ಬಾರ್ಡರ್ ಗವಾಸ್ಕರ್ ಟ್ರೋಫಿ ನಂತರ ಭಾರತ ಮತ್ತು ಆಸ್ಟ್ರೇಲಿಯಾ (IND vs AUS ODI) ಮೂರು ಪಂದ್ಯಗಳ ಏಕದಿನ ಸರಣಿಗೆ ಸಜ್ಜಾಗಿವೆ. ಟೆಸ್ಟ್ ಸರಣಿಯ ಗೆಲುವಿನ ನಂತರ ಭಾರತ ತಂಡವು ಏಕದಿನ ಸರಣಿಯಲ್ಲೂ ಗೆಲುವಿನ ಆರಂಭವನ್ನು ಪಡೆಯಲು ಸಿದ್ಧವಾಗಿದೆ. ತವರಿನಲ್ಲಿ ಭಾರತವನ್ನು ಸೋಲಿಸುವುದೇ ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಸವಾಲಾಗಿದೆ. ನಾಳೆ ಭಾರತ ಮತ್ತು ಆಸೀಸ್ ನಡುವಿನ 3 ಪಂದ್ಯಗಳ ಸರಣಿಯ ಮೊದಲ ಪಂದ್ಯ ಮಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ (Wankhede Stadium) ನಡೆಯಲಿದೆ. ಮೊದಲ ಪಂದ್ಯದಲ್ಲಿ ನಿಯಮಿತ ನಾಯಕ ರೋಹಿತ್ ಶರ್ಮಾ (Rohit Sharma) ಕೌಟುಂಬಿಕ ಕಾರಣದಿಂದ ಕಣಕ್ಕಿಳಿಯುತ್ತಿಲ್ಲ. ಅವರ ಬದಲಿಗೆ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ.
ಪಂದ್ಯದ ಸಮಯ:
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಪಂದ್ಯ ವಾಂಖೆಡೆ ಮೈದಾನದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ನೋಡಬಹುದು. ಮೊದಲ ODI ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ. ಇದಲ್ಲದೇ ಡಿಡಿ ಸ್ಪೋರ್ಟ್ಸ್‌ನಲ್ಲಿಯೂ ಪಂದ್ಯವನ್ನು ಉಚಿತವಾಗಿ ವೀಕ್ಷಿಸಬಹುದಾಗಿದೆ. ಜೊತೆಗೆ ಪಂದ್ಯದ ಹೆಚ್ಚಿನ ವಿವರಕ್ಕಾಗಿ News18 Kannada ವೆಬ್ಸೈಟ್ನಲ್ಲಿ ಪಡೆಯಬಹುದು.
Hello and welcome to the Wankhede Stadium, where #TeamIndia will kickstart the ODI series against Australia.#INDvAUS @mastercardindia pic.twitter.com/OXt3tuOS14
— BCCI (@BCCI) March 15, 2023
1ನೇ ODI: ವಾಂಖೆಡೆ ಸ್ಟೇಡಿಯಂ (ಮುಂಬೈ) ಮಧ್ಯಾಹ್ನ 1:30 ರಿಂದ
2ನೇ ODI: ರಾಜಶೇಖರ ರೆಡ್ಡಿ ಕ್ರೀಡಾಂಗಣ (ವಿಶಾಖಪಟ್ಟಣ) ಮಧ್ಯಾಹ್ನ 1:30 ರಿಂದ
3ನೇ ಏಕದಿನ: ಎಂಎ ಚಿತ್ತಂಬರಂ ಸ್ಟೇಡಿಯಂ ( ಚೆನ್ನೈ) ಮಧ್ಯಾಹ್ನ 1:30 ರಿಂದ
ಆಸ್ಟ್ರೇಲಿಯ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ 2-1 ಅಂತರದಲ್ಲಿ ಜಯ ಸಾಧಿಸಿದ ಭಾರತ ತಂಡ ಇದೀಗ ಏಕದಿನ ಸರಣಿಗೆ ಸಜ್ಜಾಗಿದೆ. ಉಭಯ ತಂಡಗಳ ನಡುವೆ ಒಟ್ಟು 3 ಏಕದಿನ ಪಂದ್ಯಗಳು ನಡೆಯಲಿವೆ. ನಾಳೆಯಿಂದ (ಮಾರ್ಚ್ 17) ಆರಂಭವಾಗಲಿದೆ. ಈ ಮೂರು ಪಂದ್ಯಗಳು ಕ್ರಮವಾಗಿ ಮುಂಬೈ, ವಿಶಾಖಪಟ್ಟಣ ಮತ್ತು ಚೆನ್ನೈನಲ್ಲಿ ನಡೆಯಲಿವೆ. ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಕಮಾಂಡ್ ಹಾರ್ದಿಕ್ ಪಾಂಡ್ಯ ಕೈಯಲ್ಲಿರುತ್ತದೆ. ರೋಹಿತ್ ಶರ್ಮಾ ಮೊದಲ ಏಕದಿನ ಪಂದ್ಯದಿಂದ ಹೊರಗುಳಿಯಲಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು:
ಭಾರತ ತಂಡ: ರೋಹಿತ್ ಶರ್ಮಾ (1ನೇ ಏಕದಿನದಿಂದ ಔಟ್) (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಶುಭಮನ್ ಗಿಲ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಅಕ್ಷರ ಪಟೇಲ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ಜಯದೇವ್ ಉನದ್ಕತ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್
ಆಸ್ಟ್ರೇಲಿಯಾ ತಂಡ: ಸ್ಟೀವ್ ಸ್ಮಿತ್ (ಸಿ), ಡೇವಿಡ್ ವಾರ್ನರ್, ಕ್ಯಾಮೆರಾನ್ ಗ್ರೀನ್, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಜೋಶ್ ಮಿಚೆಲ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಝೈ ರಿಚರ್ಡ್‌ಸನ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋನಿಸ್, ಆಡಮ್ ಝೆಂಪಾನಿಸ್ .
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ