ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿರುವ 4 ಪಂದ್ಯಗಳ ಟೆಸ್ಟ್ ಸರಣಿಗೂ ಮುನ್ನ ಗಾಯಗೊಂಡ ಆಟಗಾರ ಪಟ್ಟಿ ಬೆಳೆಯುತ್ತಲೇ ಇದೆ. ಬಾರ್ಡರ್-ಗವಾಸ್ಕರ್ ಟ್ರೋಫಿಯ (Border–Gavaskar Trophy) ಮೊದಲ ಪಂದ್ಯ ನಾಗ್ಪುರದಲ್ಲಿ ನಡೆಯಲಿದೆ. ಈ ಟೆಸ್ಟ್‌ಗೂ ಮುನ್ನ 3 ಪ್ರಮುಖ ಆಟಗಾರರು ಗಾಯದ ಸಮಸ್ಯೆಯಿಂದ ಪಂದ್ಯದಿಂದ ಹೊರಗುಳಿದಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC 2023) ಫೈನಲ್‌ಗೆ ಟಿಕೆಟ್ ಖಚಿತಪಡಿಸಿಕೊಳ್ಳಲು, ಟೀಂ ಇಂಡಿಯಾ ಸರಣಿಯನ್ನು ದೊಡ್ಡ ಅಂತರದಿಂದ ಗೆಲ್ಲುವ ಅಗತ್ಯವಿದೆ. ಫೆಬ್ರವರಿ 9ರಂದು, ಸರಣಿ ಆರಂಭವಾಗಲಿದೆ. ಭಾರತ ಮತ್ತು ಆಸ್ಟ್ರೇಲಿಯಾದ (IND vs AUS Test) ಎರಡು ಬಲಿಷ್ಠ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲಿವೆ. ಎರಡೂ ತಂಡಗಳು ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ವಶಪಡಿಸಿಕೊಳ್ಳಲು ಮೈದಾನಕ್ಕಿಳಿದಿವೆ. ನಾಗ್ಪುರದಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ಗೆ (Test Cricket) ಮುನ್ನವೇ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಆಘಾತಕ್ಕೆ ಒಳಗಾಗಿವೆ. ಟೀಂ ಇಂಡಿಯಾದ ಒಬ್ಬರು ಮತ್ತು ಆಸ್ಟ್ರೇಲಿಯಾದ ಇಬ್ಬರು ಆಟಗಾರರು ಗಾಯಗೊಂಡಿದ್ದಾರೆ.
ನಾಗ್ಪುರ ಟೆಸ್ಟ್‌ನಿಂದ 3 ಆಟಗಾರರು ಔಟ್:
ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಬೆನ್ನುನೋವಿನಿಂದಾಗಿ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ತವರಿನ ಸರಣಿಯ ಸಮಯದಲ್ಲಿ ಅವರು ಈ ಸಮಸ್ಯೆಗೆ ಗುರಿಯಾದರು. ಕಳೆದ ಕೆಲವು ತಿಂಗಳುಗಳಲ್ಲಿ, ಶ್ರೇಯಸ್ ಅಯ್ಯರ್ ತಂಡಕ್ಕಾಗಿ ಉತ್ತಮ ಇನ್ನಿಂಗ್ಸ್ ಗಳನ್ನು ಆಡಿದ್ದಾರೆ, ಈಗ ಅವರ ಗಾಯವು ತಂಡದ ಸಂಯೋಜನೆಯ ಮೇಲೆ ಪರಿಣಾಮ ಬೀರುತ್ತದೆ.
ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಕೂಡ ಬೆರಳಿನ ಗಾಯದಿಂದ ಬಳಲುತ್ತಿದ್ದಾರೆ. ಮೊದಲ ಪಂದ್ಯಕ್ಕೂ ಮುನ್ನ ಚೇತರಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ತಿಳಿದುಬಂದಿದೆ. ವೇಗದ ಬೌಲರ್ ಜೋಶ್ ಹೇಜಲ್‌ವುಡ್ ಸಹ ನಾಗ್ಪುರ ಟೆಸ್ಟ್‌ಗೆ ಮುನ್ನ ಇಂಜುರಿಯಾಗಿದ್ದು, ತಂಡದಿಂದ ಹೊರನಡೆದಿದ್ದಾರೆ.
ಇದನ್ನೂ ಓದಿ: IND vs AUS 2023: ಆಸೀಸ್ ವಿರುದ್ಧ ಭಾರತ ಸೋಲಲಿದೆ! ಬಾರ್ಡರ್ ಗವಾಸ್ಕರ್ ಟ್ರೋಫಿಯ ಭವಿಷ್ಯ ನುಡಿದ ಮಾಜಿ ಸ್ಟಾರ್ ಕ್ರಿಕೆಟಿಗ
ಆಸೀಸ್ನ ಇಬ್ಬರು ಸ್ಟಾರ್ ಪ್ಲೇಯರ್ಸ್ ಔಟ್:
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಫೆಬ್ರವರಿ 17 ರಿಂದ ದೆಹಲಿಯಲ್ಲಿ ನಡೆಯಲಿದೆ. ನಾಗ್ಪುರ ಮತ್ತು ದೆಹಲಿ ಟೆಸ್ಟ್ ನಡುವೆ 3 ದಿನಗಳ ವ್ಯತ್ಯಾಸವಿದೆ. ಹೀಗಿರುವಾಗ ಡೆಲ್ಲಿ ಟೆಸ್ಟ್‌ಗೂ ಮುನ್ನ ಫಿಟ್ ಆಗುವುದು ಹ್ಯಾಜಲ್‌ವುಡ್‌ಗೆ ಸವಾಲಾಗಿ ಪರಿಣಮಿಸಲಿದೆ. ಹ್ಯಾಜಲ್‌ವುಡ್ ಅನುಪಸ್ಥಿತಿಯಲ್ಲಿ, ಸ್ಕಾಟ್ ಬೋಲ್ಯಾಂಡ್ ಭಾರತದಲ್ಲಿ ಮೊದಲ ಟೆಸ್ಟ್ ಆಡುವ ಅವಕಾಶವನ್ನು ಪಡೆಯಬಹುದು.
ಬೋಲ್ಯಾಂಡ್ ಇದುವರೆಗೆ ಎಲ್ಲಾ 6 ಟೆಸ್ಟ್ ಪಂದ್ಯಗಳನ್ನು ಆಸ್ಟ್ರೇಲಿಯಾದಲ್ಲಿ ಮಾತ್ರ ಆಡಿದ್ದಾರೆ. ಬೋಲ್ಯಾಂಡ್ ಮತ್ತು ಕಮ್ಮಿನ್ಸ್ ಅಭ್ಯಾಸದ ಅವಧಿಯಲ್ಲೂ ಹೊಸ ಚೆಂಡಿನೊಂದಿಗೆ ಸಾಕಷ್ಟು ಬೌಲಿಂಗ್ ಮಾಡಿದ್ದಾರೆ. ಬೋಲ್ಯಾಂಡ್ 6 ಟೆಸ್ಟ್‌ಗಳಲ್ಲಿ 12.21 ಸರಾಸರಿಯಲ್ಲಿ ಒಟ್ಟು 28 ವಿಕೆಟ್‌ಗಳನ್ನು ಪಡೆದಿದ್ದಾರೆ.
ಭಾರತ - ಆಸ್ಟ್ರೇಲಿಯಾ ತಂಡ:
ಭಾರತ ತಂಡ (2 ಟೆಸ್ಟ್ಗಳಿಗೆ): ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ , ಪೀಟರ್ ಹ್ಯಾಂಡ್ಸ್‌ಕಾಂಬ್ , ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್ , ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾಮಿ , ಸ್ಟೀವ್ ಸ್ಮಿತ್, ಮಿಚೆಲ್ ಸ್ವೆಪ್ಸನ್, ಡೇವಿಡ್/ ಮಿಚೆಲ್ ಸ್ಟಾರ್ಕ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್ (ಈ ಮೂವರು ಕಣಕ್ಕಿಳಿಯುವುದು ಅನುಮಾನ).
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ