ಇಂದು ಭಾರತ ಮತ್ತು ಬಾಂಗ್ಲಾದೇಶ ತಂಡಗಳು 3 ಪಂದ್ಯಗಳ ಸರಣಿ ಕೊನೆಯ ಪಂದ್ಯದಲ್ಲಿ ಮುಖಾಮುಖಿ ಆಗುತ್ತಿವೆ. ಬಾಂಗ್ಲಾದೇಶ ವಿರುದ್ಧದ ಮೂರನೇ (IND vs BAN 3rd ODI) ಮತ್ತು ಕೊನೆಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಆಟಗಾರರಾದ ರೋಹಿತ್ ಶರ್ಮಾ (Rohit Sharma), ದೀಪಕ್ ಚಹಾರ್, ಕುಲದೀಪ್ ಸೇನ್ ಆಡುವುದಿಲ್ಲ ಎಂದು BCCI ಹೇಳಿದೆ. ಆದರೆ ಈಗಾಗಲೇ ಸರಣಿ ಗೆದ್ದಿರುವ ಬಾಂಗ್ಲಾ ತಂಡವು ಇಂದಿನ ಪಂದ್ಯವನ್ನೂ ಗೆದ್ದು ಭಾರತವನ್ನು ವೈಟ್ವಾಶ್ ಮಾಡಲು ಹವಣಿಸುತ್ತಿದ್ದರೆ, ಭಾರತ ವೈಟ್ವಾಶ್ನಿಂದ ತಪ್ಪಿಸಿಕೊಳ್ಳಲು ಇಂದಿನ ಪಂದ್ಯದಲ್ಲಿ ಗೆಲ್ಲಲೇ ಬೇಕಾಗಿದೆ.
ಪಂದ್ಯದ ವಿವರ:
ನಾಳೆ ಭಾರತ ಮತ್ತು ಬಾಂಗ್ಲಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ 3ನೇ ಏಕದಿನ ಪಂದ್ಯ ನಡೆಯಲಿದೆ. ನಾಳಿನ ಪಂದ್ಯ ಬಾಂಗ್ಲಾದ ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ 11:30ಕ್ಕೆ ಆರಂಭವಾಗಲಿದ್ದು, 11 ಗಂಟೆಗೆ ಟಾಸ್ ಆಗಲಿದೆ. ಈ ಪಂದ್ಯಗಳನ್ನು ಸೋನಿ ನೆಟ್ವರ್ಕ್ ನೇರ ಪ್ರಸಾರ ಮಾಡಲಿದೆ. ಸೋನಿ ಲೈವ್ ಅಪ್ಲಿಕೇಶನ್ನಲ್ಲಿ ನೀವು ಈ ಪಂದ್ಯಗಳನ್ನು ಲೈವ್ ಆಗಿ ವೀಕ್ಷಿಸಬಹುದು.
Learning from one of the best! 👌 👌@Sundarwashi5 gets some batting tips from Head Coach Rahul Dravid 👍 👍#TeamIndia | #BANvIND pic.twitter.com/YgvZRNKyfr
— BCCI (@BCCI) December 9, 2022
ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕಳೆದ ಐದು ODI ಪಂದ್ಯಗಳಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 212 ರನ್ ಆಗಿದ್ದು, ಮೊದಲು ಬ್ಯಾಟ್ ಮಾಡಿದ ತಂಡ ಮೂರು ಪಂದ್ಯಗಳನ್ನು ಗೆದ್ದಿದೆ. ಈ ಪಂದ್ಯದಲ್ಲಿ ಸ್ಪಿನ್ನರ್ಗಳು ಮೇಲುಗೈ ಸಾಧಿಸುವ ಸಾಧ್ಯತೆ ಇದೆ. ಹೀಗಾಗಿ ನಾಳೆ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ನಾಳೆ ಟಾಸ್ ಮಹತ್ವದ ಪಾತ್ರ ನಿರ್ವಹಿಸಲಿದೆ.
ರಾಹುಲ್ಗೆ ನಾಯಕತ್ವ:
ಎರಡನೇ ಪಂದ್ಯದ ವೇಳೆ ಎಡಗೈ ಹೆಬ್ಬರಳಿಗೆ ಗಾಯ ಮಾಡಿಕೊಂಡಿರುವ ರೋಹಿತ್ ಶರ್ಮಾ ಬದಲಿಗೆ ಉಪ ನಾಯಕರಾಗಿರುವ ಕೆಎಲ್ ರಾಹುಲ್ ಇಂದಿನ ಪಂದ್ಯದಲ್ಲಿ ನಾಯಕರಾಗಿರುತ್ತಾರೆ. ಸರಣಿ ಸೋಲಾಗಿದ್ದರೂ ಸಹ ಇಂದಿನ ಪಂದ್ಯ ಕೆಲ ಆಟಗಾರರಿಗೆ ಮಹತ್ವದ್ದಾಗಿದ್ದು, ಕಣಕ್ಕಿಳಿಯಲು ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ರೋಹಿತ್ ಶರ್ಮಾ, ದೀಪಕ್ ಚಹಾರ್, ಕುಲದೀಪ್ ಸೇಣ್ ಸೇರಿದಂತೆ ಕೆಲ ಆಟಗಾರರು ಇಂಜುರಿ ಸಮಸ್ಯೆಯಿಂದ ಇಂದಿನ ಪಂದ್ಯದಿಂದ ಹೊರಗುಳಿದಿದ್ದಾರೆ.
ಇದನ್ನೂ ಓದಿ: ಫಿಫಾ ವಿಶ್ವಕಪ್ ಹಿಂದಿಕ್ಕಿದ IPL, ಇದನ್ನಾ ಟಚ್ ಮಾಡೋಕೆ ಡಬಲ್ ಗುಂಡಿಗೆ ಬೇಕು ಅಂದ್ರು ಕ್ರಿಕೆಟ್ ಫ್ಯಾನ್ಸ್
IND vs BAN ಸಂಭಾವ್ಯ ಪ್ಲೇಯಿಂಗ್ 11:
ಭಾರತ ಸಂಭಾವ್ಯ ಪ್ಲೇಯಿಂಗ್ 11: ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (WK), ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹಮದ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.
ಬಾಂಗ್ಲಾದೇಶ ಸಂಭಾವ್ಯ ಪ್ಲೇಯಿಂಗ್ 11: ಅನಾಮುಲ್ ಹಕ್, ಲಿಟ್ಟನ್ ದಾಸ್ (ಸಿ), ಶಾಕಿಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆ), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೊಸದ್ದೆಕ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಹಸನ್ ಮಹಮೂದ್, ಎಬಾಡೋತ್ ಹೊಸೈನ್, ಮುಸ್ತಫಿಜುರ್ ರೆಹಮಾನ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ