• ಹೋಂ
  • »
  • ನ್ಯೂಸ್
  • »
  • ಕ್ರೀಡೆ
  • »
  • IND vs AUS ODI: ಇಂದು ಆಸೀಸ್​ ವಿರುದ್ಧ 2ನೇ ಏಕದಿನ ಪಂದ್ಯ, ಟೀಂ ಇಂಡಿಯಾ ಪ್ಲೇಯಿಂಗ್​ 11ನಲ್ಲಿ ಬದಲಾವಣೆ ಫಿಕ್ಸ್

IND vs AUS ODI: ಇಂದು ಆಸೀಸ್​ ವಿರುದ್ಧ 2ನೇ ಏಕದಿನ ಪಂದ್ಯ, ಟೀಂ ಇಂಡಿಯಾ ಪ್ಲೇಯಿಂಗ್​ 11ನಲ್ಲಿ ಬದಲಾವಣೆ ಫಿಕ್ಸ್

IND vs AUS

IND vs AUS

IND vs AUS ODI: ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಇದೀಗ ಉಭಯ ತಂಡಗಳು 2ನೇ ಏಕದಿನಕ್ಕಾಗಿ ಸಿದ್ಧವಾಗಿದ್ದು, ಇಂದು 2ನೇ ಪಂದ್ಯದಲ್ಲಿ ಮುಖಾಮುಖಿ ಆಗಲಿದೆ.

  • Share this:

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ (IND vs AUS ODI) ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಮೊದಲ ಏಕದಿನ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಆರಂಭದಲ್ಲಿ ಟೀಂ ಇಂಡಿಯಾದ (Team India) ವಿಕೆಟ್‌ಗಳು ಬೇಗನೆ ಉರುಳಿದವು. ಆದರೆ ಕೆಟ್ಟ ಫಾರ್ಮ್‌ನಿಂದ ಕಂಗೆಟ್ಟಿದ್ದ ಕೆಎಲ್ ರಾಹುಲ್ (KL Rahul) ಕಂಬ್ಯಾಕ್ ಮಾಡಿ ಅತ್ಯುತ್ತಮ ಅರ್ಧಶತಕ ಗಳಿಸಿದರು. ಅವರಿಗೆ ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ (Ravindra Jadeja) ಉತ್ತಮ ಸಾಥ್ ನೀಡಿದರು. ಇದೀಗ 2ನೇ ಪಂದ್ಯವು ಇಂದು ವಿಶಾಖಪಟ್ಟಣಂನ ಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಡಲಿದೆ. ಇಲ್ಲಿ ಟೀಂ ಇಂಡಿಯಾದ ದಾಖಲೆ ತುಂಬಾ ಚೆನ್ನಾಗಿದೆ.


ಪಂದ್ಯದ ವಿವರ:


ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಪಂದ್ಯ ಇಂದು ವಿಶಾಖಪಟ್ಟಣಂನ ಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನ ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ನೋಡಬಹುದು. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ. ಜೊತೆಗೆ ಡಿಡಿ ಸ್ಪೋರ್ಟ್ಸ್‌ನಲ್ಲಿಯೂ ಪಂದ್ಯವನ್ನು ಉಚಿತವಾಗಿ ವೀಕ್ಷಿಸಬಹುದಾಗಿದೆ. ಜೊತೆಗೆ ಪಂದ್ಯದ ಹೆಚ್ಚಿನ ವಿವರಕ್ಕಾಗಿ News18 Kannada ವೆಬ್​ಸೈಟ್​ನಲ್ಲಿ ಪಡೆಯಬಹುದು.


ಭಾರತದ ದಾಖಲೆ:


ಈ ಮೈದಾನದಲ್ಲಿ ಭಾರತ ತಂಡ 9 ಏಕದಿನ ಪಂದ್ಯಗಳನ್ನು ಆಡಿದ್ದು, ಅದರಲ್ಲಿ 8 ಬಾರಿ ಗೆದ್ದಿದೆ. 2013ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ಡ್ರಾ ಸಾಧಿಸಿತ್ತು. ಭಾರತದ ಈ ದಾಖಲೆ ನೋಡಿ ಕಾಂಗರೂ ತಂಡ ಆತಂಕಕ್ಕೆ ಒಳಗಾಗುವುದು ಖಚಿತ. 13 ವರ್ಷಗಳ ನಂತರ ಆಸ್ಟ್ರೇಲಿಯಾ ಮತ್ತು ಭಾರತ ತಂಡ ಇದೇ ಮೈದಾನದಲ್ಲಿ ಮುಖಾಮುಖಿಯಾಗಲಿದೆ. 2010ರಲ್ಲಿ ಭಾರತ ಈ ಮೈದಾನದಲ್ಲಿ ಆಸ್ಟ್ರೇಲಿಯಾವನ್ನು 5 ವಿಕೆಟ್‌ಗಳಿಂದ ಸೋಲಿಸಿತ್ತು.


ಇದನ್ನೂ ಓದಿ: IPL 2023: ಆರ್‌ಸಿಬಿಗೆ ಪವರ್ ತುಂಬಲಿದ್ದಾರೆ ಎಬಿಡಿ, ಗೇಲ್! ಈ ಸಲ ಪಕ್ಕಾ ಕಪ್ ನಮ್ದೇ!


ಭಾರತೀಯ ಆಟಗಾರರು ಉತ್ತಮ ದಾಖಲೆಯನ್ನು ಹೊಂದಿದ್ದಾರೆ. ಈ ಮೈದಾನದಲ್ಲಿ ಭಾರತೀಯ ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಮೈದಾನದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ವಿರಾಟ್ ಕೊಹ್ಲಿ. ಇಲ್ಲಿ ಆಡಿರುವ 6 ಪಂದ್ಯಗಳಲ್ಲಿ ಒಟ್ಟು 556 ರನ್ ಗಳಿಸಿದ್ದಾರೆ. ಇದರಲ್ಲಿ ಒಟ್ಟು 3 ಶತಕಗಳು ಸೇರಿವೆ. ರೋಹಿತ್ ಶರ್ಮಾ ಇಲ್ಲಿ ಆಡಿರುವ 6 ಪಂದ್ಯಗಳಲ್ಲಿ 342 ರನ್ ಗಳಿಸಿದ್ದಾರೆ. ಕಳೆದ ಪಂದ್ಯದಲ್ಲಿ ಅವರು ಆಡಿರಲಿಲ್ಲ. ಎರಡನೇ ಏಕದಿನ ಪಂದ್ಯದಲ್ಲಿ ಅವರು ವಾಪಸಾಗಲಿದ್ದಾರೆ. ಇನ್ನು ಬೌಲಿಂಗ್ ಬಗ್ಗೆ ಮಾತನಾಡಿರುವ ಕುಲದೀಪ್ ಯಾದವ್ ಇಲ್ಲಿ ಆಡಿರುವ 3 ಪಂದ್ಯಗಳಲ್ಲಿ 9 ವಿಕೆಟ್ ಪಡೆದಿದ್ದಾರೆ.


ಇದನ್ನೂ ಓದಿ: IND vs AUS 2nd ODI: 2ನೇ ಏಕದಿನ ಪಂದ್ಯಕ್ಕೆ ಸ್ಟಾರ್​ ಪ್ಲೇಯರ್​​ ಕಂಬ್ಯಾಕ್​, ಯುವ ಆಟಗಾರ ತಂಡದಿಂದ ಔಟ್​!


ಭಾರತ - ಆಸೀಸ್​ ಸಂಭಾವ್ಯ ಪ್ಲೇಯಿಂಗ್​ 11:


ಭಾರತ ಸಂಭಾವ್ಯ ಪ್ಲೇಯಿಂಗ್​ 11: ಶುಭಮನ್ ಗಿಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.
ಆಸ್ಟ್ರೇಲಿಯಾ ಸಂಭಾವ್ಯ ಪ್ಲೇಯಿಂಗ್​ 11: ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಸ್ಟೊಯಿನಿಸ್, ಸೀನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ.

Published by:shrikrishna bhat
First published: