• Home
  • »
  • News
  • »
  • sports
  • »
  • IND vs BAN Test: ಭಾರತ-ಬಾಂಗ್ಲಾ ಟೆಸ್ಟ್ ಸರಣಿ ಯಾವಾಗ? ಎಷ್ಟು ಗಂಟೆಗೆ? ಇಲ್ಲಿದೆ ಲೈವ್ ಸ್ಟ್ರೀಮಿಂಗ್​ಗಳ ಸಂಪೂರ್ಣ ವಿವರ

IND vs BAN Test: ಭಾರತ-ಬಾಂಗ್ಲಾ ಟೆಸ್ಟ್ ಸರಣಿ ಯಾವಾಗ? ಎಷ್ಟು ಗಂಟೆಗೆ? ಇಲ್ಲಿದೆ ಲೈವ್ ಸ್ಟ್ರೀಮಿಂಗ್​ಗಳ ಸಂಪೂರ್ಣ ವಿವರ

IND vs BAN Test

IND vs BAN Test

IND vs BAN Test: ಭಾರತ ಮತ್ತು ಬಾಂಗ್ಲಾದೇಶದ ಕ್ರಿಕೆಟ್ ತಂಡಗಳು ಈಗ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿವೆ. ಈ ಸರಣಿಯ ಮೊದಲ ಪಂದ್ಯದ ಸಂಪೂರ್ಣ ವಿವರ ಈ ಕೆಳಕಂಡಂತಿದೆ ನೋಡಿ.

  • Share this:

ಭಾರತ ಮತ್ತು ಬಾಂಗ್ಲಾದೇಶ ಕ್ರಿಕೆಟ್ ತಂಡಗಳು (IND vs BAN) ಈಗ ODI ನಂತರ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿ ಆಗಲಿದೆ. ಸರಣಿಯ ಮೊದಲ ಟೆಸ್ಟ್ ಪಂದ್ಯ ಬುಧವಾರದಿಂದ (ಡಿಸೆಂಬರ್ 14) ನಡೆಯಲಿದೆ. 3 ಪಂದ್ಯಗಳ ಸರಣಿಯ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಸೋತ ನಂತರ, ಭಾರತ ತಂಡವು ಇಶಾನ್ ಕಿಶನ್ (Ishan Kishan) ಅವರ ದ್ವಿಶತಕ ಮತ್ತು ವಿರಾಟ್ ಕೊಹ್ಲಿ ಅವರ 72ನೇ ಅಂತರರಾಷ್ಟ್ರೀಯ ಶತಕದ ಆಧಾರದ ಮೇಲೆ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಆತಿಥೇಯ ಬಾಂಗ್ಲಾದೇಶದ ವಿರುದ್ಧ ಭರ್ಜರಿಯಾಗಿ ಗೆದ್ದಿತು. 3 ಪಂದ್ಯಗಳ ಸರಣಿಯ ODI ಪಂದ್ಯಗಳನ್ನು 11:30ರಿಂದ ಆಡಲಾಯಿತು ಆದರೆ ಟೆಸ್ಟ್ ಪಂದ್ಯಗಳ ಸಮಯದಲ್ಲಿ ಬದಲಾವಣೆ ಆಗಲಿದೆ.


ಭಾರತ -ಬಾಂಗ್ಲಾ ಟೆಸ್ಟ್ ಸರಣಿಯ ವಿವರ:


ಭಾರತ ಮತ್ತು ಬಾಂಗ್ಲಾದೇಶ ನಡುವಿನ ಸರಣಿಯ ಮೊದಲ ಟೆಸ್ಟ್ ಪಂದ್ಯ ಚಿತ್ತಗಾಂಗ್ ಜಹೂರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಏಷ್ಯಾಕಪ್, ಟಿ20 ವಿಶ್ವಕಪ್ ಮತ್ತು ಇದೀಗ ಏಕದಿನ ಸರಣಿಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ ನಂತರ ಭಾರತ ತಂಡ ಟೆಸ್ಟ್ ಪ್ರವೇಶಿಸಲಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸಾಮಾನ್ಯ ನಾಯಕ ರೋಹಿತ್ ಶರ್ಮಾ ಆಡುವುದು ಅನುಮಾನವಾಗಿದೆ. ಗಾಯದ ಸಮಸ್ಯೆಯಿಂದಾಗಿ ರೋಹಿತ್ ಮೂರನೇ ಏಕದಿನ ಪಂದ್ಯದಿಂದ ಹೊರಗುಳಿದಿದ್ದರು. ಟೆಸ್ಟ್ ಸರಣಿಯಲ್ಲಿ ಆಡುವುದು ಕೂಡ ಅನುಮಾನವಾಗಿದೆ. ಅವರ ಸ್ಥಾನಕ್ಕೆ ಕೆಎಲ್ ರಾಹುಲ್ ಮೊದಲ ಟೆಸ್ಟ್ ಪಂದ್ಯದ ನಾಯಕತ್ವ ಮಾಡಬಹುದು.


ಭಾರತ vs ಬಾಂಗ್ಲಾದೇಶ ಟೆಸ್ಟ್ ಸರಣಿ ನಡುವಿನ 2 ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಬಾಂಗ್ಲಾದೇಶ ನಡುವಿನ 2 ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯ ಬುಧವಾರದಿಂದ (ಡಿಸೆಂಬರ್ 14) ನಡೆಯಲಿದೆ.


IND vs BAN ನಡುವಿನ ಸರಣಿಯ ಮೊದಲ ಟೆಸ್ಟ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಸರಣಿಯ ಮೊದಲ ಟೆಸ್ಟ್ ಪಂದ್ಯ ಚಿತ್ತಗಾಂಗ್‌ನ ಜಹೂರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ನಡೆಯಲಿದೆ.


ಮೊದಲ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಸರಣಿಯ ಮೊದಲ ಟೆಸ್ಟ್ ಪಂದ್ಯವು 9:00 AM ISTಗೆ ನಡೆಯಲಿದೆ. ಟಾಸ್ ಅರ್ಧ ಗಂಟೆ ಮುಂಚಿತವಾಗಿ ನಡೆಯಲಿದೆ.


ಭಾರತ vs ಬಾಂಗ್ಲಾದೇಶ ನಡುವಿನ ಎರಡು ಟೆಸ್ಟ್ ಪಂದ್ಯಗಳ ಸರಣಿಯ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬೇಕು?
ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ನೇರ ಪ್ರಸಾರವನ್ನು ನೀವು ವೀಕ್ಷಿಸಬಹುದು.


ಭಾರತ vs ಬಾಂಗ್ಲಾದೇಶ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬೇಕು?
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಲೈವ್ ಸ್ಟ್ರೀಮಿಂಗ್ ಅನ್ನು ನೀವು ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದು. ಪಂದ್ಯದ ಲೈವ್ ಅಪ್‌ಡೇಟ್‌ಗಳಿಗಾಗಿ ನಮ್ಮ ವೆಬ್‌ಸೈಟ್ News18 ಕನ್ನಡ ಅನುಸರಿಸಿ.


ಇದನ್ನೂ ಓದಿ: FIFA World Cup 2022: ಫಿಫಾ ವಿಶ್ವಕಪ್​ನಿಂದ ಪೋರ್ಚುಗಲ್ ಔಟ್, ಮೈದಾನದಲ್ಲಿಯೇ ಕಣ್ಣೀರಿಟ್ಟ ರೊನಾಲ್ಡೊ


ಭಾರತ - ಬಾಂಗ್ಲಾದೇಶ ತಂಡ:


ಭಾರತ ತಂಡ: ರೋಹಿತ್ ಶರ್ಮಾ (ಅನುಮಾನ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಕೆಎಸ್ ಭರತ್, ಆರ್. ಅಶ್ವಿನ್, ರವೀಂದ್ರ ಜಡೇಜಾ (ಅನುಮಾನ), ಅಕ್ಷರ್ ಪಟೇಲ್, ಕುಲ್ದೀಪ್, ಶಾರ್ದೂಲ್ ಥಾಕೂರ್, ಜುಯದೇವ್ ಉನಾದ್ಕಟ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.


ಬಾಂಗ್ಲಾದೇಶ ತಂಡ: ಮಹ್ಮುದುಲ್ ಹಸನ್ ಜಾಯ್, ನಜ್ಮುಲ್ ಹಸನ್ ಶಾಂಟೊ, ಮೊಮಿನುಲ್ ಹಕ್, ಯಾಸಿರ್ ಅಲಿ ಚೌಧರಿ, ಮುಷ್ಫೀಕರ್ ರಹಿಮ್, ಶಕಿಬ್ ಅಲ್ ಹಸನ್ (ನಾಯಕ), ಲಿಟ್ಟನ್ ದಾಸ್, ನೂರುಲ್ ಹಸನ್, ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ತಸ್ಕಿನ್ ಅಹ್ಮದ್, ಸೈಯದ್ ಖಲೀದ್ ಅಹ್ಮದ್, ಇಬಾ ಇಸ್ಲಾಮ್ ಇಸ್ಲಾಮ್ , ಝಾಕಿರ್ ಹಸನ್, ರೆಜೌರ್ ರೆಹಮಾನ್ ರಾಜಾ, ಅನಾಮುಲ್ ಹಕ್ ಬಿಜೋಯ್.

Published by:shrikrishna bhat
First published: