ಭಾರತ ಕ್ರಿಕೆಟ್ ತಂಡ ಪ್ರಸ್ತುತ ಬಾಂಗ್ಲಾದೇಶ (IND vs BAN) ಪ್ರವಾಸದಲ್ಲಿದೆ. ಈ ಪ್ರವಾಸಕ್ಕೆ ಟೀಂ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma) ಆಗಮಿಸಿರುವ ವಿಡಿಯೋ ವೈರಲ್ ಆಗಿದೆ. ಭಾರತ ತಂಡ ಬಾಂಗ್ಲಾದೇಶದಲ್ಲಿ ಏಕದಿನ ಹಾಗೂ ಟೆಸ್ಟ್ ಸರಣಿಗಳನ್ನು ಆಡಬೇಕಿದೆ. ಮೊದಲ ಪಂದ್ಯ ಡಿಸೆಂಬರ್ 4 ರಿಂದ ಅಂದರೆ ಭಾನುವಾರದಿಂದ (ನಾಳೆ) ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಹಿರಿಯ ಆಟಗಾರರು ಕಠಿಣ ಅಭ್ಯಾಸ ನಡೆಸಿ ಬೆವರಿಳಿಸಿದರು. ಕ್ಯಾಪ್ಟನ್ ರೋಹಿತ್ ಬಾಂಗ್ಲಾದೇಶಕ್ಕೆ ತೆರಳಿದಾಗ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ (Journalists )ಮೇಲೆ ಸಿಟ್ಟಾದ ಘಟನೆ ನಡೆದಿದೆ.
ಪತ್ರಕರ್ತರ ಮೇಲೆ ಸಿಟ್ಟಾದ ರೋಹಿತ್:
ಆಸ್ಟ್ರೇಲಿಯಾದಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಬಳಿಕ ನಾಯಕ ರೋಹಿತ್ ಶರ್ಮಾ ನ್ಯೂಜಿಲೆಂಡ್ ಪ್ರವಾಸದಿಂದ ವಿಶ್ರಾಂತಿ ಪಡೆದಿದ್ದರು. ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಅವರು ಅನೇಕ ಹಿರಿಯ ಆಟಗಾರರೊಂದಿಗೆ ಮರಳುತ್ತಿದ್ದಾರೆ. ರಜೆಯ ನಂತರ ಈ ಸರಣಿಯಲ್ಲಿ ಕೋಚ್ ರಾಹುಲ್ ದ್ರಾವಿಡ್ ಕೂಡ ತಂಡದೊಂದಿಗೆ ಕಾಣಿಸಿಕೊಂಡರು. ಬಾಂಗ್ಲಾದೇಶದ ವಿಮಾನ ನಿಲ್ದಾಣದಲ್ಲಿ ಭಾರತೀಯ ನಾಯಕ ಸಿಟ್ಟಾದ ಘಟನೆ ನಡೆದಿದೆ.
View this post on Instagram
ಪಂದ್ಯದ ವಿವರ:
ನಾಳೆ ಭಾರತ ಮತ್ತು ಬಾಂಗ್ಲಾ ವಿರುದ್ಧದ 3 ಪಂದ್ಯಗಳ ಮೊದಲ ಏಕದಿನ ಪಂದ್ಯ ನಡೆಯಲಿದೆ. ನಾಳಿನ ಪಂದ್ಯ ಬಾಂಗ್ಲಾದ ಢಾಕಾದಲ್ಲಿ ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ 11:30ಕ್ಕೆ ಆರಂಭವಾಗಲಿದ್ದು, 11 ಗಂಟೆಗೆ ಟಾಸ್ ಆಗಲಿದೆ. ಈ ಪಂದ್ಯಗಳನ್ನು ಸೋನಿ ನೆಟ್ವರ್ಕ್ ನೇರ ಪ್ರಸಾರ ಮಾಡಲಿದೆ. ಡಿಜಿಟಲ್ನಲ್ಲಿ ಸೋನಿ ಲೈವ್ ಅಪ್ಲಿಕೇಶನ್ನಲ್ಲಿ ನೀವು ಈ ಪಂದ್ಯಗಳನ್ನು ಲೈವ್ ಆಗಿ ವೀಕ್ಷಿಸಬಹುದು. ಇವುಗಳ ಜೊತೆಗೆ ಡಿಡಿ ಸ್ಪೋರ್ಟ್ಸ್ ಕೂಡ ಈ ಪಂದ್ಯಗಳನ್ನು ನೇರ ಪ್ರಸಾರ ಮಾಡಲಿದೆ.
IND vs BAN ಸಂಭಾವ್ಯ ಪ್ಲೇಯಿಂಗ್ 11:
ಭಾರತ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಬ್ ಪಂತ್ (WK), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.
ಬಾಂಗ್ಲಾದೇಶ ಸಂಭಾವ್ಯ ಪ್ಲೇಯಿಂಗ್ 11: ಬಾಂಗ್ಲಾದೇಶ: ಅನಾಮುಲ್ ಹಕ್, ಲಿಟ್ಟನ್ ದಾಸ್ (ಸಿ), ಶಾಕಿಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆ), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೊಸದ್ದೆಕ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಹಸನ್ ಮಹಮೂದ್, ಎಬಾಡೋತ್ ಹೊಸೈನ್, ಮುಸ್ತಫಿಜುರ್ ರೆಹಮಾನ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ