IND vs AUS ODI: ಟಾಸ್​ ಗೆದ್ದ ಆಸೀಸ್, ಟೀಂ ಇಂಡಿಯಾಗೆ ಆರಂಭಿಕ ಆಘಾತ

IND vs AUS

IND vs AUS

IND vs AUS ODI: ಭಾರತ ಮತ್ತು ಆಸ್ಟ್ರೇಲಿಯಾದ ತಂಡಗಳ 3 ಪಂದ್ಯಗಳ ಸರಣಿಯ ಎರಡನೇ ಏಕದಿನ ಪಂದ್ಯ ಆರಂಭವಾಗಿದೆ. . ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಭಾರತ ತಂಡದ ನಾಯಕತ್ವ ವಹಿಸಿದ್ದಾರೆ.

  • Share this:

ಭಾರತ ಮತ್ತು ಆಸ್ಟ್ರೇಲಿಯಾದ (IND vs AUS ODI) ತಂಡಗಳ 3 ಪಂದ್ಯಗಳ ಸರಣಿಯ ಎರಡನೇ ಏಕದಿನ ಪಂದ್ಯ ಆರಂಭವಾಗಿದೆ. ವಿಶಾಖಪಟ್ಟಣಂನಲ್ಲಿ (YS Raja Reddy Cricket Stadium) ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ (Rohit Sharma) ಭಾರತ ತಂಡದ ನಾಯಕತ್ವ ವಹಿಸಿದ್ದು, ಈಗಾಗಲೇ ಟಾಸ್​ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈಗಾಲೇ ಭಾರತಕ್ಕೆ ಆರಂಭಿಕ ಆಘಾತ ಉಂಟಾಗಿದ್ದು, ತಂಡದ ಆರ್ಂಭಿಕ 3 ವಿಕೆಟ್​ಗಳು ಉರುಳಿವೆ. ಈ ಪಂದ್ಯದಲ್ಲಿ ಮಳೆ ಅಡ್ಡಿಪಡಿಸುವ ಸಾಧ್ಯತೆ ಹೆಚ್ಚಿದೆ. ಬೆಳಗ್ಗೆಯಿಂದ ತುಂತುರು ಮಳೆ ಸುರಿಯುತ್ತಿದ್ದು, ಸದ್ಯ ಮಳೆ ನಿಂತಿದೆ. ಇನ್ನು ಆಡುವ ಹನ್ನೊಂದರಲ್ಲಿ ಭಾರತ 2 ಬದಲಾವಣೆ ಮಾಡಿದೆ. ರೋಹಿತ್ ಶರ್ಮಾ ಮತ್ತು ಅಕ್ಷರ್ ಪಟೇಲ್ ತಂಡಕ್ಕೆ ಮರಳಿದ್ದಾರೆ.


ಟೀಂ ಇಂಡಿಯಾಗೆ ಆರಂಭಿಕ ಆಘಾತ:


ಟಾಸ್​ ಸೋತು ಮೊದಲು ಬ್ಯಾಟಿಂಗ್​ ಆರಂಭಿಸಿ ಭಾರತ ತಂಡಕ್ಕೆ ಆರಂಭಿಕ ಆಘಾತ ಎದುರಾಗಿದೆ. ಆರಮಬಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಶರ್ಮಾ ಕೇವಲ 13 ರನ್​​ಗೆ ಔಟ್​ ಆದರೆ, ಶುಭ್​ಮನ್ ಗಿಲ್​ ಮತ್ತು ಸೂರ್ಯಕುಮಾರ್ ಯಾದವ್ ಇಬ್ಬರೂ ಶೂನ್ಯಕ್ಕೆ ಫೆವೆಲಿಯನ್​ ಸೇರುವ ಮೂಲಕ ಮತ್ತೊಮ್ಮೆ ನಿರಾಸೆ ಮೂಡಿಸಿದರು. ಕಳೆದ ಪಂದ್ಯದಲ್ಲಿಯೂ ಗಿಲ್​ ಮತ್ತು ಸೂರ್ಯಕುಮಾರ್ ಯಾದವ್ ಉತ್ತಮ ಬ್ಯಾಟಿಂಗ್​ ಮಾಡಿರಲಿಲ್ಲ. ಅದರಲ್ಲಿಯೂ ಸೂರ್ಯಕುಮಾರ್ ಯಾದವ್​ ಕಳೆದ ಪಂದ್ಯದಲ್ಲಿಯೂ ಡಕ್​ ಔಟ್​ ಆಗಿದ್ದರು. ಇಂದಿಜನ ಪಂದ್ಯದಲ್ಲಿಯೂ ಡಕ್​ ಔಟ್​ ಆಗುವ ಮೂಲಕ ನಿರಾಸೆ ಮೂಡಿಸಿದ್ದಾರೆ.



ತಂಡದಲ್ಲಿ 2 ಬದಲಾವಣೆ:


ಮೊದಲ ಪಂದ್ಯದಿಂದ ದೂರವಿದ್ದ ರೋಹಿತ್ ಶರ್ಮಾ ಕಂಬ್ಯಾಕ್​ ಮಾಡಿದ್ದಾರೆ. ಹೀಗಾಗಿ ಇಶಾನ್ ಕಿಶನ್​ ತಂಡದಿಂದ ಹೊರಗುಳಿದಿದ್ದಾರೆ. ಎರಡನೇ ಬದಲಾವಣೆಯಾಗಿ ಅಕ್ಷರ್ ಪಟೇಲ್ ಟೀಂ ಇಂಡಿಯಾಗೆ ಮರಳಿದ್ದಾರೆ. ಹೀಗಾಗಿ ಶಾರ್ದೂಲ್ ಠಾಕೂರ್ ಬದಲಿಗೆ ಅವರಿಗೆ ಭಾರತ ತಂಡದಲ್ಲಿ ಅವಕಾಶ ನೀಡಲಾಗಿದೆ. ಸ್ಪಿನ್ ವಿಭಾಗದಲ್ಲಿ ಕುಲದೀಪ್ ಯಾದವ್ ಅವರಿಗೆ ಅಕ್ಷರ್ ಪಟೇಲ್ ಬೆಂಬಲ ನೀಡಲಿದ್ದಾರೆ. ಇದಲ್ಲದೇ ರವೀಂದ್ರ ಜಡೇಜಾ ಅವರು ಆಲ್ ರೌಂಡರ್ ಆಗಿ ಸ್ಪಿನ್ ವಿಭಾಗವನ್ನೂ ಮುನ್ನೆಡೆಸಲಿದ್ದಾರೆ. ಈ ಪಂದ್ಯದಲ್ಲಿ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಹಾಗೂ ಉಪನಾಯಕ ಹಾರ್ದಿಕ್ ಪಾಂಡ್ಯ ಕಣಕ್ಕಿಳಿದಿದ್ದಾರೆ.


ಇದನ್ನೂ ಓದಿ: IPL 2023: ಮತ್ತೆ ಐಪಿಎಲ್​ ಮೇಲೆ ಕೊರೊನಾ ಕರಿನೆರಳು! ಈ ಬಾರಿಯೂ ಜನರಿಂದ ದೂರವಾಗುತ್ತಾ ಮೆಗಾ ಟೂರ್ನಿ?


ವಿಶಾಕಪಟ್ಟಣಂನಲ್ಲಿ ಟೀಂ ಇಂಡಿಯಾ ದಾಖಲೆ:


ಈ ಮೈದಾನದಲ್ಲಿ ಭಾರತ ತಂಡ 9 ಏಕದಿನ ಪಂದ್ಯಗಳನ್ನು ಆಡಿದ್ದು, ಅದರಲ್ಲಿ 8 ಬಾರಿ ಗೆದ್ದಿದೆ. 2013ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ಡ್ರಾ ಸಾಧಿಸಿತ್ತು. ಭಾರತದ ಈ ದಾಖಲೆ ನೋಡಿ ಕಾಂಗರೂ ತಂಡ ಆತಂಕಕ್ಕೆ ಒಳಗಾಗುವುದು ಖಚಿತ. 13 ವರ್ಷಗಳ ನಂತರ ಆಸ್ಟ್ರೇಲಿಯಾ ಮತ್ತು ಭಾರತ ತಂಡ ಇದೇ ಮೈದಾನದಲ್ಲಿ ಮುಖಾಮುಖಿಯಾಗಲಿದೆ. 2010ರಲ್ಲಿ ಭಾರತ ಈ ಮೈದಾನದಲ್ಲಿ ಆಸ್ಟ್ರೇಲಿಯಾವನ್ನು 5 ವಿಕೆಟ್‌ಗಳಿಂದ ಸೋಲಿಸಿತ್ತು.




ಭಾರತ - ಆಸ್ಟ್ರೇಲಿಯಾ ಪ್ಲೇಯಿಂಗ್​ 11:


ಭಾರತ ಪ್ಲೇಯಿಂಗ್​ 11: ಶುಭ್​ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಲೋಕೇಶ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಮಿ.


ಆಸ್ಟ್ರೇಲಿಯಾ ಪ್ಲೇಯಿಂಗ್​ 11: ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್ (ನಾಯಕ), ಮಾರ್ನಸ್ ಲಬುಶೇನ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ, ಮಾರ್ಕಸ್ ಸ್ಟೊಯಿನಿಸ್, ನಾಥನ್ ಎಲಿಸ್, ಸೀನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ.

Published by:shrikrishna bhat
First published: