ಭಾರತ ಮತ್ತು ಆಸ್ಟ್ರೇಲಿಯಾ (IND vs AUS) ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಭಾರತ ವಿರುದ್ಧ ಭರ್ಜರಿ ಜಯ ದಾಖಲಸಿದೆ. ಭಾರತ ತಂಡ (Team India) ನೀಡಿದ 118 ರನ್‌ಗಳ ಟಾರ್ಗೆಟ್ ಬೆನ್ನಟ್ಟಿದ ಆಸೀಸ್ ಕೇವಲ 11 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೇ 121 ರನ್ ಗಳಿಸುವ ಮೂಲಕ 10 ವಿಕೆಟ್‌ಗಳ ಭರ್ಜರಿ ಜಯ ದಾಖಲಸಿತು. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು 1-1ರ ಸಮಬಲ ಸಾಧಿಸಿದೆ. ಹೀಗಾಗಿ ಭಾರತ ತಂಡ ಸರಣಿ ಗೆಲ್ಲಬೇಕಾದರೆ ಮುಂದಿನ 3ನೇ ಪಂದ್ಯವನ್ನು ಗೆಲ್ಲಲೇ ಬೇಕಾಗಿದೆ.
ಆಸೀಸ್ ಭರ್ಜರಿ ಜಯ:
ಆರಂಭಿಕ ಬ್ಯಾಟ್ಸ್‌ಮನ್ ಮಿಚೆಲ್ ಮಾರ್ಷ್ 36 ಎಸೆತಗಳಲ್ಲಿ 66 ರನ್ ಗಳಿಸಿ ಅಜೇಯರಾಗಿ ಉಳಿದರು. 6 ಬೌಂಡರಿ ಮತ್ತು 6 ಸಿಕ್ಸರ್‌ಗಳನ್ನು ಬಾರಿಸಿದರು. 51 ರನ್ ಗಳಿಸಿ ಟ್ರಾವಿಸ್ ಹೆಡ್ ಕೂಡ ಔಟಾಗಲಿಲ್ಲ. ಸರಣಿಯ ಕೊನೆಯ ಪಂದ್ಯ ಮಾರ್ಚ್ 22 ರಂದು ಚೆನ್ನೈನಲ್ಲಿ ನಡೆಯಲಿದೆ. ಇದು ಏಕದಿನದಲ್ಲಿ ಟೀಂ ಇಂಡಿಯಾದ ಅತಿ ದೊಡ್ಡ ಸೋಲಾಗಿದೆ. ಆಸ್ಟ್ರೇಲಿಯ 234 ಎಸೆತಗಳು ಬಾಕಿ ಇರುವಂತೆಯೇ ಪಂದ್ಯವನ್ನು ಗೆದ್ದುಕೊಂಡಿತು. ಇದಕ್ಕೂ ಮುನ್ನ ನ್ಯೂಜಿಲೆಂಡ್ 2019ರಲ್ಲಿ ಭಾರತವನ್ನು 212 ಎಸೆತಗಳು ಬಾಕಿ ಇರುವಂತೆಯೇ ಸೋಲಿಸಿತ್ತು. ಒಟ್ಟಾರೆ ಏಕದಿನ ಪಂದ್ಯದಲ್ಲಿ ಭಾರತ ಆರನೇ ಬಾರಿಗೆ 10 ವಿಕೆಟ್‌ಗಳ ಸೋಲು ಕಂಡಿದೆ.
WHAT. A. PERFORMANCE 👊
Australia level the ODI series after a comfortable victory in Visakhapatnam! #INDvAUS | 📝 Scorecard: https://t.co/5ISBBNMhiZ pic.twitter.com/WXwrt4FXzl
— ICC (@ICC) March 19, 2023
ಇದನ್ನೂ ಓದಿ: WTCಗೂ ಮುನ್ನ ಟೀಂ ಇಂಡಿಯಾಗೆ ಹೊಸ ತಲೆನೋವು, ಆಸೀಸ್ ಸ್ಟಾರ್ ಬೌಲರ್‌ನಿಂದ ರೋಹಿತ್-ಕೊಹ್ಲಿಗೆ ಹೆಚ್ಚಾಯ್ತು ಟೆನ್ಸನ್!
ಬ್ಯಾಟಿಂಗ್ನಲ್ಲಿ ಎಡವಿದ ಭಾರತ:
ಇನ್ನು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ದಾಳಿಗೆ ಅಕ್ಷರಶಃ ತತ್ತರಿಸಿ ಹೋಯಿತು. ಭಾರತದ ಪರ ನಾಯಕ ರೋಹಿತ್ ಶರ್ಮಾ 13 ರನ್, ವಿರಾಟ್ ಕೊಹ್ಲಿ 31 ರನ್, ಸೂರ್ಯಕುಮಾರ್ ಯಾದವ್ ಮತ್ತು ಶುಭ್ಮನ್ ಗಿಲ್ ಶೂನ್ಯ, ಕೆಎಲ್ ರಾಹುಲ್ 9 ರನ್, ಹಾರ್ದಿಕ್ ಪಾಂಡ್ಯ 1 ರನ್, ರವೀಂದ್ರ ಜಡೇಜಾ 16 ರನ್, ಅಕ್ಷರ್ ಪಟೇಲ್ 29 ರನ್, ಕುಲ್ದೀಪ್ ಯಾದವ್ 4 ರನ್, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಇಬ್ಬರೂ ಶೂನ್ಯಕ್ಕೆ ಔಟ್ ಆಗುವ ಮೂಲಕ ತಂಡ ಅಲ್ಪಮೊತ್ತಕ್ಕೆ ಕುಸಿಯಿತು.
ಭಾರತ - ಆಸ್ಟ್ರೇಲಿಯಾ ಪ್ಲೇಯಿಂಗ್ 11:
ಭಾರತ ಪ್ಲೇಯಿಂಗ್ 11: ಶುಭ್ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಲೋಕೇಶ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಮಿ.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್ (ನಾಯಕ), ಮಾರ್ನಸ್ ಲಬುಶೇನ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ, ಮಾರ್ಕಸ್ ಸ್ಟೊಯಿನಿಸ್, ನಾಥನ್ ಎಲಿಸ್, ಸೀನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ