ಇಂದೋರ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ (IND vs AUS) ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್‌ನ ಮೊದಲ ದಿನ ಪ್ರವಾಸಿ ತಂಡ ಆಸೀಸ್ ಮೇಲುಗೈ ಸಾಧೀಸಿತು. ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತವನ್ನು ಕೇವಲ 109 ರನ್‌ಗಳಿಗೆ ಆಲೌಟ್ ಮಾಡಿತು. ಇಂದೋರ್ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದರು. ಆದರೆ, ಆಸ್ಟ್ರೇಲಿಯಾದ ಸ್ಪಿನ್ ಬೌಲರ್‌ಗಳು ಭಾರತದ ಇನ್ನಿಂಗ್ಸ್ ಅನ್ನು 33 ಓವರ್‌ಗಳಲ್ಲಿ ಮುಗಿಸಿದರು. ಮೊದಲ ಇನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ (Virat Kohli) 22 ರನ್ ಭಾರತದ ಪರ ಗರಿಷ್ಠ ಸ್ಕೋರರ್ ಆಗಿದ್ದರು. ಅದೇ ಸಮಯದಲ್ಲಿ, 7 ದಿನಗಳ ಹಿಂದೆ ತನ್ನ ತಂದೆಯನ್ನು ಕಳೆದುಕೊಂಡ ಉಮೇಶ್ ಯಾದವ್ (Umesh Yadav) ಕೂಡ ತನ್ನ ಪವರ್ ಹಿಟ್ಟಿಂಗ್ ಮೂಲಕ ಜನರ ಹೃದಯವನ್ನು ಗೆದ್ದರು. ಉಮೇಶ್ 13 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ ಒಂದು ಬೌಂಡರಿ ನೆರವಿನಿಂದ 17 ರನ್ ಗಳಿಸಿದರು.
ಕೊಹ್ಲಿ ದಾಖಲೆ ಸರಿಗಟ್ಟಿದ ಯಾದವ್:
ಉಮೇಶ್ ಯಾದವ್ ತಮ್ಮ ಸಣ್ಣ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಅವರ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ. ಅದೇ ಸಮಯದಲ್ಲಿ, ಯುವರಾಜ್ ಸಿಂಗ್ ಮತ್ತು ರವಿಶಾಸ್ತ್ರಿ ಅವರಂತಹ ಅನುಭವಿಗಳು ಹಿಂದಿಕ್ಕಿದ್ದಾರೆ. ಹೌದು, ಇಂದೋರ್ ಟೆಸ್ಟ್‌ನ ಮೊದಲ ದಿನದಂದು, 10ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಉಮೇಶ್ ಯಾದವ್, ಆಸ್ಟ್ರೇಲಿಯಾದ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಎಸೆತದಲ್ಲಿ ಎರಡು ಸಿಕ್ಸರ್‌ಗಳನ್ನು ಬಾರಿಸಿದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ಪರ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಸರಿಗಟ್ಟಿದ್ದಾರೆ. ಈಗ ವಿರಾಟ್ ಕೊಹ್ಲಿ ಮತ್ತು ಉಮೇಶ್ ಯಾದವ್ ಟೆಸ್ಟ್‌ನಲ್ಲಿ 24-24 ಸಿಕ್ಸರ್‌ಗಳನ್ನು ಹೊಂದಿದ್ದಾರೆ.
ಅದೇ ಸಮಯದಲ್ಲಿ, ಉಮೇಶ್ ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಮತ್ತು ಯುವರಾಜ್ ಸಿಂಗ್ ಅವರನ್ನು ಹಿಂದಿಕ್ಕಿದ್ದಾರೆ. ಟೆಸ್ಟ್‌ನಲ್ಲಿ ಅವರ ಹೆಸರಿನಲ್ಲಿ 22-22 ಸಿಕ್ಸರ್‌ಗಳಿವೆ. ವೀರೇಂದ್ರ ಸೆಹ್ವಾಗ್ 91 ಸಿಕ್ಸರ್‌ಗಳೊಂದಿಗೆ ಟೆಸ್ಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ಸಿಕ್ಸರ್ ಬಾರಿಸಿದ್ದಾರೆ. ಮಹೇಂದ್ರ ಸಿಂಗ್ ಧೋನಿ 78 ಸಿಕ್ಸರ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ: IND vs AUS: ಟೀಂ ಇಂಡಿಯಾ ಪರ ಜಡ್ಡು ವಿಶೇಷ ಸಾಧನೆ, ಕುಂಬ್ಳೆ ದಾಖಲೆ ಬ್ರೇಕ್ ಮಾಡ್ತಾರಾ ಜಡೇಜಾ?
ಆಸೀಸ್ ಮೇಲುಗೈ:
ಇಂದೋರ್ ಟೆಸ್ಟ್‌ನ ಮೊದಲ ದಿನದಾಟದ ಬಗ್ಗೆ ಮಾತನಾಡುವುದಾದರೆ, ಭಾರತದ 109 ರನ್‌ಗಳಿಗೆ ಉತ್ತರವಾಗಿ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 4 ವಿಕೆಟ್‌ಗೆ 156 ರನ್ ಗಳಿಸಿತ್ತು. ಆಸ್ಟ್ರೇಲಿಯಾ 47 ರನ್‌ಗಳ ಮುನ್ನಡೆ ಸಾಧಿಸಿದೆ. ಆಸ್ಟ್ರೇಲಿಯಾ ಪರ ಉಸ್ಮಾನ್ ಖವಾಜಾ 60 ರನ್‌ಗಳ ಇನಿಂಗ್ಸ್ ಆಡಿದರು. ಆಸ್ಟ್ರೇಲಿಯಾ ಪರ ಮೊದಲ ಇನ್ನಿಂಗ್ಸ್‌ನಲ್ಲಿ ಮ್ಯಾಥ್ಯೂ ಕುಹ್ನೆಮನ್ 5 ವಿಕೆಟ್ ಪಡೆದು ಮಿಂಚಿದರು.
ಟೆಸ್ಟ್‌ನಲ್ಲಿ ಕೆಟ್ಟ ದಾಖಲೆ ಬರೆದ ಭಾರತ ತಂಡ:
ಇಂದು ಟೀಂ ಇಂಡಿಯಾಗೆ ಟಾಸ್ ಗೆದ್ದಿದ್ದು ಬಿಟ್ಟರೆ ಬೇರೆ ಯಾವುದೇ ಅಂಶಗಳು ಪೂರಕವಾಗಿ ಇರಲಿಲ್ಲ. ಪಿಚ್ ಮೇಲೆ ಚೆಂಡು ಹೇಗೆ ಟಾರ್ನ್ ಆಗ್ತಿದೆ ಅಂತ ಅರಿತುಕೊಳ್ಳಲು ಆಗದೆ ಟೀಂ ಇಂಡಿಯಾ ಬ್ಯಾಟರ್ಸ್ ತಡಬಡಾಯಿಸಿದ್ದರು. ಇದರೊಂದಿಗೆ ಟೀಂ ಇಂಡಿಯಾ ಕಳಪೆ ಮೊತ್ತಕ್ಕೆ ಆಲೌಟ್ ಆಗಿತ್ತು. ಇದರೊಂದಿಗೆ ಟೀಂ ಇಂಡಿಯಾ ಕೆಲ ಕೆಟ್ಟ ದಾಖಲೆಗಳಿಗೆ ಕಾರಣವಾಗಿದೆ. ಟೀಂ ಇಂಡಿಯಾ ಕಳೆದ 15 ವರ್ಷದಲ್ಲಿ ತವರು ನೆಲದಲ್ಲಿ ದಾಖಲಿಸಿದ ಕಡಿಮೆ ಮೊತ್ತ ಇದಾಗಿದೆ.
ಇದಕ್ಕೂ ಮುನ್ನ 2008ರಲ್ಲಿ ಅಹ್ಮದಬಾದ್ನಲ್ಲಿ ಸೌತ್ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ 76 ರನ್ ಗಳಿಗೆ ಆಲೌಟ್ ಆಗಿತ್ತು. ಆ ಬಳಿಕ 2017ರಲ್ಲಿ ಪುಣೆಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯಲ್ಲಿ 105 ರನ್ ಗಳಿಗೆ ಆಲೌಟ್ ಆಗಿತ್ತು. ಆ ಬಳಿಕ ಇದೇ ಪಂದ್ಯದ 2ನೇ ಇನ್ನಿಂಗ್ಸ್ನಲ್ಲೂ 107 ರನ್‌ಗಳಿಗೆ ಆಲೌಟ್ ಆಗಿತ್ತು. ಸದ್ಯ ಇಂದೋರ್‌ನಲ್ಲಿ 109 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಕೆಟ್ಟ ದಾಖಲೆಗೆ ನಿರ್ಮಿಸಿದೆ.
ಭಾರತ-ಆಸ್ಟ್ರೇಲಿಯಾ ಪ್ಲೇಯಿಂಗ್ 11:
ಟೀಂ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್ ಮತ್ತು ಉಮೇಶ್ ಯಾದವ್.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್, ಪೀಟರ್ ಹ್ಯಾಂಡ್ಸ್‌ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ, ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ನಾಥನ್ ಲಿಯಾನ್, ಮ್ಯಾಥ್ಯೂ ಕುನ್ಹೆಮನ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ