ಭಾರತ ಮತ್ತು ಆಸ್ಟ್ರೇಲಿಯಾ (IND vs AUS) ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟ ಅಂತ್ಯವಾಗಿದ್ದು, ಭಾರತ ತಂಡ 571 ರನ್ಗೆ 10 ವಿಕೆಟ್ ಕಳೆದುಕೊಂಡಿತು. ಇದರ ನಂತರ 2ನೇ ಇನ್ನಿಂಗ್ಸ್ ಆರ್ಂಭಿಸಿರುವ ಆಸ್ಟ್ರೇಲಿಯಾ ತಂಡ ದಿನದಾಟದ ಅಂತ್ಯಕ್ಕೆ ಯಾವುದೇ ವಿಕೆಟ್ ನಷ್ಟವಿಲ್ಲದೇ 3 ರನ್ ಗಳಿಸಿದ್ದು, 88 ರನ್ ಹಿನ್ನಡೆ ಅನುಭವಿಸಿದೆ. ನಾಳೆ ಪಂದ್ಯದ ಅಂತಿಮ ದಿನವಾಗಿದ್ದು, ಪಂದ್ಯ ಡ್ರಾನತ್ತ ಮುಖ ಮಾಡಿದೆ.
ಭರ್ಜರಿ ಶತಕ ಸಿಡಿಸಿದ ಕೊಹ್ಲಿ:
ಇನ್ನು, ಭಾರತ ಮತ್ತು ಆಸೀಸ್ 4ನೇ ಟೆಸ್ಟ್ ಪಂದ್ಯದ 3ನೇ ದಿನದಾಟದ ಅಂತ್ಯಕ್ಕೆ ಅರ್ಧಶತಕ ಸಿಡಿಸಿ 4ನೇ ದಿನದಾಟ ಆರಂಭಿಸಿದ ವಿರಾಟ್ ಕೊಹ್ಲಿ ಎಲ್ಲರ ನಿರೀಕ್ಷೆಯಂತೆಯೇ ಇಂದು ಭರ್ಜರಿ ಶತಕ ಸಿಡಿಸಿ ಮಿಂಚಿದರು. ಅವರು 364 ಎಸೆತಕ್ಕೆ 15 ಫೋರ್ ಸಿಡಿಸುವ ಮೂಲಕ 186 ರನ್ ಗಳಿಸಿ ಬರೋಬ್ಬರಿ 1206 ದಿನಗಳ ಬಳಿಕ ವಿರಾಟ್ ಭರ್ಜರಿ ಶತಕ ಸಿಡಿಸಿದರು.
Stumps on Day 4⃣ of the Fourth #INDvAUS Test!#TeamIndia 🇮🇳 88 runs ahead in the Final Test and Australia will resume batting tomorrow at 3/0.
We will back tomorrow with Day 5 action!
Scorecard - https://t.co/8DPghkx0DE @mastercardindia pic.twitter.com/Rf72OD81YR
— BCCI (@BCCI) March 12, 2023
ಇದನ್ನೂ ಓದಿ: Virat Kohli: 1206 ದಿನಗಳ ಕಾಯುವಿಕೆಗೆ ಅಂತ್ಯ, 75ನೇ ಶತಕ ಸಿಡಿಸಿ ಅಬ್ಬರಿಸಿದ ಕಿಂಗ್ ಕೊಹ್ಲಿ!
ಇತಿಹಾಸ ನಿರ್ಮಿಸಿದ ವಿರಾಟ್ ಕೊಹ್ಲಿ:
ಈ ಪಂದ್ಯದಲ್ಲಿ ವಿರಾಟ್ ದ್ವಿಶತಕ ವಂಚಿತರಾಗಿರಬಹುದು, ಆದರೆ ಇದರ ಹೊರತಾಗಿಯೂ ಅವರು ತಮ್ಮ ಹೆಸರಿನಲ್ಲಿ ಅನೇಕ ದಾಖಲೆಗಳನ್ನು ಮಾಡಿದ್ದಾರೆ. ಅವರು ತಮ್ಮ ಇನ್ನಿಂಗ್ಸ್‌ನಲ್ಲಿ 364 ಎಸೆತಗಳನ್ನು ಎದುರಿಸಿದರು. ಈ ವೇಳೆ ವಿರಾಟ್ 15 ಬೌಂಡರಿಗಳ ನೆರವಿನಿಂದ 186 ರನ್ ಗಳಿಸಿದರು. ಭಾರತ ತಂಡ 571 ರನ್‌ಗಳಿಗೆ ಆಲೌಟ್ ಆಯಿತು. ಮೊದಲ ಇನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ ಪಡೆ 91 ರನ್‌ಗಳ ಮುನ್ನಡೆ ಸಾಧಿಸಿದೆ.
ಈ ಇನ್ನಿಂಗ್ಸ್ ಆಧಾರದಲ್ಲಿ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಮಾಡಿದ್ದಾರೆ. ಅವರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಇದರೊಂದಿಗೆ ವಿರಾಟ್ ಐಸಿಸಿ ಟ್ರೋಫಿಯ ಇತಿಹಾಸದಲ್ಲಿ ಎಲ್ಲಾ ಮಾದರಿಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದಾರೆ. ಈ ಹಿಂದೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ವಿರಾಟ್ ಹೆಸರಿನಲ್ಲಿತ್ತು. ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಅವರು ಈ ವಿಷಯದಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
ಭಾರತ - ಆಸ್ಟ್ರೇಲಿಯಾ ಪ್ಲೇಯಿಂಗ್ 11:
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಉಮೇಶ್ ಯಾದವ್.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ಮ್ಯಾಥ್ಯೂ ಕುಹ್ನೆಮನ್, ನಾಥನ್ ಲಿಯಾನ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ