• Home
  • »
  • News
  • »
  • sports
  • »
  • IND vs AUS: ಆಸೀಸ್​ ವಿರುದ್ಧದ ಅಂತಿಮ ಹಣಾಹಣಿಗೆ ಟೀಂ ಇಂಡಿಯಾದ ಸ್ಟಾರ್​ ಪ್ಲೇಯರ್​ ಔಟ್​?

IND vs AUS: ಆಸೀಸ್​ ವಿರುದ್ಧದ ಅಂತಿಮ ಹಣಾಹಣಿಗೆ ಟೀಂ ಇಂಡಿಯಾದ ಸ್ಟಾರ್​ ಪ್ಲೇಯರ್​ ಔಟ್​?

IND vs AUS

IND vs AUS

IND vs AUS: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3 ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯವು ಹೈದರಾಬಾದ್‌ನ ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಾಳೆ (ಭಾನುವಾರ) ನಡೆಯಲಿದೆ. ಆದರೆ ನಾಳಿನ ಪಂದ್ಯಕ್ಕೆ ಸ್ಟಾರ್​ ಪ್ಲೇಯರ್ ಕಣಕ್ಕಿಳಿಯುವುದು ಅನುಮಾನವಾಗಿದೆ.

  • Share this:

ಭಾರತ ಮತ್ತು ಆಸ್ಟ್ರೇಲಿಯಾ (IND v AUS) ನಡುವಿನ 3 ಪಂದ್ಯಗಳ ಸರಣಿಯ ಅಂತಿಮ ಮತ್ತು 3ನೇ ಟಿ20 ಪಂದ್ಯವು ನಾಳೆ ಹೈದರಾಬಾದ್‌ನ ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ (Rajiv Gandhi International Cricket Stadium Hyderabad) ನಡೆಯಲಿದೆ. ಈಗಾಗಲೇ ಸರಣಿಯಲ್ಲಿ ಉಭಯ ತಂಡಗಳು 1-1ರಿಂದ ಸಮಬಲ ಸಾಧಿಸಿದ್ದು, ನಾಳಿನ ಪಂದ್ಯದ ಮೇಲೆ ಎಲ್ಲರ ನಿರೀಕ್ಷೆ ಹೆಚ್ಚಿದೆ. ಆದರೆ ನಾಳಿನ ಆಸೀಸ್​ ವಿರುದ್ಧದ ಪಂದ್ಯದಲ್ಲಿ ನಾಳೆ ಟೀಂ ಇಂಡಿಯಾದ ಸ್ಟಾರ್​ ಪ್ಲೇಯರ್ ಕಣಕ್ಕಿಳಿಯುವುದು ಅನುಮಾನವಾಗಿದೆ. ಹೌದು, ಕಳೆದ ಪಂದ್ಯದಲ್ಲಿಯೇ ರಿಷಭ್ ಪಂತ್ (Rishabh Pant) ಮತ್ತು ದಿನೇಶ್ ಕಾರ್ತಿಕ್ (Dinesh Karthik) ಇಬ್ಬರನ್ನೂ ಕಣಕ್ಕಿಳಿಸಲಾಗಿತ್ತು. ಅಲ್ಲದೇ ಇದರಿಂದಾಗಿ ಭುವನೇಶ್ವರ್ ಕುಮಾರ್ ಅವರನ್ನು ತಂಡದಿಂದ ಕೈಬಿಡಲಾಗಿತ್ತು.


ನಾಳಿನ ಪಂದ್ಯದಿಂದ ಪಂತ್​ ಔಟ್​?:


ಇನ್ನು, ಕೆಲ ಮೂಲಗಳ ಪ್ರಕಾರ, ನಾಳಿನ ಆಸೀಸ್​ ವಿರುದ್ಧದ ಪಂದ್ಯದಲ್ಲಿ ರಿಷಭ್ ಪಂತ್ ಅವರನ್ನು ತಂಡದಿಂದ ಕೈಬಿಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಕಳೆದ ಪಂದ್ಯದಲ್ಲಿ ಪಂತ್​ ಮತ್ತು ಕಾರ್ತಿಕ್ ಅವರನ್ನು ಕಣಕ್ಕಿಳಿಸಿತ್ತು. ಇದರಿಂದಾಗಿ ಭುವನೇಶ್ವರ್ ಕುಮಾರ್ ಪ್ಲೇಯಿಂಗ್ 11 ನಲ್ಲಿ ಸ್ಥಾನ ಪಡೆಯಲಿಲ್ಲ. ಆದರೆ ನಾಳೆ ನಡೆಯಲಿರುವ ಹೈದರಾಬಾದ್​ ಪಂದ್ಯದಲ್ಲಿ ರಿಷಭ್ ಪಂತ್​ ಅವರನ್ನು ತಂಡದಿಂದ ಹೊರಗಿಟ್ಟು ಮತ್ತೆ ವೇಗಿ ಭುವನೇಶ್ವರ್ ಕುಮಾರ್ ಅವರನ್ನು ಕರೆತರಲು ಕೋಚ್​ ನಿರ್ಧರಿಸಿದ್ದಾಗಿ ತಿಳಿದುಬಂದಿದೆ.


ಅಲ್ಲದೇ ಭುವನೇಶ್ವರ್ ಕುಮಾರ್​ ಐಪಿಎಲ್​ ನಲ್ಲಿ ಹೈದರಾಬಾದ್ ಪರ ಆಡುವುದರಿಂದ ನಾಳಿನ ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣ ಒಂದರ್ಥದಲ್ಲಿ ಹೋಂ ಪಿಚ್​ ಇದ್ದಂತೆ. ಅದಕ್ಕಾಗಿ ಅಂತಿಮ ಪಟ್ಟಿಯಲ್ಲಿ ನಾಳೆ ಪಂತ್ ಬದಲಿಗೆ ಭುವಿಗೆ ಚಾನ್ಸ್ ಸಿಗುವ ಸಾಧ್ಯತೆ ಇದೆ.


ಇದನ್ನೂ ಓದಿ: IND vs AUS: ಟೀಂ ಇಂಡಿಯಾದ ಫಿನಿಶರ್ ಕುರಿತ ಟೀಕೆಗಳಿಗೆ ಎರಡೇ ಎಸೆತಗಳಲ್ಲಿ ಉತ್ತರಿಸಿದ ಡಿಕೆ


ಪಂದ್ಯದ ವಿವರ:


ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3 ಪಂದ್ಯಗಳ ಟಿ20 ಸರಣಿಯ 3ನೇ ಪಂದ್ಯವು ಹೈದರಾಬಾದ್‌ನ ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯ ಸಂಜೆ 7.00 ರಿಂದ ನಡೆಯಲಿದೆ. ಟಾಸ್ ಸಂಜೆ 6:30ಕ್ಕೆ ನಡೆಯಲಿದೆ. ಈ ಸರಣಿಯನ್ನು ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ನೇರ ಪ್ರಸಾರವನ್ನು ವೀಕ್ಷಿಸಬಹುದು.  ಸರಣಿಯ ಲೈವ್ ಸ್ಟ್ರೀಮಿಂಗ್ ಅನ್ನು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ನೋಡಬಹುದು. ಪಂದ್ಯದ ಲೈವ್ ಅಪ್‌ಡೇಟ್‌ಗಳಿಗಾಗಿ News 18 Kannada ವೆಬ್‌ಸೈಟ್ ಅನುಸರಿಸಿ.


ಪಿಚ್​ ರಿಪೋರ್ಟ್:


ಹೈದರಾಬಾದ್‌ನ ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣ ಕೊಂಚ ನಿಧಾನಗತಿಯ ಪಿಚ್​ ಆಗಿದೆ. ಹೀಗಾಗಿ ಟಿ20 ಕ್ರಿಕೆಟ್​ನಲ್ಲಿ ಇಲ್ಲಿ ದೊಡ್ಡ ಮೊತ್ತದ ಸ್ಕೋರ್​ ಮಾಡುವುದು ಕಷ್ಟವಾಗಿದೆ. ಹೀಗಾಗಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 160 ರನ್ ಆಗಿದೆ. ಆದರೆ 2ನೇ ಇನ್ನಿಂಗ್ಸ್ ನಲ್ಲಿ ಸರಾಸರಿ ಸ್ಕೋರ್​ 140 ರನ್ ಹೀಗಾಗಿ ಈ ಪಿಚ್​ನಲ್ಲಿ ಅಂದರೆ ನಾಳೆ ಟಾಸ್​ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಲ್ಳುವ ಸಾಧ್ಯತೆ ಹೆಚ್ಚಿದೆ.


ಇದನ್ನೂ ಓದಿ: T20 World Cup 2007: ಆ ಇತಿಹಾಸಕ್ಕೆ ಇಂದು 15 ವರ್ಷ, ಟಿ20 ಲೋಕದ ರಾಜರಾಗಿ ಮೆರೆದಿದ್ದ ಧೋನಿ ಯುವ ಬ್ರಿಗೇಡ್


IND vs AUS ಸಂಭಾವ್ಯ ತಂಡ:


ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್​ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಾಲ್.


ಆಸ್ಟ್ರೇಲಿಯಾ ಸಂಭಾವ್ಯ ತಂಡ:  ಆರನ್ ಫಿಂಚ್, ಕ್ಯಾಮೆರಾನ್ ಗ್ರೀನ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್, ಡೇನಿಯಲ್​ ಸ್ಯಾಮ್ಸ್, ಪ್ಯಾಟ್ ಕಮಿನ್ಸ್, ಸೀನ್ ಅಬಾಟ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.

Published by:shrikrishna bhat
First published: