• Home
  • »
  • News
  • »
  • sports
  • »
  • India vs Bangladesh: ಟಾಸ್​ ಗೆದ್ದ ಬಾಂಗ್ಲಾದೇಶ್, ಕುಲ್ದೀಪ್ ಸೇನ್ ಪದಾರ್ಪಣೆ; ಇಲ್ಲಿದೆ ಉಭಯ ತಂಡಗಳ ಪ್ಲೇಯಿಂಗ್​ 11

India vs Bangladesh: ಟಾಸ್​ ಗೆದ್ದ ಬಾಂಗ್ಲಾದೇಶ್, ಕುಲ್ದೀಪ್ ಸೇನ್ ಪದಾರ್ಪಣೆ; ಇಲ್ಲಿದೆ ಉಭಯ ತಂಡಗಳ ಪ್ಲೇಯಿಂಗ್​ 11

IND vs BAN ODI

IND vs BAN ODI

IND vs BAN ODI: ಈಗಾಗಲೇ ಟಾಸ್​ ಗೆದ್ದಿರುವ ಬಾಂಗ್ಲಾದೇಶ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿದ್ದು, ಟೀಂ ಇಂಡಿಯಾವನ್ನು (Team India) ಬ್ಯಾಟಿಂಗ್​ಗೆ ಆಹ್ವಾನಿದ್ದಾರೆ. ಇಂದಿನ ಪಂದ್ಯದ ಮೂಲಕ ಕುಲ್ದೀಪ್ ಸೇನ್​ (Kuldeep Sen) ಅಂತರಾಷ್ಟ್ರೀಯ ತಂಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. 

ಮುಂದೆ ಓದಿ ...
  • Share this:

ಭಾರತ ಕ್ರಿಕೆಟ್ ತಂಡ ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಆತಿಥೇಯ ಬಾಂಗ್ಲಾದೇಶ (India vs Bangladesh) ವಿರುದ್ಧ ಸೆಣಸಲಿದೆ. ಮೀರ್‌ಪುರದ ಶೇರ್-ಇ ಬಾಂಗ್ಲಾ (Sher-E-Bangla) ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಈಗಾಗಲೇ ಟಾಸ್​ ಗೆದ್ದಿರುವ ಬಾಂಗ್ಲಾದೇಶ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿದ್ದು, ಟೀಂ ಇಂಡಿಯಾವನ್ನು (Team India) ಬ್ಯಾಟಿಂಗ್​ಗೆ ಆಹ್ವಾನಿದ್ದಾರೆ. ಇಂದಿನ ಪಂದ್ಯದ ಮೂಲಕ ಕುಲ್ದೀಪ್ ಸೇನ್​ (Kuldeep Sen) ಅಂತರಾಷ್ಟ್ರೀಯ ತಂಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಸರಣಿಯು ಮುಂದಿನ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಎರಡೂ ತಂಡಗಳಿಗೆ ಈ ಸರಣಿ ಅತ್ಯಂತ ಮಹತ್ವದ್ದಾಗಿದೆ.


ಮಳೆ ವಿಲನ್ ಆಗಲಿದೆಯೇ?:


ಭಾರತ ಮತ್ತು ಬಾಂಗ್ಲಾದೇಶ ತಂಡಗಳು (IND v BAN 1 ನೇ ODI ಹವಾಮಾನ ಮುನ್ಸೂಚನೆ) ಮೀರ್‌ಪುರದ ಶೇರ್-ಎ-ಬಾಂಗ್ಲಾ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಅಂತಹ ಪರಿಸ್ಥಿತಿಯಲ್ಲಿ, ಪ್ರೇಕ್ಷಕರಿಗೆ ಇಡೀ ಪಂದ್ಯವನ್ನು ಆನಂದಿಸುವ ಅವಕಾಶ ಸಿಗುತ್ತದೆ. ಮೀರ್‌ಪುರದಲ್ಲಿ ತಂಪಾದ ವಾತಾವರಣ ಇರುತ್ತದೆ. ಅದಕ್ಕಾಗಿಯೇ ಇಬ್ಬನಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇಲ್ಲಿ ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಮಾಡಲು ಬಯಸುತ್ತದೆ. ಪಂದ್ಯದ ದಿನದಂದು ಇಲ್ಲಿನ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆ ಇದೆ.ಭಾರತ-ಬಾಂಗ್ಲಾ ಹೆಡ್​ ಟು ಹೆಡ್​:


ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 36 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ 30 ಪಂದ್ಯಗಳನ್ನು ಗೆದ್ದಿದ್ದರೆ ಬಾಂಗ್ಲಾದೇಶ 5 ಗೆಲುವು ತನ್ನ ಖಾತೆಯಲ್ಲಿದೆ. ಒಂದು ಪಂದ್ಯ ಅನಿರ್ದಿಷ್ಟವಾಗಿದೆ. ಈ ಸರಣಿಯನ್ನು ಗೆಲ್ಲುವ ಮೂಲಕ ಭಾರತ ತಂಡವು ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ 7 ವರ್ಷಗಳ ಹಿಂದಿನ ಸೋಲಿಗೆ ಉತ್ತರ ನೀಡಲು ಸಿದ್ಧವಾಗಿದೆ. 2015ರಲ್ಲಿ ಧೋನಿ ನಾಯಕತ್ವದಲ್ಲಿ ಬಾಂಗ್ಲಾದೇಶ ತವರಿನಲ್ಲಿ ನಡೆದ ಏಕದಿನ ಸರಣಿಯಲ್ಲಿ ಭಾರತವನ್ನು ಸೋಲಿಸಿತ್ತು.


ದಾಖಲೆಯ ಹೊಸ್ತಿಲಲ್ಲಿ ರೋಹಿತ್:


ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 500 ಸಿಕ್ಸರ್‌ಗಳನ್ನು ಬಾರಿಸುವ ಸುವರ್ಣಾವಕಾಶವನ್ನು ಹೊಂದಿದ್ದಾರೆ. ಮೀರ್‌ಪುರ ಏಕದಿನ ಪಂದ್ಯದಲ್ಲಿ 4 ಸಿಕ್ಸರ್‌ ಬಾರಿಸುವಲ್ಲಿ ಯಶಸ್ವಿಯಾದರೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 500 ಸಿಕ್ಸರ್‌ಗಳನ್ನು ಪೂರೈಸಿದಂತಾಗುತ್ತದೆ. ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ ಇದುವರೆಗೆ 553 ಸಿಕ್ಸರ್‌ಗಳನ್ನು ಬಾರಿಸಿದ್ದು, ರೋಹಿತ್ 496 ಸಿಕ್ಸರ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.


ಇದನ್ನೂ ಓದಿ: Virat Kohli: ನಾಯಕತ್ವ ಹೋಯ್ತು, ಫಾರ್ಮ್ ಹೋಯ್ತು; ಆದ್ರೂ ಫಿನಿಕ್ಸ್ ರೀತಿ ಎದ್ದು ಬಂದ ಕಿಂಗ್​ ಕೊಹ್ಲಿ! 2022ರಲ್ಲಿ ಹೇಗಿತ್ತು 'ವಿರಾಟ್'​ ಪರ್ವ?


ಭಾರತ-ಬಾಂಗ್ಲಾದೇಶ ಪ್ಲೇಯಿಂಗ್​ 11:


ಭಾರತ ಪ್ಲೇಯಿಂಗ್​ 11: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್​ ಅಯ್ಯರ್, ಕೆ ಎಲ್ ರಾಹುಲ್ (ಉಪ ನಾಯಕ), ಶಾಹಬ್ಬಾಜ್ ಅಹ್ಮದ್, ವಾಷಿಂಗ್ಟನ್​ ಸುಂದರ್, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಸೇನ್.


ಬಾಂಗ್ಲಾದೇಶ ಪ್ಲೇಯಿಂಗ್​ 11: ಲಿಟ್ಟನ್ ದಾಸ್ (ನಾಯಕ), ಅನಾಮುಲ್ ಹಕ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (WK), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಹಸನ್ ಮಹಮೂದ್, ಮುಸ್ತಫಿಜುರ್ ರೆಹಮಾನ್, ಎಬಾಡೋತ್ ಹೊಸೈನ್.

Published by:shrikrishna bhat
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು