• Home
  • »
  • News
  • »
  • sports
  • »
  • IND vs AUS: ನಾಳೆ ಭಾರತ-ಆಸ್ಟ್ರೇಲಿಯಾ ಅಂತಿಮ ಹಣಾಹಣಿ, ನಿರ್ಣಾಯಕ ಪಂದ್ಯಕ್ಕೆ ಹೇಗಿರಲಿದೆ ಉಭಯ ತಂಡಗಳ ಪ್ಲೇಯಿಂಗ್​ 11

IND vs AUS: ನಾಳೆ ಭಾರತ-ಆಸ್ಟ್ರೇಲಿಯಾ ಅಂತಿಮ ಹಣಾಹಣಿ, ನಿರ್ಣಾಯಕ ಪಂದ್ಯಕ್ಕೆ ಹೇಗಿರಲಿದೆ ಉಭಯ ತಂಡಗಳ ಪ್ಲೇಯಿಂಗ್​ 11

IND vs AUS

IND vs AUS

IND vs AUS: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3 ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯವು ಹೈದರಾಬಾದ್‌ನ ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಾಳೆ (ಭಾನುವಾರ) ನಡೆಯಲಿದೆ.

  • Share this:

ಭಾರತ ಮತ್ತು ಆಸ್ಟ್ರೇಲಿಯಾ (IND v AUS) ನಡುವಿನ 3 ಪಂದ್ಯಗಳ ಸರಣಿಯ ಅಂತಿಮ ಮತ್ತು 3ನೇ ಟಿ20 ಪಂದ್ಯವು ನಾಳೆ ಹೈದರಾಬಾದ್‌ನ ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ (Rajiv Gandhi International Cricket Stadium Hyderabad) ನಡೆಯಲಿದೆ. ಈಗಾಗಲೇ ಸರಣಿಯಲ್ಲಿ ಉಭಯ ತಂಡಗಳು 1-1ರಿಂದ ಸಮಬಲ ಸಾಧಿಸಿದ್ದು, ನಾಳಿನ ಪಂದ್ಯದ ಮೇಲೆ ಎಲ್ಲರ ನಿರೀಕ್ಷೆ ಹೆಚ್ಚಿದೆ. ನಾಳಿನ ಪಂದ್ಯವನ್ನು ಗೆಲ್ಲುವ ತಂಡ ಟಿ20 ಸರಣಿಯನ್ನು ಗೆದ್ದು ಬೀಗಲಿದೆ. ಹಾಗಿದ್ದರೆ ನಾಳಿನ ಅಂತಿಮ ಹಣಾಹಣಿಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ಪ್ಲೇಯಿಂಗ್​ 11 (Playing 11) ಹೇಗಿರಲಿದೆ ಎಂದು ನೋಡೋಣ ಬನ್ನಿ.


ಪಂದ್ಯದ ವಿವರ:


ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3 ಪಂದ್ಯಗಳ ಟಿ20 ಸರಣಿಯ 3ನೇ ಪಂದ್ಯವು ಹೈದರಾಬಾದ್‌ನ ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯ ಸಂಜೆ 7.00 ರಿಂದ ನಡೆಯಲಿದೆ. ಟಾಸ್ ಸಂಜೆ 6:30ಕ್ಕೆ ನಡೆಯಲಿದೆ. ಈ ಸರಣಿಯನ್ನು ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ನೇರ ಪ್ರಸಾರವನ್ನು ವೀಕ್ಷಿಸಬಹುದು.  ಸರಣಿಯ ಲೈವ್ ಸ್ಟ್ರೀಮಿಂಗ್ ಅನ್ನು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ನೋಡಬಹುದು. ಪಂದ್ಯದ ಲೈವ್ ಅಪ್‌ಡೇಟ್‌ಗಳಿಗಾಗಿ News 18 Kannada ವೆಬ್‌ಸೈಟ್ ಅನುಸರಿಸಿ.


ಪಿಚ್​ ರಿಪೋರ್ಟ್:


ಹೈದರಾಬಾದ್‌ನ ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣ ಕೊಂಚ ನಿಧಾನಗತಿಯ ಪಿಚ್​ ಆಗಿದೆ. ಹೀಗಾಗಿ ಟಿ20 ಕ್ರಿಕೆಟ್​ನಲ್ಲಿ ಇಲ್ಲಿ ದೊಡ್ಡ ಮೊತ್ತದ ಸ್ಕೋರ್​ ಮಾಡುವುದು ಕಷ್ಟವಾಗಿದೆ. ಹೀಗಾಗಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 160 ರನ್ ಆಗಿದೆ. ಆದರೆ 2ನೇ ಇನ್ನಿಂಗ್ಸ್ ನಲ್ಲಿ ಸರಾಸರಿ ಸ್ಕೋರ್​ 140 ರನ್ ಹೀಗಾಗಿ ಈ ಪಿಚ್​ನಲ್ಲಿ ಅಂದರೆ ನಾಳೆ ಟಾಸ್​ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಲ್ಳುವ ಸಾಧ್ಯತೆ ಹೆಚ್ಚಿದೆ.


ಇದನ್ನೂ ಓದಿ: Rohit Sharma: ಟಿ20 ಕ್ರಿಕೆಟ್​ನಲ್ಲಿ ಇತಿಹಾಸ ನಿರ್ಮಿಸಿದ ರೋಹಿತ್​, ಯೂನಿವರ್ಸಲ್‌ ಬಾಸ್‌​ ಹಿಂದಿಕ್ಕಿದ ಹಿಟ್​ಮ್ಯಾನ್​


ರಾಹುಲ್​-ವಿರಾಟ್​ ಅಬ್ಬರಿಸಬೇಕಿದೆ:


ಹೌದು, ಕಳೆದ 2 ಪಂದ್ಯಗಳಲ್ಲಿ ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಬ್ಯಾಟಿಂಗ್​ ನಲ್ಲಿ ಹೆಳಿಕೊಳ್ಳುವಷ್ಟು ಉತ್ತಮವಾಗಿ ಆಡಲಿಲ್ಲ. ಹೀಗಾಗಿ ನಾಳಿನ ಪಂದ್ಯದಲ್ಲಾದರೂ ಕೊಹ್ಲಿ ಮತ್ತು ರಾಹುಲ್ ಅಬ್ಬರಿಸಬೇಕಿದೆ. ಏಷ್ಯಾ ಕಪ್​ ನಲ್ಲಿ ಫಾರ್ಮ್​ಗೆ ಮರಳಿದ್ದ ಕೊಹ್ಲಿ ಶತಕ ಸಿಡಿಸಿ ಮಿಂಚಿದ್ದರು. ಆದರೆ ಇದೀಗ ತವರಿನಲ್ಲಿಯೇ ನಡೆಯುತ್ತಿರುವ ಸರಣಿಯಲ್ಲಿ ಅಷ್ಟಾಗಿ ಅಬ್ಬರಿಸುತ್ತಿಲ್ಲ. ಇತ್ತ ರಾಹುಲ್ ಸಹ ಆಸೀಸ್​ ವಿರುದ್ಧದ ಮೊದಲ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದರೂ ನಿಧಾನಗತಿಯಲ್ಲಿ ಅವರು ಬ್ಯಾಟಿಂಗ್​ ಮಾಡಿದ್ದರು.


ತಂಡದಲ್ಲಿ ಬದಲಾವಣೆ ಸಾಧ್ಯತೆ ಇಲ್ಲ:


ಇನ್ನು, ಕಳೆದ 2ನೇ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ನಾಳಿನ ಪಂದ್ಯಕ್ಕೂ ಕಣಕ್ಕಿಳಿಯುವ ಸಾಧ್ಯತೆ ಇದೆ. ಹೀಗಾಗಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ್ಯತೆ ಇಲ್ಲ ಎಂದು ಹೇಳಲಾಗುತ್ತಿದೆ. ಇನ್ನೇನಾದರೂ ಒಂದು ವೇಳೆ ಬದಲಾವಣೆ ಆದಲ್ಲಿ, ಹರ್ಷಲ್ ಪಟೇಳ್ ಬದಲಿಗೆ ಮತ್ತೆ ಭುವನೇಶ್ವರ್ ಕುಮಾರ್ ತಂಡದಲ್ಲಿ ಸ್ಥಾನ ಪಡೆದುಕೊಳ್ಳಬಹುದಾಗಿದೆ.


ಇದನ್ನೂ ಓದಿ: T20 World Cup 2022: ಈ ಬಾರಿ ಟಿ20 ವಿಶ್ವಕಪ್​ ಆಡುತ್ತಿರುವ ಕಿರಿಯ ಆಟಗಾರರು, ಇವರೇ ನೋಡಿ ಭವಿಷ್ಯದ ಪ್ಲೇಯರ್ಸ್​ಗಳು


IND vs AUS ಸಂಭಾವ್ಯ ತಂಡ:


ಭಾರತ ಸಂಭಾವ್ಯ ತಂಡ:  ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರಿಷಭ್ ಪಂತ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಹರ್ಷಲ್ ಪಟೇಲ್, ಜಸ್ಪ್ರೀತ್ ಬುಮ್ರಾ.


ಆಸ್ಟ್ರೇಲಿಯಾ ಸಂಭಾವ್ಯ ತಂಡ:  ಆರನ್ ಫಿಂಚ್, ಕ್ಯಾಮೆರಾನ್ ಗ್ರೀನ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್, ಡೇನಿಯಲ್​ ಸ್ಯಾಮ್ಸ್, ಪ್ಯಾಟ್ ಕಮಿನ್ಸ್, ಸೀನ್ ಅಬಾಟ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.

Published by:shrikrishna bhat
First published: