಟನ್ಸ್ ಪ್ಲೇಯಿಂಗ್ 11: ಶುಭಮನ್ ಗಿಲ್, ವೃದ್ಧಿಮಾನ್ ಸಹಾ (WK), ಹಾರ್ದಿಕ್ ಪಾಂಡ್ಯ (C), ದಾಸುನ್ ಶನಕ, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ದರ್ಶನ್ ನಲ್ಕಂಡೆ, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ