ಉಮ್ರಾನ್ ಮಲಿಕ್ ಮತ್ತೊಂದು ಅಂತಾರಾಷ್ಟ್ರೀಯ ಸರಣಿ ಆಡಲು ಸಿದ್ಧರಾಗಿದ್ದಾರೆ. ನಾಳೆಯಿಂದ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಏಕದಿನ ಸರಣಿ (IND vs BAN) ಆರಂಭವಾಗಲಿದೆ. ಕೊನೆಯ ಕ್ಷಣದಲ್ಲಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಮೊಹಮ್ಮದ್ ಶಮಿ (Mohammed Shami) ಗಾಯದ ಸಮಸ್ಯೆಯಿಂದಾಗಿ ಸರಣಿಯಿಂದ ಹೊರಗುಳಿದಿದ್ದಾರೆ. ಶಮಿ ಬದಲಿಗೆ ಉಮ್ರಾನ್ (Umran Malik) ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಯುವ ವೇಗದ ಬೌಲರ್ ಇತ್ತೀಚೆಗಷ್ಟೇ ನ್ಯೂಜಿಲೆಂಡ್ (IND vs NZ) ಸರಣಿಯಲ್ಲಿ ಏಕದಿನ ಕ್ರಿಕೆಟ್ಗೆ ಪದಾರ್ಪಣೆ ಮಾಡಿ 3 ವಿಕೆಟ್ ಪಡೆದಿದ್ದರು. ಗಂಟೆಗೆ 150 ಕಿ.ಮೀ ವೇಗದಲ್ಲಿ ನಿರಂತರವಾಗಿ ಬೌಲಿಂಗ್ ಮಾಡುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಅವರು ಬಾಂಗ್ಲಾದೇಶ ಪ್ರವಾಸದಲ್ಲೂ ಛಾಪು ಮೂಡಿಸಲು ಸಿದ್ಧರಾಗಿದ್ದಾರೆ.
ಶಮಿ ಔಟ್ ಉಮ್ರಾನ್ ಇನ್:
23 ವರ್ಷದ ವೇಗದ ಬೌಲರ್ ಉಮ್ರಾನ್ ಮಲಿಕ್ ಐಪಿಎಲ್ 2022 ರಲ್ಲಿ ಗಂಟೆಗೆ 155 ಕಿಮೀ ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಅವರು ಸನ್ರೈಸರ್ಸ್ ಹೈದರಾಬಾದ್ಗೆ ಉತ್ತಮ ಪ್ರದರ್ಶನ ನೀಡಿದ್ದಾರೆ. ಇದಾದ ಬಳಿಕ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡಕ್ಕೆ ಆಯ್ಕೆಯಾದರು. ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಸ್ಥಾನ ಪಡೆಯದಿದ್ದರೂ, ಹಲವು ತಜ್ಞರು ಅವರ ಸೇರ್ಪಡೆಗೆ ಒಲವು ತೋರಿದ್ದರು. ಇದೀಗ ಬಾಂಗ್ಲಾದೇಶದ ಏಕದಿನ ಸರಣಿಗೆ ಬಿಸಿಸಿಐ ಉಮ್ರಾನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವುದಾಗಿ ಪ್ರಕಟಿಸಿದೆ.
🚨 NEWS 🚨: Umran Malik to replace Mohd. Shami in India’s ODI squad for Bangladesh series. #TeamIndia | #BANvIND
Details 🔽https://t.co/PsDfHmkiJs
— BCCI (@BCCI) December 3, 2022
ಉಮ್ರಾನ್ ಮಲಿಕ್ ಒಡಿಐಗಳ ಹೊರತಾಗಿ ಲಿಸ್ಟ್-ಎ ಕ್ರಿಕೆಟ್ನ ಹೆಚ್ಚಿನ ಅನುಭವವನ್ನು ಹೊಂದಿಲ್ಲ. ಇದುವರೆಗೆ 3 ಏಕದಿನ ಪಂದ್ಯಗಳನ್ನು ಆಡಿರುವ ಅವರು 32ರ ಸರಾಸರಿಯಲ್ಲಿ 3 ವಿಕೆಟ್ ಪಡೆದಿದ್ದಾರೆ. 66 ರನ್ ನೀಡಿ 2 ವಿಕೆಟ್ ಪಡೆದದ್ದು ಅತ್ಯುತ್ತಮ ಪ್ರದರ್ಶನ. ಅವರ ಲಿಸ್ಟ್-ಎ ವೃತ್ತಿಜೀವನವನ್ನು ನೋಡಿದಾಗ, ಅವರು 6 ಪಂದ್ಯಗಳಲ್ಲಿ 5 ವಿಕೆಟ್ ಪಡೆದಿದ್ದಾರೆ. ಆದರೂ ಟಿ20ಯಲ್ಲಿ ಅವರ ಪ್ರದರ್ಶನ ಉತ್ತಮವಾಗಿದೆ. 33 ಟಿ20 ಪಂದ್ಯಗಳಲ್ಲಿ 23ರ ಸರಾಸರಿಯಲ್ಲಿ 45 ವಿಕೆಟ್ ಪಡೆದಿದ್ದಾರೆ. 25 ರನ್ಗೆ 5 ವಿಕೆಟ್ ಪಡೆದದ್ದು ಅತ್ಯುತ್ತಮ ಪ್ರದರ್ಶನ. 3 ಬಾರಿ 4 ವಿಕೆಟ್ ಹಾಗೂ ಒಮ್ಮೆ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
ಇದನ್ನೂ ಓದಿ: IND vs BAN ODI: ಬಾಂಗ್ಲಾ ವಿರುದ್ಧ ಅಬ್ಬರಿಸೋಕೆ ಕಿಂಗ್ ಕೊಹ್ಲಿ ರೆಡಿ, ಹೇಗಿದೆ ಟೀಂ ಇಂಡಿಯಾ ಅಂಕಿಅಂಶ?
ಉಮ್ರಾನ್ ಭಾರತ ಪರ ಇದುವರೆಗೆ 3 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, 2 ವಿಕೆಟ್ ಪಡೆದಿದ್ದಾರೆ. ಅವರ ಫಸ್ಟ್ ಕ್ಲಾಸ್ ಕೆರಿಯರ್ ನೋಡಿ, ಈ ಬೌಲರ್ 6 ಪಂದ್ಯಗಳಲ್ಲಿ 11 ವಿಕೆಟ್ ಪಡೆದಿದ್ದಾರೆ.
IND vs BAN ಏಕದಿನ ಸರಣಿಗೆ ತಂಡ:
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶಿಖರ್ ಧವನ್, ಇಶಾನ್ ಕಿಶನ್, ರಿಷಭ್ ಪಂತ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಸಿರಾಜ್, ಶಾರ್ದೂಲ್ ಠಾಕೂರ್, ಯಾಸ್ ದಯಾಲ್, ಶಾಬಾಜ್ ಅಹ್ಮದ್, ದೀಪಕ್ ಚಹಾರ್, ಉಮ್ರಾನ್ ಮಲಿಕ್.
ಬಾಂಗ್ಲಾದೇಶ ತಂಡ: ಲಿಟನ್ ದಾಸ್ (ನಾಯಕ), ಅನಾಮುಲ್ ಹಕ್ ಬಿಜೋಯ್, ಶಕಿಬ್ ಅಲ್ ಹಸನ್, ಮುಷ್ಫೀಕುರ್ ರಹೀಮ್, ಅಫೀಫ್ ಹುಸೇನ್, ಯಾಸಿರ್ ಅಲಿ, ಮೆಹಿದಿ ಹಸನ್ ಮಿರಾಜ್, ಮುಸ್ತಫಿಜುರ್ ರೆಹಮಾನ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಎಬಾಡೋತ್ ಹುಸೇನ್, ನಸ್ಮದ್, ನಸ್ಮದ್ ಶಾಂತೋ, ನೂರುಲ್ ಹಸನ್ ಸೋಹನ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ