• ಹೋಂ
  • »
  • ನ್ಯೂಸ್
  • »
  • ಕ್ರೀಡೆ
  • »
  • IND vs AUS 4th Test: ಶುಭ್​ಮನ್ ಗಿಲ್​ ಭರ್ಜರಿ ಶತಕ, ಆಸೀಸ್​ಗೆ ತಿರುಗೇಟು ನೀಡಿದ ಟೀಂ ಇಂಡಿಯಾ

IND vs AUS 4th Test: ಶುಭ್​ಮನ್ ಗಿಲ್​ ಭರ್ಜರಿ ಶತಕ, ಆಸೀಸ್​ಗೆ ತಿರುಗೇಟು ನೀಡಿದ ಟೀಂ ಇಂಡಿಯಾ

ಶುಭ್​ಮನ್ ಗಿಲ್ ಶತಕ

ಶುಭ್​ಮನ್ ಗಿಲ್ ಶತಕ

IND vs AUS 4th Test: ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾಕ್ಕೆ ತಕ್ಕ ಉತ್ತರ ನೀಡುತ್ತಿದೆ. 3ನೇ ದಿನಾದಟದಲ್ಲಿ ಭಾರತ ತಂಡದ ಆರಂಭಿಕ ಆಟಗಾರ ಶುಭ್​ಮನ್ ಗಿಲ್​ ಭರ್ಜರಿ ಬ್ಯಾಟಿಂಗ್​ ಮಾಡುವ ಮೂಲಕ ಆಕರ್ಷಕ ಶತಕ ಸಿಡಿಸಿದರು.

  • Share this:

ಅಹಮದಾಬಾದ್‌ನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾಕ್ಕೆ ತಕ್ಕ ಉತ್ತರ ನೀಡುತ್ತಿದೆ. 36/0 ಓವರ್‌ನೈಟ್ ಸ್ಕೋರ್‌ನೊಂದಿಗೆ ಮೂರನೇ ದಿನ ಬ್ಯಾಟಿಂಗ್‌ಗೆ ಇಳಿದ ಭಾರತ ಭೋಜನ ವಿರಾಮದ ವೇಳೆಗೆ 35 ರನ್​​ಗಳಿಸಿದ್ದ ರೋಹಿತ್ ಶರ್ಮಾ ಅವರ ವಿಕೆಟ್​ ಕಳೆದುಕೊಂಡಿತು. ಆದರೆ ಆರಂಭಿಕರಾಗಿ ರೋಹಿತ್ ಶರ್ಮಾ ಜೊತೆ ಕಣಕ್ಕಿಳಿದಿದ್ದ ಯುವ ಆಟಗಾರ ಶುಭ್​ಮನ್​ ಗಿಲ್​ ಆಸೀಸ್​ ಬೌಲರ್​ಗಳ ವಿರುದ್ಧ ಉತ್ತಮ ಬ್ಯಾಟಿಂಗ್​ ಮಾಡುವ ಮೂಲಕ ಭರ್ಜರಿ ಶತಕ ಸಿಡಿಸಿದರು. ಚಹಾ ವಿರಾಮದ ವೇಳೆಗೆ 63 ಓವರ್​ಗೆ 2 ವಿಕೆಟ್​ ನಷ್ಟಕ್ಕೆ 188 ರನ್​ಗಳಿಸಿ 292 ರನ್​ಗಳ ಹಿನ್ನಡೆಯಲ್ಲಿದೆ.


ಶತಕ ಸಿಡಿಸಿದ ಶುಭ್​ಮನ್​ ಗಿಲ್​​:


ಕೊನೆಯ ಟೆಸ್ಟ್​ ಪಂದ್ಯಗಳಿಂದಲೂ ಸತತ ವೈಪಲ್ಯದಿಂದ ಬ್ಯಾಟಿಂಗ್​ ಮಾಡುತ್ತಿದ್ದರು. ಆದರೆ ಇಂದು ಆಸೀಸ್​ ವಿರುದ್ಧ ಮತ್ತೊಮ್ಮೆ ಕಂಬ್ಯಾಕ್​ ಮಾಡಿದರು. ಆ ಮೂಲಕ 197 ಬಾಲ್ ನಲ್ಲಿ 1 ಸಿಕ್ಸ್ ಮತ್ತು 10 ಪೋರ್​ ಮೂಲಕ 103 ರನ್​ ಗಳಿಸಿ (ಸುದ್ದಿ ಬರೆಯುವ ವೇಳೆ) ಆಡುತ್ತಿದ್ದಾರೆ. ಆದರೆ ಚೆತೇಶ್ವರ್​ ಪೂಜಾರ ಅರ್ಧಶತಕ ಮಿಸ್​ ಮಾಡಿಕೊಂಡಿದ್ದು, 42 ರನ್​​ಗಳಿಸಿ ಔಟ್​ ಆದರು. ಸದ್ಯ ಕ್ರೀಸ್​ನಲ್ಲಿದ್ದು ವಿರಾಟ್​ ಕೊಹ್ಲಿ ಬ್ಯಾಟಿಂಗ್​ ಮಾಡುತ್ತಿದ್ದಾರೆ.



ಶುಭಮನ್ ಗಿಲ್ ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ತಮ್ಮ ಟೆಸ್ಟ್ ವೃತ್ತಿಜೀವನದ ಮೊದಲ ಶತಕ ಗಳಿಸಿದ್ದರು. ಆ ನಂತರ 23ರ ಹರೆಯದ ಯುವಕನಿಗೆ ಹಿಂತಿರುಗಿ ನೋಡಲೇ ಇಲ್ಲ. ಈ ಆಟಗಾರ 3 ತಿಂಗಳಲ್ಲಿ ಎಲ್ಲಾ ಮೂರು ಮಾದರಿಗಳಲ್ಲಿ ಶತಕಗಳನ್ನು ಬಾರಿಸಿದ್ದಾರೆ. ಗಿಲ್ ನ್ಯೂಜಿಲೆಂಡ್ ವಿರುದ್ಧ ದ್ವಿಶತಕ ಬಾರಿಸುವ ಮೂಲಕ ಹಲವು ದೊಡ್ಡ ದಾಖಲೆಗಳನ್ನು ನಾಶಪಡಿಸಿದ್ದರು. ಇದೀಗ ಶುಭ್‌ಮನ್ ಆಸ್ಟ್ರೇಲಿಯಾದ ವಿರುದ್ಧ ತಮ್ಮ ಟೆಸ್ಟ್ ವೃತ್ತಿಜೀವನದ ಎರಡನೇ ಶತಕವನ್ನು ಗಳಿಸಿದ್ದಾರೆ.


ಇದನ್ನೂ ಓದಿ: Virat Kohli: 1000 ಕೋಟಿ ದಾಟಿದ ವಿರಾಟ್ ಒಟ್ಟು ಆಸ್ತಿ! 2023ರಲ್ಲಿ ಕೊಹ್ಲಿಯ ಗಳಿಕೆ,​​ ಮನೆಗಳು, ಐಷಾರಾಮಿ ಕಾರುಗಳ ವಿವರ ಇಲ್ಲಿದೆ


ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್ ತಲುಪಿರುವ ಆಸೀಸ್:


ಬಾರ್ಡರ್‌-ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯ ಆರಂಭಿಕ ಎರಡು ಪಂದ್ಯಗಳಲ್ಲಿ ಗೆಲುವು ಪಡೆಯುವ ಮೂಲಕ 2-0 ಮುನ್ನಡೆ ಪಡೆದುಕೊಂಡಿದ್ದ ಭಾರತ ತಂಡಕ್ಕೆ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 9 ವಿಕೆಟ್‌ಗಳಿಂದ ಗೆಲುವು ಸಾಧಿಸಿ ತಿರುಗೇಟು ನೀಡಿತ್ತು. ಆ ಮೂಲಕ ಪ್ರವಾಸಿ ತಂಡ ಅಧಿಕೃತವಾಗಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದರು. ಇದೀಗ ಭಾರತ ತಂಡದ ಈ ಪಂದ್ಯವನ್ನು ಗೆದ್ದರೆ 2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ನೇರ ಅರ್ಹತೆ ಗಿಟ್ಟಿಸಿಕೊಳ್ಳಲಿದೆ. ಈ ಪಂದ್ಯ ಸೋತರೆ ನ್ಯೂಜಿಲ್ಯಾಂಡ್ ಹಾಗೂ ಶ್ರೀಲಂಕಾ ನಡುವಿನ ಟೆಸ್ಟ್ ಸರಣಿಯಲ್ಲಿ ಫಲಿತಾಂಶದ ಮೇಲೆ ಭಾರತದ ಅರ್ಹತೆ ನಿರ್ಧಾರವಾಗಲಿದೆ.




ಭಾರತ - ಆಸ್ಟ್ರೇಲಿಯಾ ಪ್ಲೇಯಿಂಗ್​ 11:


ಭಾರತ ಪ್ಲೇಯಿಂಗ್​ 11: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಉಮೇಶ್ ಯಾದವ್.


ಆಸ್ಟ್ರೇಲಿಯಾ ಪ್ಲೇಯಿಂಗ್​ 11: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ಮ್ಯಾಥ್ಯೂ ಕುಹ್ನೆಮನ್, ನಾಥನ್ ಲಿಯಾನ್.

Published by:shrikrishna bhat
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು