• ಹೋಂ
  • »
  • ನ್ಯೂಸ್
  • »
  • ಕ್ರೀಡೆ
  • »
  • IND vs AUS: ಆಸೀಸ್​ ಸರಣಿಯ ನಂತ್ರ ಟೀಂ ಇಂಡಿಯಾ ಈ ಆಟಗಾರರ ನಿವೃತ್ತಿ, ಮಹತ್ವದ ನಿರ್ಧಾರಕ್ಕೆ ಮುಂದಾದ್ರಾ ಸ್ಟಾರ್​ ಪ್ಲೇಯರ್ಸ್​

IND vs AUS: ಆಸೀಸ್​ ಸರಣಿಯ ನಂತ್ರ ಟೀಂ ಇಂಡಿಯಾ ಈ ಆಟಗಾರರ ನಿವೃತ್ತಿ, ಮಹತ್ವದ ನಿರ್ಧಾರಕ್ಕೆ ಮುಂದಾದ್ರಾ ಸ್ಟಾರ್​ ಪ್ಲೇಯರ್ಸ್​

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

IND vs AUS: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಫೆಬ್ರವರಿ 9 ರಿಂದ 13ರ ವರೆಗೆ ನಡೆಯಲಿದೆ. ಈ ಟೆಸ್ಟ್ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಅವರಂತಹ ಆಟಗಾರರು ತಂಡಕ್ಕೆ ಮರಳುತ್ತಿದ್ದಾರೆ.

  • Share this:

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಫೆಬ್ರವರಿ 9 ರಿಂದ 4 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಆದರೆ ಈ ಮಹತ್ವದ ಸರಣಿಯ ನಂತರ ಭಾರತದ 3 ಸ್ಟಾರ್ ಕ್ರಿಕೆಟಿಗರು ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿಯಾಗುವ ಸಾಧ್ಯತೆ ಇದೆ. ಆಸ್ಟ್ರೇಲಿಯಾ (IND vs AUS) ವಿರುದ್ಧದ ಮೊದಲ ಟೆಸ್ಟ್ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಕ್ರಿಕೆಟ್ ಸ್ಟೇಡಿಯಂನಲ್ಲಿ (Vidarbha Cricket Association Stadium) ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಫೆಬ್ರವರಿ 9 ರಿಂದ 13ರ ವರೆಗೆ ನಡೆಯಲಿದೆ. ಕೆಲವು ದಿನಗಳ ಹಿಂದೆ, ಬಿಸಿಸಿಐ (BCCI) ಈ ಸರಣಿಗೆ ಭಾರತ ತಂಡವನ್ನು ಘೋಷಿಸಿತು, ಇದರಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ (Ravindra Jadeja) ಅವರಂತಹ ಆಟಗಾರರು ಗಾಯದಿಂದ ಚೇತರಿಸಿಕೊಂಡ ನಂತರ ತಂಡಕ್ಕೆ ಮರಳಲಿದ್ದಾರೆ. ಕೆಲವು ಆಟಗಾರರಿಗೆ, ಈ ಟೆಸ್ಟ್ ಸರಣಿಯು ಅವರ ವೃತ್ತಿಜೀವನದ ಕೊನೆಯ ಸರಣಿಯಾಗಿರಬಹುದು. ಅಂತಹ ಆಟಗಾರರು ಯಾರು ಎಂದು ನೋಡೋಣ ಬನ್ನಿ.


ಉಮೇಶ್ ಯಾದವ್:


ಭಾರತ ಮತ್ತು ಆಸ್ಟ್ರೇಲಿಯಾ ಬಾರ್ಡರ್-ಗಾವಸ್ಕರ್ ಸರಣಿಯ ನಂತರ ಭಾರತದ ಅನುಭವಿ ಬೌಲರ್ ಉಮೇಶ್ ಯಾದವ್ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ಸಾಧ್ಯತೆಯಿದೆ. ಉಮೇಶ್ ಇದುವರೆಗೆ 54 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 165 ವಿಕೆಟ್ ಪಡೆದಿದ್ದಾರೆ. ಒಂದು ದಶಕಕ್ಕೂ ಹೆಚ್ಚು ಅವಧಿಯ ಟೆಸ್ಟ್ ವೃತ್ತಿಜೀವನದಲ್ಲಿ, ಉಮೇಶ್ ಅವರು ಅದ್ಭುತ ಬೌಲಿಂಗ್​ ಮಾಡಿದ್ದರು.


ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉಮೇಶ್ 7 ವಿಕೆಟ್ ಪಡೆದು ಮಿಂಚಿದ್ದರು. ಉಮೇಶ್ ಯಾದವ್ ಮುಂಬರುವ ಸರಣಿಯಲ್ಲೂ ಪ್ರಭಾವಿ ಪ್ರದರ್ಶನ ನೀಡಿ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿಯಾಗುವ ಸಾಧ್ಯತೆ ಇದೆ. ಉಮೇಶ್ ಯಾದವ್ ಆಸ್ಟ್ರೇಲಿಯಾ ವಿರುದ್ಧ ಇದುವರೆಗೆ 48 ವಿಕೆಟ್ ಪಡೆದಿದ್ದು, ಮುಂಬರುವ ಸರಣಿಯಲ್ಲಿ 50 ವಿಕೆಟ್ ಪೂರೈಸುವ ಅವಕಾಶವಿದೆ.


ಇದನ್ನೂ ಓದಿ: Deepak Chahar: ಟೀಂ ಇಂಡಿಯಾ ಸ್ಟಾರ್​ ಆಟಗಾರನ ಪತ್ನಿಗೆ ಮೋಸ, ಕೊಲೆ ಬೆದರಿಕೆ; ಕಹಾನಿ ಮೇ ಟ್ವಿಸ್ಟ್


ಚೇತೇಶ್ವರ ಪೂಜಾರ:


ಭಾರತ ಮತ್ತು ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ನಂತರ ಚೇತೇಶ್ವರ ಪೂಜಾರ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ಸಾಧ್ಯತೆ ಇದೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಚೇತೇಶ್ವರ ಪೂಜಾರ ಅವರ ಈವರೆಗಿನ ಪ್ರದರ್ಶನ ಸ್ಥಿರವಾಗಿದೆ. ಪೂಜಾರ ಆಸ್ಟ್ರೇಲಿಯಾ ವಿರುದ್ಧ ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದ ಮತ್ತು ಅತಿ ಹೆಚ್ಚು ಶತಕ (5) ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.


ಅವರು ಹಿಂದಿನ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದ್ದರು. ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ನಿರ್ಣಾಯಕರಾಗಲಿದ್ದಾರೆ. ಇತ್ತೀಚೆಗಷ್ಟೇ ಬಾಂಗ್ಲಾದೇಶ ವಿರುದ್ಧ ಶತಕ ಬಾರಿಸುವ ಮೂಲಕ ತಮ್ಮ ಪ್ರತಿಭೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದರು. ಮುಂಬರುವ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ನಂತರ ಪೂಜಾರ ಅವರು ಟೆಸ್ಟ್​ ಮಾದರಿಯಿಂದ ನಿವೃತ್ತರಾಗಬಹುದು.


ಜಯದೇವ್ ಉನದ್ಕಟ್:


ಬಾರ್ಡರ್ ಗವಾಸ್ಕರ್ ಟ್ರೋಫಿ ನಂತರ ಜಯದೇವ್ ಉನದ್ಕಟ್ ಟೆಸ್ಟ್ ನಿಂದ ನಿವೃತ್ತಿಯಾಗುವ ಸಾಧ್ಯತೆ ಇದೆ. ಟೆಸ್ಟ್‌ಗೆ ಪದಾರ್ಪಣೆ ಮಾಡಿದ ನಂತರ, ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉನಾದ್ಕಟ್ 10 ವರ್ಷಗಳ ನಂತರ ಅವಕಾಶ ಪಡೆದರು. ಎಡಗೈ ವೇಗದ ಬೌಲರ್ ಆಗಿರುವ ಜಯದೇವ್ ಇದುವರೆಗೆ ಕೇವಲ 2 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ.




ಭಾರತದ ಅನುಭವಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ತಂಡಕ್ಕೆ ವಾಪಸಾಗಿರುವುದರಿಂದ, ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ತಂಡದಲ್ಲಿ ಅವಕಾಶ ಪಡೆಯುವುದು ಜಯದೇವ್‌ಗೆ ಸ್ವಲ್ಪ ಕಷ್ಟವಾಗಿದೆ. ಭಾರತ ಮತ್ತು ಆಸ್ಟ್ರೇಲಿಯಾ ಟೆಸ್ಟ್ ಸರಣಿ ಜಯದೇವ್ ಅವರ ವೃತ್ತಿಜೀವನಕ್ಕೆ ಕೊನೆಯದಾಗಿರಬಹುದು. ಜಯದೇವ್ ಸೌರಾಷ್ಟ್ರ ತಂಡಕ್ಕಾಗಿ ರಣಜಿ ಕ್ರಿಕೆಟ್ ಆಡುತ್ತಾರೆ. ಕೆಲ ದಿನಗಳ ಹಿಂದೆ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಸತತ ಮೂರು ವಿಕೆಟ್ ಕಬಳಿಸಿ ಹ್ಯಾಟ್ರಿಕ್ ಸಾಧನೆ ಮಾಡಿದ್ದರು.


ಭಾರತದ ಟೆಸ್ಟ್ ತಂಡ:


ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್, ಇಶಾನ್ ಕಿಶನ್, ಆರ್. ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್.

Published by:shrikrishna bhat
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು