ಭಾರತ ಕ್ರಿಕೆಟ್ ತಂಡದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಅವರು ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಅವರೊಂದಿಗಿನ ಎರಡು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ, ಇಬ್ಬರೂ ಆಟಗಾರರು ವಿಂಟೇಜ್ ಬೈಕ್‌ನಲ್ಲಿ (Bike) ಕುಳಿತುಕೊಂಡಿದ್ದಾರೆ. ಈ ಫೋಟೋವನ್ನು ಹಂಚಿಕೊಳ್ಳುವಾಗ ಪಾಂಡ್ಯ, "ಶೋಲೆಯ ಎರಡನೇ ಭಾಗ ಶೀಘ್ರದಲ್ಲೇ ಬರಲಿದೆ" ಎಂದು ಹೇಳಿದ್ದಾರೆ. ಪಾಂಡ್ಯ ಅವರು ಮಹಿ ಭಾಯ್ ಅವರಿಂದ ಸ್ಫೂರ್ತಿ ಪಡೆದಿದ್ದಾರೆ ಮತ್ತು ಧೋನಿಯಂತೆ ಮೈದಾನದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಅನೇಕರು ಪಾಂಡ್ಯ ಅವರನ್ನು ಧೋನಿ ಅವರ ಶಿಷ್ಯ ಎಂದೇ ಹೇಳುತ್ತಾರೆ.
ಒಟ್ಟಿಗೆ ಕಾಣಿಸಿಕೊಂಡ ಗುರು - ಶಿಷ್ಯರು:
ಇನ್ನು, ಹಾರ್ದಿಕ್ ಪಾಂಡ್ಯ ಮತ್ತು ಧೋನಿ ಅವರ ಸ್ನೇಹವು ಕ್ರಿಕೆಟ್ ಲೋಕದಲ್ಲಿ ಪ್ರಸಿದ್ಧವಾಗಿದೆ. ಇಬ್ಬರೂ ಆಟಗಾರರು ಮೈದಾನದಲ್ಲಿ ಪರಸ್ಪರ ಅನ್ಯೀನ್ಯವಾಗಿರುತ್ತಿದ್ದರು. ಪ್ರಸ್ತುತ, ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾದ ನಂತರ ಐಪಿಎಲ್‌ನಲ್ಲಿ ಸಕ್ರಿಯರಾಗಿದ್ದಾರೆ. ಅದೇ ಸಮಯದಲ್ಲಿ, ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡದ ನಾಯಕತ್ವವನ್ನು ಪಾಂಡ್ಯಗೆ ನೀಡಲಾಗಿದೆ.
Sholay 2 coming soon 😉 pic.twitter.com/WixkPuBHg0
— hardik pandya (@hardikpandya7) January 26, 2023
ಧೋನಿಗಿದು ಕೊನೆ ಐಪಿಎಲ್:
ಐಪಿಎಲ್ 2023ರಲ್ಲಿ ಧೋನಿ ಈ ಬಾರಿ ಕಣಕ್ಕಿಳಿಯುವುದು ಪಿಕ್ಸ್ ಆಗಿದೆ. ಆದರೆ ಈ ಬಾರಿಯ ಐಪಿಎಲ್ ಬಳಿಕ ಧೋನಿ ಐಪಿಎಲ್ನಿಂದಲೂ ನಿವೃತ್ತಿ ಘೋಷಿಸುವ ಸಾಧ್ಯತೆ ಹೆಚ್ಚಿದೆ. ಎಂಎಸ್ ಧೋನಿ ಅವರು 15 ಆಗಸ್ಟ್ 2020 ರಂದು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಆದರೆ ಇನ್ನು ಕೆಲವೇ ದಿನಗಳಲ್ಲಿ ಧೋನಿ ಅಭಿಮಾನಿಗಳ ಅವರನ್ನು ಮತ್ತೆ ಮೈದಾನದಲ್ಲಿ ನೋಡಬಹುದಾಗಿದೆ. ಐಪಿಎಲ್ 16ನೇ ಸೀಸನ್ ನಲ್ಲಿ ಸಿಎಸ್ಕೆ ನಾಯಕನಾಗಿ ಮಹಿ ಕಾಣಿಸಿಕೊಳ್ಳಲಿದ್ದಾರೆ. ಋತುವಿನ ಆರಂಭಕ್ಕೂ ಮುನ್ನ ಅಭ್ಯಾಸ ಆರಂಭಿಸಿದ್ದಾರೆ. ಕೆಲವು ದಿನಗಳ ಹಿಂದೆ ಅವರು ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿರುವುದು ಕಂಡುಬಂದಿದೆ.
ಐಪಿಎಲ್ ಬಗ್ಗೆ ಮಾತನಾಡುತ್ತಾ, ಅವರು ತಮ್ಮ ಐಪಿಎಲ್ ತಂಡ ಚೆನ್ನೈ ಸೂಪರ್ ಕಿಂಗ್ಸ್‌ಗೆ 4 ಬಾರಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಅವರು 2022ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ತೊರೆದರು. ಅವರ ಸ್ಥಾನಕ್ಕೆ ಫ್ರಾಂಚೈಸಿ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ನಾಯಕನನ್ನಾಗಿ ಮಾಡಿತ್ತು.
ಕಿವೀಸ್ ವಿರುದ್ಧ ಭಾರತ ತಂಡ:
ಹಾರ್ದಿಕ್ ಪಾಂಡ್ಯ (ನಾಯಕ) , ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರಿತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಪೃಥ್ವಿ ಶಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಯಾ ಸುಂದರವ್, ಕುಲ್ದೀಪ್ ಯಾ ಸುಂದರವ್, ಯುಜ್ವೇಂದ್ರ ಚಾಹಲ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ ಮತ್ತು ಮುಖೇಶ್ ಕುಮಾರ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ