Team India: ವಿಶ್ವಕಪ್​ಗೂ ಮುನ್ನ ಟಿ20 ಸರಣಿ ಆಡಲಿದೆ ಟೀಂ ಇಂಡಿಯಾ, ಆಸ್ಟ್ರೇಲಿಯಾ ನಡುವಿನ ಸರಣಿಯ ವೇಳಾಪಟ್ಟಿ ಬಿಡುಗಡೆ

ಮುಂದಿನ ಟಿ20 ವಿಶ್ವಕಪ್​ ಗೂ ಮುನ್ನ ಆಸ್ಟ್ರೇಲಿಯಾ ಭಾರತ ಪ್ರವಾಸವನ್ನು ಕೈಗೊಳ್ಳಲಿದ್ದು, 3 ಪಂದ್ಯಗಳ ಟಿ 20 ಸರಣಿ ಆಡಲಿದೆ ಎಂದು ಬಿಸಿಸಿಐ ತಿಳಸಿದ್ದು, ಅದರ ವೇಳಾಪಟ್ಟಿಯನ್ನೂ ಬಿಡುಗಡೆ ಮಾಡಿದೆ.

IND vs AUS

IND vs AUS

  • Share this:
ಸಧ್ಯ ಬಾರತೀಯ ಆಟಗಾರರು ಸೇರಿದಂತೆ ವಿದೇಶಿ ಅಟಗಾರರೂ ಸಹ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಯಲ್ಲಿ ಆಟವಾಡುತ್ತಿದ್ದಾರೆ. ಅಲ್ಲದೇ ಇನ್ನೇನು ಕೆಲ ದಿನಗಳಲ್ಲಿ, ಮೇ 29ಕ್ಕೆ ಐಪಿಎಲ್ 2022ರ 15ನೇ ಆವೃತ್ತಿಗೆ ಅಧಿಕೃತವಾಗಿ ತೆರೆಬೀಳಲಿದೆ. ಇದರ ನಡುವೆ ಇದೀಗ ನಿಧಾನವಾಗಿ ಎಲ್ಲಾ ದೇಶದ ಕ್ರಿಕೆಟ್ ಮಂಡಳಿಗಳು ತಮ್ಮ ದೇಶದ ಕ್ರಿಕೆಟ್ ತಂಡದ ಮುಂದಿನ ಅಂತರಾಷ್ಟ್ರೀಯ ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡುತ್ತಿದೆ. ಅದರಂತೆ ಕೆಲ ದಿನಗಳ ಹಿಂದೆ ಬಿಸಿಸಿಐ (BCCI) ಟೀಂ ಇಂಡಿಯಾದ (Team India) ಮುಂದಿನ ಕೆಲ ಸರಣಿಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಅದರಂತೆಯೇ ಇದೀಗ ಮುಂದಿನ ಟಿ20 ವಿಶ್ವಕಪ್​ ಗೂ ಮುನ್ನ ಆಸ್ಟ್ರೇಲಿಯಾ ಭಾರತ (IND vs AUS) ಪ್ರವಾಸವನ್ನು ಕೈಗೊಳ್ಳಲಿದ್ದು, 3 ಪಂದ್ಯಗಳ ಟಿ 20 ಸರಣಿ ಆಡಲಿದೆ ಎಂದು ಬಿಸಿಸಿಐ ತಿಳಸಿದ್ದು, ಅದರ ವೇಳಾಪಟ್ಟಿಯನ್ನೂ ಬಿಡುಗಡೆ ಮಾಡಿದೆ.

ಭಾರತ - ಆಸೀಸ್ ಸರಣಿ:

ಇನ್ನು ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಈ ಬಾರಿಯ ಟಿ20 ವಿಶ್ವಕಪ್ ಗೂ ಮುನ್ನ 3 ಪಂದ್ಯಗಳ ಟಿ 20 ಸರಣಿಯನ್ನು ಆಡಲಿದೆ. ಮುಂಬರುವ ಸೆಪ್ಟೆಂಬರ್ ತಿಂಗಳಿನಲ್ಲಿ 3 ಪಂದ್ಯಗಳ ಟಿ 20 ಸರಣಿಯನ್ನು ಆಡಲಿದೆ. ಇನ್ನು, 2020ರಲ್ಲಿ ಆಸೀಸ್​ ನಲ್ಲಿ ನಡೆದ 3 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಆಸ್ಟ್ರೇಲಿಯಾವನ್ನು 2 - 1 ಅಂತರದಲ್ಲಿ ಸೋಲಿಸಿ ಸರಣಿಯನ್ನು ವಶಪಡಿಸಿಕೊಂಡಿತ್ತು. ಹೀಗಾಗಿ ಆಸೀಸ್ ಈ ಬಾರಿ ಭಾರತ ತಂಡವನ್ನು ಸೋಲಿಸಲು ಉತ್ಸುಕವಾಗಿದೆ.

ಉಭಯ ತಂಡಗಳ ಹೆಡ್​ ಟು ಹೆಡ್​ ನೋಡುವುದಾದರೆ, ಟೀಂ ಇಂಡಿಯಾ ಮತ್ತು ಆಸೀಸ್ ಈವರೆಗೂ ಒಟ್ಟು 23 ಟಿ 20 ಪಂದ್ಯಗಳು ನಡೆದಿದ್ದು ಇದರಲ್ಲಿ ಭಾರತ 13 ಹಾಗೂ ಆಸ್ಟ್ರೇಲಿಯಾ 9 ಪಂದ್ಯಗಳಲ್ಲಿ ಗೆದ್ದಿದೆ. ಒಂದು ಪಂದ್ಯ ಯಾವುದೇ ಫಲಿತಾಂಶವನ್ನು ಕಾಣದೇ ಅಂತ್ಯಗೊಂಡಿದೆ.

ಇದನ್ನೂ ಓದಿ: Virat Kohli: ದಕ್ಷಿಣ ಆಫ್ರಿಕಾ ಟೂರ್ನಿಯಿಂದ ಔಟ್​ ಆಗ್ತಾರಾ ಕೊಹ್ಲಿ? ಚರ್ಚೆಗೆ ಗ್ರಾಸವಾದ BCCI ನಡೆ

ಟೀಂ ಇಂಡಿಯಾ ಉಳಿದ ಸರಣಿ:

ಮೂಲಗಳ ವರದಿಯ ಪ್ರಕಾರ, ಭಾರತ ತಂಡವು ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಮೂರು ODI ಮತ್ತು 5 T20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಲಿದೆ. ಐದು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಂದು ಅಥವಾ ಎರಡು ಪಂದ್ಯಗಳು ಅಮೆರಿಕದ ಫ್ಲೋರಿಡಾದಲ್ಲಿ ನಡೆಯಲಿವೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿಯು ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಡೆಯಲಿದೆ. ಪಂದ್ಯಗಳು ಜುಲೈ 22, 24 ಮತ್ತು 27 ರಂದು ನಡೆಯಲಿವೆ.

ಇಂಗ್ಲೆಂಡ್-ಐರ್ಲೆಂಡ್ ಪ್ರವಾಸ:

ಜೂನ್ ತಿಂಗಳಿನಲ್ಲಿ ಟೀಂ ಇಂಡಿಯಾದ ಇಂಗ್ಲೆಂಡ್ ಮತ್ತು ಐರ್ಲೆಂಡ್ ಪ್ರವಾಸ ಆರಂಭವಾಗಲಿದೆ. ಪ್ರವಾಸದ ಆರಂಭದಲ್ಲಿ ಭಾರತ ತಂಡ ಐರ್ಲೆಂಡ್ ವಿರುದ್ಧ ಎರಡು ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಲಿದೆ. ಸರಣಿಯು ಜೂನ್ 26 ರಂದು ಪ್ರಾರಂಭವಾಗುತ್ತದೆ. ಇದಾದ ನಂತರ ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್‌ಗಳ ಸರಣಿಯ ಕೊನೆಯ ಟೆಸ್ಟ್ ಪಂದ್ಯ ನಡೆಯಲಿದೆ. ಕೊರೋನಾ ಕಾರಣ ಕಳೆದ ವರ್ಷ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಟೆಸ್ಟ್ ನಂತರ ಮೂರು ಪಂದ್ಯಗಳ ಟಿ20 ಮತ್ತು ಏಕದಿನ ಏಕದಿನ ಸರಣಿ ನಡೆಯಲಿದೆ.

ಇದನ್ನೂ ಓದಿ: ಇಂಗ್ಲೆಂಡ್ ನಂತರ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ Team India, ಸಂಪೂರ್ಣ ವೇಳಾಪಟ್ಟಿ ಬಿಡುಗಡೆ

ಟೀಮ್ ಇಂಡಿಯಾ ಸಂಭಾವ್ಯ ತಂಡ:

ಶಿಖರ್ ಧವನ್, ರೋಹಿತ್ ಶರ್ಮಾ ( ನಾಯಕ ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕಟ್ ಕೀಪರ್), ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ಆರ್​ ಅಶ್ವೀನ್.
Published by:shrikrishna bhat
First published: