ಭಾರತ ಕ್ರಿಕೆಟ್ ತಂಡಕ್ಕೆ (Team India) ಮತ್ತು ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ (Ravindra Jadeja) ಫಿಟ್ ಆಗಿದ್ದು, ನೆಟ್ಸ್ ನಲ್ಲಿ ಬೌಲಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಇದರ ವಿಡಿಯೋವನ್ನು ಅವರು ತಮ್ಮ ಅಧಿಕೃತ ಟ್ವಿಟರ್ (Twitter) ಖಾತೆಯಿಂದ ಹಂಚಿಕೊಂಡಿದ್ದಾರೆ. ಶೇರ್ ಮಾಡಿರುವ ವಿಡಿಯೋದಲ್ಲಿ ಅವರು ಮೈದಾನದಲ್ಲಿ ಭರ್ಜರಿ ಅಬ್ಯಾಸ ಮಾಡುತ್ತಿರುವುದು ಕಂಡು ಬಂದಿದೆ. ಈ ವೀಡಿಯೋವನ್ನು ಶೇರ್ ಮಾಡಿರುವ ಭಾರತೀಯ ತಾರೆ, 'ಎಡಗೈ ಬೌಲಿಂಗ್ ನನ್ನ ಆದ್ಯತೆ' ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ಜಡೇಜಾ ಮುಂದಿನ ಆಸೀಸ್ ವಿರುದ್ಧದ ಟೆಸ್ಟ್ ಸರಣಿ ಮೂಲಕ ಮತ್ತೆ ತಂಡಕ್ಕೆ ಕಂಬ್ಯಾಕ್ ಮಾಡಲಿದ್ದಾರೆ.
ಅಭ್ಯಾಸ ಆರಂಭಿಸಿದ ಜಡ್ಡು:
ಟಿ20 ವಿಶ್ವಕಪ್ನಿಂದ ದೂರವಿರುವ ರವೀಂದ್ರ ಜಡೇಜಾ ಅವರು ಇದೀಗ ಮತ್ತೆ ಮೈದಾನಕ್ಕೆ ಇಳಿಯಲು ಸಿದ್ದರಾಗಿದ್ದಾರೆ. ಜಡೇಜಾ ಅವರು ಮುಂದಿನ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಿಂದ ಕಂಬ್ಯಾಕ್ ಮಾಡಲಿದ್ದಾರೆ. ಇದರ ಭಾಗವಾಗಿ ಅವರು ಈಗಾಗಲೇ ಬರ್ಜರಿ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ. ಈ ಕುರಿತು ಹಂಚಿಕೊಂಡಿರುವ ವಿಡಿಯೋ ಎಲ್ಲಡೆ ಸಖತ್ ವೈರಲ್ ಆಗಿದೆ.
Left arm around #priority✌️ pic.twitter.com/s0IWfiDU20
— Ravindrasinh jadeja (@imjadeja) January 19, 2023
ಇದನ್ನೂ ಓದಿ: IND vs PAK: ಅಮೆರಿಕಾದಲ್ಲಿ ನಡೆಯುತ್ತಾ ಭಾರತ-ಪಾಕಿಸ್ತಾನ ಪಂದ್ಯ? ಐಸಿಸಿ ಮೆಗಾ ಪ್ಲ್ಯಾನ್!
ರಣಜಿ ಆಡ್ತಾರಾ ಜಡೇಜಾ?:
ಮೈದಾನದಲ್ಲಿ ರವೀಂದ್ರ ಜಡೇಜಾ ಬೌಲಿಂಗ್ ಮಾಡುತ್ತಿರುವುದನ್ನು ನೋಡಿದರೆ ಅವರು ಜನವರಿ 24ರಂದು ಸೌರಾಷ್ಟ್ರ ಪರ ಕೊನೆಯ ರಣಜಿ ಪಂದ್ಯದಲ್ಲಿ ಆಡಬಹುದು ಮಾಡಬಹುದು ಎಂದು ನಿರೀಕ್ಷಿಸಲಾಗಿದೆ. ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಏಷ್ಯಾಕಪ್ನಲ್ಲಿ ಮೊಣಕಾಲಿನ ಗಾಯದಿಂದಾಗಿ ಪ್ರಮುಖ ಪಂದ್ಯಾವಳಿಯಿಂದ ಹೊರಗುಳಿದಿದ್ದರು. ಈ ಗಾಯದ ಕಾರಣಕ್ಕಾಗಿ, ಅವರು T20 ವಿಶ್ವಕಪ್ನಂತಹ ದೊಡ್ಡ ಟೂರ್ನಿಗಳಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ.
ಜಡೇಜಾ ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನ:
ರವೀಂದ್ರ ಜಡೇಜಾ 295 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, 238 ಇನ್ನಿಂಗ್ಸ್ಗಳಲ್ಲಿ 5427 ರನ್ ಗಳಿಸಿದ್ದಾರೆ. ಇದೇ ವೇಳೆ ಅವರ ಬ್ಯಾಟ್ನಿಂದ ಮೂರು ಶತಕ ಮತ್ತು 30 ಅರ್ಧಶತಕಗಳು ಹೊರಹೊಮ್ಮಿವೆ. ಜಡೇಜಾ ಟೆಸ್ಟ್ ಕ್ರಿಕೆಟ್ನಲ್ಲಿ 2523 ರನ್, ಏಕದಿನದಲ್ಲಿ 2447 ರನ್ ಮತ್ತು ಟಿ20 ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ 457 ರನ್ ಗಳಿಸಿದ್ದಾರೆ.
ಅವರ ಬೌಲಿಂಗ್ ಪ್ರದರ್ಶನದ ಬಗ್ಗೆ ಮಾತನಾಡುತ್ತಾ, ಅವರು 295 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 482 ವಿಕೆಟ್ಗಳನ್ನು ಪಡೆದಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ 242, ಏಕದಿನದಲ್ಲಿ 189 ಮತ್ತು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 51 ವಿಕೆಟ್ಗಳನ್ನು ಪಡೆದಿದ್ದಾರೆ.
2 ಟೆಸ್ಟ್ ಪಂದ್ಯಕ್ಕೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ