• Home
  • »
  • News
  • »
  • sports
  • »
  • IND vs BAN 2nd Test: ಕ್ಲೀನ್ ಸ್ವೀಪ್ ಮೇಲೆ ಟೀಂ ಇಂಡಿಯಾದ ಕಣ್ಣು, ಹೇಗಿದೆ ಮೀರ್ಪುರ​ ಹವಾಮಾನ?

IND vs BAN 2nd Test: ಕ್ಲೀನ್ ಸ್ವೀಪ್ ಮೇಲೆ ಟೀಂ ಇಂಡಿಯಾದ ಕಣ್ಣು, ಹೇಗಿದೆ ಮೀರ್ಪುರ​ ಹವಾಮಾನ?

IND vs BAN Test

IND vs BAN Test

IND vs BAN 2nd Test: ಕೆಎಲ್ ರಾಹುಲ್ ನಾಯಕತ್ವದ ಭಾರತೀಯ ಕ್ರಿಕೆಟ್ ತಂಡವು ಮೊದಲ ಟೆಸ್ಟ್ ಪಂದ್ಯದಲ್ಲಿ ಗೆದ್ದು, ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ನಾಳಿನ ಪಂದ್ಯವನ್ನು ಗೆದ್ದು, ಸರಣಿಯನ್ನು ಕ್ಲೀನ್​ ಸ್ವೀಪ್​ ಮಾಡಲು ಸಿದ್ಧವಾಗಿದೆ.

  • Share this:

ಭಾರತ ಮತ್ತು ಬಾಂಗ್ಲಾದೇಶ (IND vs BAN) ನಡುವಿನ 2 ಪಂದ್ಯಗಳ ಸರಣಿಯ ಎರಡನೇ ಮತ್ತು ಕೊನೆಯ ಟೆಸ್ಟ್ ಪಂದ್ಯ (IND vs BAN 2nd Test) ನಾಳೆಯಿಂದ ಮೀರ್‌ಪುರದ ಶೇರ್-ಇ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ (Sher-E-Bangla National Cricket Stadium) ನಡೆಯಲಿದೆ. ಈ ಪಂದ್ಯಕ್ಕೆ ಎರಡೂ ತಂಡಗಳು ಸಜ್ಜಾಗಿವೆ. ಭಾರತ ಸರಣಿಯಲ್ಲಿ ಆತಿಥೇಯರನ್ನು ಕ್ಲೀನ್ ಸ್ವೀಪ್ ಮಾಡುವತ್ತ ಕಣ್ಣಿಟ್ಟಿದ್ದರೆ, ಬಾಂಗ್ಲಾದೇಶ ತಂಡ ಒಂದು ಪಂದ್ಯವನ್ನಾದರೂ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈ ಟೆಸ್ಟ್‌ನಲ್ಲಿ ಜಯಗಳಿಸುವ ಮೂಲಕ ಟೀಂ ಇಂಡಿಯಾ (Team India) ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ (WTC) ಫೈನಲ್‌ಗೆ ತಲುಪುವ ಆಸೆ ಇನ್ನಷ್ಟು ಗಟ್ಟಿಯಾಗಿದೆ.


ಹೇಗಿರಲಿದೆ ಮೀರ್​ಪುರ್​ ಹವಾಮಾನ ವರದಿ:


ಸರಣಿಯ ಮೊದಲ ಟೆಸ್ಟ್ ಪಂದ್ಯ ಚಿತ್ತಗಾಂಗ್‌ನಲ್ಲಿ ನಡೆದಿದ್ದು, ಐದನೇ ದಿನ ಭಾರತ ತಂಡ 188 ರನ್‌ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಹವಾಮಾನ ಹೇಗಿರಲಿದೆ? ಇದನ್ನು ತಿಳಿಯುವ ಕುತೂಹಲ ಅಭಿಮಾನಿಗಳಲ್ಲಿದೆ. ಟೆಸ್ಟ್ ಪಂದ್ಯದ ವೇಳೆ ಮಿರ್‌ಪುರದಲ್ಲಿ ದಿನದ ತಾಪಮಾನವು 26 ರಿಂದ 27 ಡಿಗ್ರಿ ಸೆಲ್ಸಿಯಸ್‌ ಆಗುವ ನಿರೀಕ್ಷೆಯಿದೆ. ಅಕ್ಯುವೆದರ್ ಪ್ರಕಾರ, ಎರಡನೇ ಟೆಸ್ಟ್ ಪಂದ್ಯದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ. ಅಂತಹ ಪರಿಸ್ಥಿತಿಯಲ್ಲಿ, ಅಭಿಮಾನಿಗಳು ಸಂಪೂರ್ಣ ಪಂದ್ಯವನ್ನು ನೋಡಬಹುದು.


ಪಿಚ್ ವರದಿ:


ಶೇರ್-ಎ-ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಸಹಾಯಕವಾಗಿದೆ ಎಂದು ಪರಿಗಣಿಸಲಾಗಿದೆ. ಈ ವಿಕೆಟ್‌ನಲ್ಲಿ, ವೇಗದ ಬೌಲರ್‌ಗಳಿಗೆ ಆರಂಭದಲ್ಲಿ ಉತ್ತಮ ಸಾಥ್​ ನೀಡಿದರೂ ಸಹ ನಂತರ ವಿಕೆಟ್ ನಿಧಾನವಾಗುತ್ತದೆ. ಎರಡನೇ ದಿನದ ಬಳಿಕ ಈ ವಿಕೆಟ್ ಸ್ಪಿನ್ನರ್ ಗಳಿಗೆ ನೆರವಾಗಲಿದೆ. ಅಂತಹ ಪರಿಸ್ಥಿತಿಯಲ್ಲಿ, ತಾಂತ್ರಿಕವಾಗಿ ನುರಿತ ಬ್ಯಾಟ್ಸ್‌ಮನ್‌ಗಳು ಇಲ್ಲಿ ಯಶಸ್ವಿಯಾಗಬಹುದು. ಈ ವಿಕೆಟ್‌ನಲ್ಲಿ ODIಗಳಲ್ಲಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 329 ರನ್ ಆಗಿದೆ.


ಟೀಂ ಇಂಡಿಯಾದ ಆಡುವ XI ನಲ್ಲಿ ಬದಲಾವಣೆ ಏನು?:


2ನೇ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾದ ಆಡುವ 11 ಅನ್ನು ಬದಲಾಯಿಸುವುದು ಅನುಮಾನವಾಗಿದೆ. ಟೀಂ ಇಂಡಿಯಾದ ನಿಯಮಿತ ನಾಯಕ ರೋಹಿತ್ ಶರ್ಮಾ ಎರಡನೇ ಟೆಸ್ಟ್ ಪಂದ್ಯದಿಂದಲೂ ಹೊರಗುಳಿದಿದ್ದಾರೆ. ಹೆಬ್ಬೆರಳಿನ ಗಾಯದಿಂದಾಗಿ ರೋಹಿತ್‌ಗೆ ಚಿತ್ತಗಾಂಗ್‌ ಟೆಸ್ಟ್‌ನಲ್ಲಿ ಆಡಲಾಗಲಿಲ್ಲ. ವೇಗದ ಬೌಲರ್ ನವದೀಪ್ ಸೈನಿ ಕೂಡ ಗಾಯದ ಸಮಸ್ಯೆಯಿಂದ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಮೀರ್‌ಪುರ ಟೆಸ್ಟ್ ಪಂದ್ಯದಲ್ಲಿ ಶುಭಮನ್ ಗಿಲ್ ಮತ್ತು ಕೆಎಲ್ ರಾಹುಲ್ ಜೋಡಿಯನ್ನು ತೆರೆಯುವುದನ್ನು ಕಾಣಬಹುದು.


ಇದನ್ನೂ ಓದಿ: IND vs SL: ಶ್ರೀಲಂಕಾ ವಿರುದ್ಧ ಕಂಬ್ಯಾಕ್​ ಮಾಡಲಿದ್ದಾರೆ ಟೀಂ ಇಂಡಿಯಾದ ಸ್ಟಾರ್​ ಆಲ್​ರೌಂಡರ್


ಪಂದ್ಯದ ವಿವರ: 


ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯವು ಬುಧವಾರ, 22 ಡಿಸೆಂಬರ್ 2022 ರಿಂದ ಸೋಮವಾರ 26 ಡಿಸೆಂಬರ್ 2022ರ ವರೆಗೆ ಮೀರ್ಪುರದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ಬೆಳಗ್ಗೆ 9 ಗಂಟೆಯಿಂದ ಆರಂಭವಾಗಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಭಾರತದಲ್ಲಿ ಅಧಿಕೃತ SonyLiv ವೆಬ್‌ಸೈಟ್ ಮತ್ತು Sony ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದು. ಜೊತೆಗೆ ಪಂದ್ಯದ ನೇರ ಪ್ರಸಾರವನ್ನು ಭಾರತದಲ್ಲಿ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ.


ಭಾರತ-ಬಾಂಗ್ಲಾದೇಶ ತಂಡ:


ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ಸೌರಬ್ ಕುಮಾರ್, ಜಯದೇವ್ ಉನಾದ್ಕಟ್.


ಬಾಂಗ್ಲಾದೇಶ ತಂಡ: ಜಾಕಿರ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಲಿಟ್ಟನ್ ದಾಸ್, ಶಕಿಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್, ಯಾಸಿರ್ ಅಲಿ, ನೂರುಲ್ ಹಸನ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಖಲೀದ್ ಅಹ್ಮದ್, ನಸುಮ್ ಅಹ್ಮದ್, ಮಹ್ಮುದುಲ್ ಹಸನ್ ಪ್ಲೆಷರ್, ಮೊಮಿನುಲ್ ಹಕ್, ರೆಹಮಾನ್ ರಾಜಾ, ತಸ್ಕಿನ್ ಅಹ್ಮದ್.

Published by:shrikrishna bhat
First published: