• ಹೋಂ
  • »
  • ನ್ಯೂಸ್
  • »
  • ಕ್ರೀಡೆ
  • »
  • IND vs AUS Test: ಭಾರತ-ಆಸೀಸ್​ ಸರಣಿ ಎಲ್ಲಿ? ಎಷ್ಟು ಗಂಟೆಗೆ? ಬಾರ್ಡರ್-ಗವಾಸ್ಕರ್​ ಸಿರೀಸ್​ನ್ನು ಉಚಿತವಾಗಿ ನೋಡಲು ಹೀಗೆ ಮಾಡಿ

IND vs AUS Test: ಭಾರತ-ಆಸೀಸ್​ ಸರಣಿ ಎಲ್ಲಿ? ಎಷ್ಟು ಗಂಟೆಗೆ? ಬಾರ್ಡರ್-ಗವಾಸ್ಕರ್​ ಸಿರೀಸ್​ನ್ನು ಉಚಿತವಾಗಿ ನೋಡಲು ಹೀಗೆ ಮಾಡಿ

IND vs AUS 2023

IND vs AUS 2023

IND vs AUS Test: ಬಾರ್ಡರ್ ಗವಾಸ್ಕರ್ ಟ್ರೋಫಿ ಅಡಿಯಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ತಂಡಗಳು 4 ಪಂದ್ಯಗಳ ಟೆಸ್ಟ್​ ಸರಣಿ ನಡೆಯಲಿದೆ. ಈ ಸರಣಿಯನ್ನು ನೀವು ಉಚಿತವಾಗಿ ವೀಕ್ಷಿಸಬಹುದು.

  • Share this:

ರೋಹಿತ್ ಶರ್ಮಾ ನಾಯಕತ್ವದ ಭಾರತ ಕ್ರಿಕೆಟ್ ತಂಡವು 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾವನ್ನು (IND vs AUS) ಎದುರಿಸಲಿದೆ. ಕಾಂಗರೂಗಳಿಗೆ ಟೀಂ ಇಂಡಿಯಾವನ್ನು ತವರಿನಲ್ಲಿ ಸೋಲಿಸುವುದು ಸುಲಭವಲ್ಲ. ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ (Border–Gavaskar Trophy) ಗೆಲ್ಲುವ ಮೂಲಕ ಟೀಂ ಇಂಡಿಯಾ (Team India) ICC ಶ್ರೇಯಾಂಕದಲ್ಲಿ ನಂಬರ್ ಒನ್ ಸ್ಥಾನಕ್ಕೇರಲು ಸಿದ್ದವಾಗಿದೆ. ಅಲ್ಲದೆ, ಈ ಸರಣಿಯನ್ನು ಅತಿಥಿಗಳ ಮೇಲೆ ದೊಡ್ಡ ಅಂತರದಿಂದ ಗೆಲ್ಲುವ ಮೂಲಕ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ (WTC 2023) ಫೈನಲ್‌ಗೆ ತಲುಪುವ ಸಲುವಾಗಿ ಈ ಸರಣಿ ಭಾರತಕ್ಕೆ ಅತ್ಯಂತ ಮಹತ್ವದ್ದಾಗಿದೆ. ಭಾರತ ತಂಡ ಸರಣಿಯಲ್ಲಿ ಗೆಲುವಿನ ಲಯದಲ್ಲಿದೆ. ಟೀಂ ಇಂಡಿಯಾ ಈ ಮೊದಲು ಸತತ ಮೂರು ಬಾರಿ ಈ ಸರಣಿಯನ್ನು ವಶಪಡಿಸಿಕೊಂಡಿದೆ.


ಟೀಂ ಇಂಡಿಯಾಕ್ಕೆ ಒಳ್ಳೆಯ ಸಂಗತಿ ಎಂದರೆ ಅದರ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಸಂಪೂರ್ಣ ಫಿಟ್ ಆಗಿದ್ದು ತಂಡಕ್ಕೆ ಮರಳಿದ್ದಾರೆ. ಹಾಗಿದ್ದರೆ ಈ: ಸರಣಿ ಎಲ್ಲಿ? ಎಷ್ಟು ಗಂಟೆಗೆ ಆರಂಭವಾಗಲಿದೆ? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಪಂದ್ಯದ ಸಂಪೂರ್ಣ ವಿವರ:


ಭಾರತ ಮತ್ತು ಆಸ್ಟ್ರೇಲಿಯಾ ಮೊದಲ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯ ಗುರುವಾರದಿಂದ (ಫೆಬ್ರವರಿ 9) ಆರಂಭವಾಗಲಿದೆ.


ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಎಲ್ಲಿ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯಲಿದೆ.


ಇದನ್ನೂ ಓದಿ: Virat Kohli: ಆಸೀಸ್​ ವಿರುದ್ಧ ವಿರಾಟ್ ಶತಕದ ಬರ ಕೊನೆಗೊಳ್ಳುತ್ತಾ? ಸಚಿನ್ ದಾಖಲೆ ಮೇಲೆ ಕಿಂಗ್​ ಕೊಹ್ಲಿ ಕಣ್ಣು!


ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿಯ ಮೊದಲ ಟೆಸ್ಟ್ ಪಂದ್ಯ ಯಾವ ಸಮಯಕ್ಕೆ ಆರಂಬವಾಗಲಿದೆ?
ಬಾರ್ಡರ್​- ಗವಾಸ್ಕರ್​ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 9:30 ರಿಂದ ನಡೆಯಲಿದೆ. ಟಾಸ್ ಅರ್ಧ ಗಂಟೆ ಮುಂಚಿತವಾಗಿ ಅಂದರೆ ಬೆಳಿಗ್ಗೆ 9:00 ಗಂಟೆಗೆ ನಡೆಯಲಿದೆ.


ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಸರಣಿಯ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬೇಕು?
ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಸರಣಿಯ ನೇರ ಪ್ರಸಾರವನ್ನು ವೀಕ್ಷಿಸಬಹುದು, ಜೊತೆಗೆ ಡಿಡಿ ಸ್ಪೋರ್ಟ್ಸ್‌ನಲ್ಲಿ ಪಂದ್ಯವನ್ನು ಉಚಿತವಾಗಿ ಆನಂದಿಸಬಹುದು.


ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಸರಣಿಯ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬೇಕು?
ಭಾರತ ಮತ್ತು ಆಸ್ಟ್ರೇಲಿಯಾ ಸರಣಿಯ ಎಲ್ಲಾ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ನೀವು ಡಿಸ್ನಿ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದು. ಅಲ್ಲದೆ, ಲೈವ್ ಅಪ್‌ಡೇಟ್‌ಗಳಿಗಾಗಿ ನೀವು ನಮ್ಮ ವೆಬ್‌ಸೈಟ್ News18 ಕನ್ನಡವನ್ನು ಅನುಸರಿಸಬಹುದು.




ಭಾರತ - ಆಸ್ಟ್ರೇಲಿಯಾ ತಂಡ:


ಭಾರತ ತಂಡ (2 ಟೆಸ್ಟ್​ಗಳಿಗೆ): ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.


ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ , ಪೀಟರ್ ಹ್ಯಾಂಡ್ಸ್‌ಕಾಂಬ್ , ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್ , ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾಮಿ , ಸ್ಟೀವ್ ಸ್ಮಿತ್, ಮಿಚೆಲ್ ಸ್ವೆಪ್ಸನ್, ಡೇವಿಡ್.

Published by:shrikrishna bhat
First published: