ಆಸ್ಟ್ರೇಲಿಯಾ ತಂಡ ಮುಂಬರುವ ಭಾರತ (IND vs AUS ODI Series) ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ತನ್ನ 17 ಸದಸ್ಯರ ತಂಡವನ್ನು ಪ್ರಕಟಿಸಿದೆ. ಡ್ಯಾಶಿಂಗ್ ಆಲ್ ರೌಂಡರ್ಗಳಾದ ಗ್ಲೆನ್ ಮ್ಯಾಕ್ಸ್ ವೆಲ್ (Glenn Maxwell) ಮತ್ತು ಮಿಚೆಲ್ ಮಾರ್ಷ್ (Mitchell Marsh) ಕಾಂಗರೂ ತಂಡಕ್ಕೆ ಮರಳಿದ್ದಾರೆ. 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಮಾರ್ಚ್ 17 ರಂದು ನಡೆಯಲಿದೆ. ಮುಂಬರುವ ಏಕದಿನ ವಿಶ್ವಕಪ್ (ODI World Cup 2023) ತಯಾರಿಗೆ ಈ ಸರಣಿ ಮಹತ್ವದ್ದಾಗಿದೆ. ಈ ವರ್ಷ ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ.
ಭಾರತ ವಿರುದ್ಧದ ಆಸ್ಟ್ರೇಲಿಯಾ ಏಕದಿನ ತಂಡ:
ಪ್ಯಾಟ್ ಕಮ್ಮಿನ್ಸ್ (ಸಿ), ಸೀನ್ ಅಬಾಟ್, ಆಶ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಜ್ಯೆ ರಿಚರ್ಡ್‌ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸಿಟೋನಿಸ್ , ಡೇವಿಡ್ ವಾರ್ನರ್ ಮತ್ತು ಆಡಮ್ ಝಂಪಾ.
SQUAD: Glenn Maxwell and Mitch Marsh are set to return to Australian colours for the three-match ODI series against India in March pic.twitter.com/tSePIVUQ0W
— Cricket Australia (@CricketAus) February 23, 2023
ಎಡಗೈ ಸ್ಫೋಟಕ ಓಪನರ್ ಡೇವಿಡ್ ವಾರ್ನರ್, ಆಷ್ಟನ್ ಅಗರ್ ಮತ್ತು ಪ್ಯಾಟ್ ಕಮಿನ್ಸ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಮೂವರು ಆಟಗಾರರು ಬೇರೆ ಬೇರೆ ಕಾರಣಗಳಿಂದ ಟೆಸ್ಟ್ ಸರಣಿಯನ್ನು ಮಧ್ಯದಲ್ಲೇ ಬಿಟ್ಟು ಆಸ್ಟ್ರೇಲಿಯಾಕ್ಕೆ ಮರಳಿದ್ದರು. ಗಾಯದ ಸಮಸ್ಯೆಯಿಂದಾಗಿ ವಾರ್ನರ್ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ, ಆದರೆ ಆಷ್ಟನ್ ಅಗರ್ ಅವರನ್ನು ದೇಶೀಯ ಪಂದ್ಯಗಳನ್ನು ಆಡಲು ಟೆಸ್ಟ್ ತಂಡದಿಂದ ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಧರಿಸಿತ್ತು ಎನ್ನಲಾಗಿದೆ. ದೆಹಲಿ ಟೆಸ್ಟ್ ಮುಗಿದ ನಂತರ, ಕ್ಯಾಪ್ಟನ್ ಪ್ಯಾಟ್ ಕಮಿನ್ಸ್ ಕೂಡ ವೈಯಕ್ತಿಕ ಕಾರಣಗಳಿಂದ ಮನೆಗೆ ಮರಳಿದರು.
ಇದನ್ನೂ ಓದಿ: IPL 2023: RCB ತಂಡಕ್ಕೆ ಶಾಕ್ ಮೇಲೆ ಶಾಕ್! ಮತ್ತೆ ಗಾಯಕ್ಕೆ ತುತ್ತಾದ ಮ್ಯಾಕ್ಸ್‌ವೆಲ್, ಇಬ್ಬರು ಸ್ಟಾರ್ ಆಟಗಾರರು ಇಂಜುರಿ
ಏಕದಿನ ಪಂದ್ಯಗಳ ವೇಳಾಪಟ್ಟಿ:
ಮಿಚೆಲ್ ಮಾರ್ಷ್ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದರು ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಕಾಲಿನ ಗಾಯದಿಂದ ತಂಡದಿಂದ ಹೊರಗುಳಿದಿದ್ದರು. ಈ ಹಿಂದೆ ಇಬ್ಬರಿಗೂ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇಬ್ಬರೂ ಆಟಗಾರರು ಈಗ ಸಂಪೂರ್ಣ ಫಿಟ್ ಆಗಿದ್ದು, ಮುಂಬೈ, ವಿಶಾಖಪಟ್ಟಣಂ ಮತ್ತು ಚೆನ್ನೈನಲ್ಲಿ ಆಡಲು ಸಿದ್ಧರಾಗಿದ್ದಾರೆ. ಸರಣಿಯ ಮೊದಲ ಏಕದಿನ ಪಂದ್ಯ ಮಾರ್ಚ್ 17 ರಂದು ಮುಂಬೈನಲ್ಲಿ ನಡೆಯಲಿದ್ದು, ಎರಡನೇ ಏಕದಿನ ಪಂದ್ಯ ಮಾರ್ಚ್ 19 ರಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ. ಸರಣಿಯ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯ ಮಾರ್ಚ್ 22 ರಂದು ಚೆನ್ನೈನಲ್ಲಿ ನಡೆಯಲಿದೆ.
ಆಸ್ಟ್ರೇಲಿಯಾ ವಿರುದ್ಧದ ಭಾರತ ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (WK), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಾಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಜಯದೇವ್ ಉನದ್ಕತ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ