ಶ್ರೀಲಂಕಾ ವಿರುದ್ಧದ ಟಿ20 ಮತ್ತು ಏಕದಿನ ಸರಣಿ (IND vs SL) ಭಾರತಕ್ಕೆ ಈ ವರ್ಷದ ಮೊದಲ ಸರಣಿ ಆಗಲಿದ್ದು, ಗೆಲುವಿನೊಂಡಿಗೆ ಕಳೆದ ವರ್ಷಕ್ಕೆ ವಿದಾಯ ಹೇಳಿರುವ ತಂಡ ಈ ವರ್ಷವನ್ನು ಗೆಲುವಿನೊಂದಿಗೆ ಆರಂಭಿಸಲು ಸಿದ್ಧವಾಗಿದೆ. ಭಾರತ ಮತ್ತು ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು ಜನವರಿ 3ರಂದು ಮುಂಬೈನ ವಾಂಖೆಡೆ ಮಯದಾನದಲ್ಲಿ ನಡೆಯಲಿದೆ. ಲಂಕಾ ವಿರುದ್ಧದ ಟಿ20 ಸರಣಿಗೆ ಭಾರತ ಟಿ20 ತಂಡದ ನಾಯಕತ್ವವನ್ನು ಹಾರ್ದಿಕ್ ಪಾಂಡ್ಯ (Hardik Pandya) ಅವರಿಗೆ ನೀಡಲಾಗಿದ್ದು, ಸೂರ್ಯಕುಮಾರ್ ಯಾದವ್ ಉಪನಾಯಕರಾಗಿದ್ದಾರೆ. ಆದರೆ ಈ ಸರಣಿಯ ನಂತರ ಏಕದಿನ ಸರಣಿಗೆ ರೋಹಿತ್ ಶರ್ಮಾ ಅವರು ಮತ್ತೆ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ.
ಪಂದ್ಯದ ವಿವರ:
ಭಾರತ ಪ್ರವಾಸ ಕೈಗೊಂಡಿರುವ ಶ್ರೀಲಂಕಾ ತಂಡವು ಇಲ್ಲಿ 3 ಪಂದ್ಯಗಳ ಟಿ20 ಪಂದ್ಯವನ್ನು ಆಡಲಿದೆ. ಈ ಟಿ20 ಸರಣಿಯ ಮೊದಲ ಪಂದ್ಯವು ಜನವರಿ 3ರಂದು ನಡೆಯಲಿದೆ. ಈ ಪಂದ್ಯವು ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯವು 7 ಗಂಟೆಗೆ ಟಾಸ್ ಮತ್ತು 7:30ಕ್ಕೆ ಪಂದ್ಯ ಆರಂಭವಾಗಲಿದೆ. ಈ ಪಂದ್ಯದ ನೇರಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ಡಿಸ್ನಿ+ ಹಾಟ್ಸ್ಟಾರ್ ನಲ್ಲಿ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.
ಪಿಚ್ ವರದಿ:
ವಾಂಖೆಡೆ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಸ್ವರ್ಗವಾಗಿದೆ. ಚೆಂಡು ಮೇಲ್ಮೈಯಿಂದ ಬರುತ್ತದೆ. ಬ್ಯಾಟರ್ಗಳು ಕೂಡ ಶಾರ್ಟ್ ಬೌಂಡರಿಗಳನ್ನುಸಿಡಿಸಲು ಈ ಪಿಚ್ ಸಹಾಯಕವಾಗಿದೆ. ಇಬ್ಬನಿಯು ಬೌಲರ್ಗಳಿಗೆ ಹೆಚ್ಚು ಸಹಾಯಕಾರಿಯಾಗಿದ್ದು, ಪಂದ್ಯದ ತಿರುವಿಗೆ ಕಾರಣವಾಗಬಹುದು. ಆದಾಗ್ಯೂ, ವೇಗಿಗಳು ಆರಂಭಿಕ ಓವರ್ಗಳಲ್ಲಿ ಬೌಲರ್ಗಳು ಮೇಲುಗೈ ಸಾಧಿಸುತ್ತಾರೆ. ಮಳೆಯ ನಿರೀಕ್ಷೆ ಇಲ್ಲವೆಂದು ಹವಾಮಾನ ಇಲಾಖೆ ತಿಳಿಸಿದ್ದು, ಪಂದ್ಯವನ್ನು ಸಂಪೂರ್ಣವಾಗಿ ನೋಡಬಹುದಾಗಿದೆ.
ರೋಹಿತ್ -ಕೊಹ್ಲಿ ಔಟ್:
ಇನ್ನು, ಬಾಂಗ್ಲಾದೇಶ ಸರಣಿ ವೇಳೆ ಗಾಯಗೊಂಡಿರುವ ರೋಹಿತ್ ಶರ್ಮಾ ಅವರು ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯನ್ನು ಆಡಲು ಸಾಧ್ಯವಾಗಲಿಲ್ಲ, ಆದ್ದರಿಂದ ಅವರು ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ಆಡುತ್ತಾರೆಯೇ ಅಥವಾ ಇಲ್ಲವೇ ಎಂಬ ಅನುಮಾನವಿತ್ತು. ಆದರೆ ಇದೀಗ ಬಿಸಿಸಿಐ ರೋಹಿತ್ ಶರ್ಮಾ ಅವರನ್ನು ಆರಂಭದ 3 ಪಂದ್ಯಗಳ ಟಿ20 ಸರಣಿಯಿಂದ ಹೊರಗಿಟ್ಟಿದೆ. ಆದರೆ ಅವರು ಏಕದಿನ ಸರಣಿ ವೇಳೆಗೆ ಮತ್ತೆ ತಂಡಕ್ಕೆ ಸೇರಿಕೊಳ್ಳಲಿದ್ದಾರೆ. ಅಲ್ಲದೇ ರೋಹಿತ್ ಮುಂಬೈನಲ್ಲಿ ನೆಟ್ ಪ್ರಾಕ್ಟೀಸ್ ಮಾಡುತ್ತಿರುವುದು ಕಂಡುಬಂದಿದೆ. ಜೊತೆಗೆ ಕುಲದೀಪ್ ಯಾದವ್ ಸುದೀರ್ಘ ಸಮಯದ ನಂತರ ಟಿ20 ತಂಡಕ್ಕೆ ಮರಳಿದ್ದಾರೆ. ಅಲ್ಲದೇ ಟಿ20 ಸರಣಿಯಿಂದ ವಿರಾಟ್ ಕೊಹ್ಲಿ ಸಹ ಹೊರಗುಳಿದಿದ್ದಾರೆ.
IND vs SL ಸಂಭಾವ್ಯ ಪ್ಲೇಯಿಂಗ್ 11:
ಭಾರತ ಸಂಭಾವ್ಯ ಪ್ಲೇಯಿಂಗ್ 11: ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಇಮ್ರಾನ್ ಮಲಿಕ್, ಯುಜುವೇಂದ್ರ ಚಾಹಲ್, ಅರ್ಷದೀಪ್ ಸಿಂಗ್.
ಶ್ರೀಲಂಕಾ ಸಂಭಾವ್ಯ ಪ್ಲೇಯಿಂಗ್ 11: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್ (ವಾಕ್), ಅವಿಷ್ಕ ಫೆರ್ನಾಂಡೋ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ದಸುನ್ ಶನಕ (ಸಿ), ವನಿಂದು ಹಸರಂಗ, ಚಮಿಕ ಕರುಣಾರತ್ನೆ, ಮಹೇಶ್ ತೀಕ್ಷಣ, ಲಹಿರು ಕುಮಾರ, ದಿಲ್ಶನ್ ಮಧುಶಂಕ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ